Karnataka Rains: ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.1ರಿಂದ ಮಳೆ, ಯೆಲ್ಲೋ ಅಲರ್ಟ್​

ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಆಗಲಿದ್ದು, ಡಿಸೆಂಬರ್ 1 ರಿಂದ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 14ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.1ರಿಂದ  ಮಳೆ, ಯೆಲ್ಲೋ ಅಲರ್ಟ್​
ಮಳೆ
Image Credit source: PTI

Updated on: Nov 29, 2024 | 7:40 AM

ಫೆಂಗಲ್ ಚಂಡಮಾರುತದ ಪ್ರಭಾವವು ಕರ್ನಾಟಕದ ಮೇಲೂ ಆಗಲಿದ್ದು, ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈಗಾಗಲೇ ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶ್ರೀಲಂಕಾದ ಟ್ರಿಂಕೋಮಲಿಯ ಆಗ್ನೇಯಕ್ಕೆ 310 ಕಿಮೀ, ಪುದುಚೇರಿಯ ದಕ್ಷಿಣ ಆಗ್ನೇಯಕ್ಕೆ 710 ಕಿಮೀ ಮತ್ತು ಚೆನ್ನೈನಿಂದ 800 ಕಿಮೀ ಆಗ್ನೇಯಕ್ಕೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ. ವಾಯುಭಾರ ಕುಸಿತದಿಂದ ಉತ್ತರ-ವಾಯುವ್ಯದ ಕಡೆಗೆ ಚಲಿಸುತ್ತದೆ, ಚಂಡಮಾರುತವಾಗಿ ರೂಪುಗೊಂಡು ಮುಂದಿನ ಎರಡು ದಿನಗಳಲ್ಲಿ ತಮಿಳುನಾಡಿನ ಕರಾವಳಿ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ ಮಳೆ

ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್​ನಲ್ಲಿ ಒಣಹವೆ ಮುಂದುವರೆಯಲಿದೆ. ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ನಿನ್ನೆಗೆ ಹೋಲಿಸಿದರೆ ಕೊಂಚ ಕಡಿಮೆಯಾಗಿದೆ. ಎಚ್​ಎಎಲ್​ನಲ್ಲಿ 24.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us