Karnataka Rains: ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.1ರಿಂದ ಮಳೆ, ಯೆಲ್ಲೋ ಅಲರ್ಟ್
ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಆಗಲಿದ್ದು, ಡಿಸೆಂಬರ್ 1 ರಿಂದ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 14ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತದ ಪ್ರಭಾವವು ಕರ್ನಾಟಕದ ಮೇಲೂ ಆಗಲಿದ್ದು, ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶ್ರೀಲಂಕಾದ ಟ್ರಿಂಕೋಮಲಿಯ ಆಗ್ನೇಯಕ್ಕೆ 310 ಕಿಮೀ, ಪುದುಚೇರಿಯ ದಕ್ಷಿಣ ಆಗ್ನೇಯಕ್ಕೆ 710 ಕಿಮೀ ಮತ್ತು ಚೆನ್ನೈನಿಂದ 800 ಕಿಮೀ ಆಗ್ನೇಯಕ್ಕೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ. ವಾಯುಭಾರ ಕುಸಿತದಿಂದ ಉತ್ತರ-ವಾಯುವ್ಯದ ಕಡೆಗೆ ಚಲಿಸುತ್ತದೆ, ಚಂಡಮಾರುತವಾಗಿ ರೂಪುಗೊಂಡು ಮುಂದಿನ ಎರಡು ದಿನಗಳಲ್ಲಿ ತಮಿಳುನಾಡಿನ ಕರಾವಳಿ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ ಮಳೆ
ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್ನಲ್ಲಿ ಒಣಹವೆ ಮುಂದುವರೆಯಲಿದೆ. ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ನಿನ್ನೆಗೆ ಹೋಲಿಸಿದರೆ ಕೊಂಚ ಕಡಿಮೆಯಾಗಿದೆ. ಎಚ್ಎಎಲ್ನಲ್ಲಿ 24.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ