Festive Season: ಖಾಸಗಿ ಬಸ್​ ಮಾಲೀಕರಿಂದ ದುಪ್ಪಟ್ಟು ಟಿಕೆಟ್ ದರ ನಿಗದಿ; ಅಖಾಡಕ್ಕಿಳಿದ ತನಿಖಾ ತಂಡ

Bus Ticket Price Hike: ದಸರಾ, ದೀಪಾವಳಿ ವಿವಿಧ ಹಬ್ಬ ಹರಿದಿನಗಳ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ತಮ್ಮ ಊರುಗಳಿಗೆ ಹಿಂದಿರುಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ ಬಸ್​ಗಳು ಟಿಕೆಟ್ ದರ ಹೆಚ್ಚಳ ಮಾಡಿದ್ದು, ಖಾಸಗಿ ಬಸ್ ಮಾಲೀಕರ ಸಂಘಟನೆಗಳ ಜೊತೆ ಸಾರಿಗೆ ಇಲಾಖೆ ಸಭೆ ನಡೆಸುತ್ತಿದೆ.

Festive Season: ಖಾಸಗಿ ಬಸ್​ ಮಾಲೀಕರಿಂದ ದುಪ್ಪಟ್ಟು ಟಿಕೆಟ್ ದರ ನಿಗದಿ; ಅಖಾಡಕ್ಕಿಳಿದ ತನಿಖಾ ತಂಡ
ಖಾಸಗಿ ಬಸ್​ ಮಾಲೀಕರಿಂದ ದುಪ್ಪಟ್ಟು ಟಿಕೆಟ್ ದರ ನಿಗದಿ ಹಿನ್ನೆಲೆ ಅಖಾಡಕ್ಕಿಳಿದ ತನಿಖಾ ತಂಡ
Follow us
TV9 Web
| Updated By: Rakesh Nayak Manchi

Updated on:Sep 29, 2022 | 2:38 PM

ಬೆಂಗಳೂರು: ವಾರಾಂತ್ಯದಲ್ಲಿ ಹಾಗೂ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್​ಗಳು ಟಿಕೆಟ್ ದರವನ್ನು ಹೆಚ್ಚಿಳ (Private Bus Ticket Price Hike) ಮಾಡುವುದು ಸಾಮಾನ್ಯವಾಗಿದೆ. ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ದಸರಾ, ದೀಪಾವಳಿ ಸೇರಿದಂತೆ ಅನೇಕ ಹಬ್ಬಗಳು, ಆಚರಣೆಗಳು ಬರುತ್ತಿದ್ದು, ಇವುಗಳಿಗೆಲ್ಲಾ ಸರ್ಕಾರಿ ರಜೆಗಳು ಕೂಡ ಇವೆ. ಈ ನಿಟ್ಟಿನಲ್ಲಿ ನೌಕರರು ತಮ್ಮತಮ್ಮ ಊರುಗಳಿಗೆ ತೆರಳಲು ಹೆಚ್ಚಿನ ಸಂಖ್ಯೆಯಲ್ಲಿ ಕಾಯುತ್ತಿದ್ದಾರೆ. ಈ ನಡುವೆ ಖಾಸಗಿ ಬಸ್​ ಮಾಲೀಕರು ಪ್ರಯಾಣದ ಟಿಕೆಟ್ ದರವನ್ನು ಗಗನಕ್ಕೇರಿಸಿದ್ದು, ಪ್ರಯಾಣಿಕರು ಹೆಚ್ಚಿನ ಹಣ ಕೊಟ್ಟು ತಮ್ಮ ಊರುಗಳಿಗೆ ಮರಳುವ ಸ್ಥಿತಿ ಬಂದಿದೆ. ಇದನ್ನು ಗಮನಿಸಿದ ಸಾರಿಗೆ ಇಲಾಖೆ, ಖಾಸಗಿ ಬಸ್ ಮಾಲೀಕರ ಸಂಘಟನೆಗಳ ಜೊತೆ ಮಹತ್ವದ ಸಭೆ ನಡೆಸಿದೆ. ಮಧ್ಯವರ್ತಿಗಳ ಕೃತ್ಯದಿಂದ ದುಪ್ಪಟ್ಟು ಹಣ ವಸೂಲಿ ಮಾಡುವುದು ತಿಳಿದು ಬಂದ ಹಿನ್ನೆಲೆ ಇದಕ್ಕೆ ಕಡಿವಾಣ ಹಾಕಲು ಇಂದಿನಿಂದ ತನಿಖಾ ತಂಡ ಅಖಾಡಕ್ಕಿಳಿಯಲಿದೆ.

ಅಕ್ಟೋಬರ್ ತಿಂಗಳಲ್ಲಿ ದಸರಾ, ದೀಪಾವಳಿ, ಗಾಂಧಿಜಯಂತಿ, ಆಯುಧಪೂಜೆ, ವಿಜಯದಶಮಿ, ದೀಪಾವಳಿ, ವಾರಾಂತ್ಯದ ಹಿನ್ನಲೆ ಸಾಲು ಸಾಲು ರಜೆ ಇದ್ದು, ಊರುಗಳಿಗೆ ತೆರಳಲು ಜನರು ಸಿದ್ದವಾಗಿದ್ದಾರೆ. ಈ ನಡುವೆ ಖಾಸಗಿ ಬಸ್ ಮಾಲೀಕರು ದುಪಟ್ಟು ಟಿಕೆಟ್ ದರ ನಿಗದಿ ಪಡಿಸಿರುವ ಹಿನ್ನೆಲೆ ಖಾಸಗಿ ಬಸ್ ಮಾಲೀಕರ ಸಂಘಟನೆಗಳ ಜೊತೆ ಸಾರಿಗೆ ಇಲಾಖೆ ಸಭೆ ನಡೆಸಲಾಗಿದೆ. ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ, ಅಪರ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿದ ಸಾರಿಗೆ ಅಪರ ಆಯುಕ್ತ ಮಲ್ಲಿಕಾರ್ಜುನ್, ಸಾಲು ಸಾಲು ರಜೆ ಹಿನ್ನಲೆ ಖಾಸಗಿ ಬಸ್ ಮಾಲಿಕರು ದುಪ್ಪಟ್ಟು ದರ ನಿಗದಿ ಮಾಡುವ ಬಗ್ಗೆ ದೂರು ಬಂದಿತ್ತು. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಇಂದು ಮಹತ್ವದ ಸಭೆ ನಡೆಸಲಾಗಿದೆ. ಖಾಸಗಿ ಬಸ್ ಮಾಲಿಕರನ್ಬು ಸಭೆ ಕರೆದು ದರ ನಿಗದಿ ಮಾಡುವ ಬಗ್ಗೆ ಮಾಹಿತಿ ನೀಡಲಾಗಿದೆ. ಯಾವುದೇ ಕಾರಣಕ್ಕೂ ಎರಡು ಪಟ್ಟು ಮೂರು ಪಟ್ಟು ದರ ನಿಗದಿ ಮಾಡಬಾರದು. ಜನ ತಮ್ಮ ಊರುಗಳಿಗೆ ನೆಮ್ಮದಿಯಿಂದ ತೆರಳುವಂತಾಗಬೇಕು. ಮಧ್ಯವರ್ತಿಗಳ ಕೃತ್ಯದಿಂದ ದುಪ್ಪಟ್ಟು ಹಣ ವಸೂಲಿ ಮಾಡೋದು ತಿಳಿದುಬಂದಿದೆ.  ಇದಕ್ಕೆ ಕಡಿವಾಣ ಹಾಕುವ ಬಗ್ಗೆ ಚರ್ಚೆ ಮಾಡಲಾಗಿದೆ. ಇದರೊಂದಿಗೆ ಇಂದಿನಿಂದ ತನಿಖಾ ತಂಡ ಕೂಡ ತನಿಖೆ ಆರಂಭಿಸಲಿದೆ. ಅನಧಿಕೃತ ಸರಕುಗಳನ್ನು ತುಂಬುವುದಕ್ಕು ಬ್ರೇಕ್ ಹಾಕಲಾಗುತ್ತದೆ. ಸಾರ್ವಜನಿಕರ ಸುರಕ್ಷತೆಗಾಗಿ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ತಯಾರಿ ಮಾಡುತ್ತಿದೆ ಎಂದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Thu, 29 September 22

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ