ಭ್ರೂಣ ಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕುಮಾರಸ್ವಾಮಿ ಆಗ್ರಹ

ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ನಗರದ ಬೈಯ್ಯಪ್ಪನಹಳ್ಳಿ ಪೊಲೀಸರು ಭೇದಿಸಿದ್ದರು. ಕಳೆದ ಮೂರು ತಿಂಗಳ ಅವಧಿಯಲ್ಲಿ ಆರೋಪಿಗಳು 342 ಭ್ರೂಣ ಹತ್ಯೆ ಮಾಡಿದ್ದ ವಿಚಾರ ಬೆಳಕಿಗೆ ಬಂದಿತ್ತು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಲ್ಲೆಡೆ ಆಗ್ರಹಗಳು ಕೇಳಿಬರುತ್ತಿವೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಭ್ರೂಣ ಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕುಮಾರಸ್ವಾಮಿ ಆಗ್ರಹ
ಹೆಚ್​ಡಿ ಕುಮಾರಸ್ವಾಮಿ
Edited By: Rakesh Nayak Manchi

Updated on: Nov 30, 2023 | 2:35 PM

ರಾಮನಗರ, ನ.30: ಬೆಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ (Feticide) ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಈಗಲೂ ಹೆಣ್ಣುಮಕ್ಕಳ ಬಗ್ಗೆ ಇಂತಹ ಭಾವನೆ ಇರುವುದು ದುರಂತ ಎಂದರು.

ಯಾವ ಮಗು ಹುಟ್ಟಲಿದೆ ಅಂತಾ 4-5 ತಿಂಗಳ ಮೊದಲೇ ತಿಳಿಯಬಹುದು. ಅಂತಹ ತಂತ್ರಜ್ಞಾನ ಈಗ ಇದೆ. ‌ಇಂದಿನ ಯುಗದಲ್ಲೂ ಹೆಣ್ಣು ಮಕ್ಕಳ ಬಗ್ಗೆ ಅಂತಹ ಭಾವನೆ ಇದ್ದು, ಅದನ್ನು ಹೋಗಲಾಡಿಸಬೇಕು ಎಂದರು. ತಂದೆ, ತಾಯಿಗೆ ಹೆಣ್ಮಕ್ಕಳು ನೀಡುವ ಗೌರವ ಗಂಡು ಮಕ್ಕಳು ಕೊಡಲ್ಲ. ಹಾಗಂತ ಗಂಡು ಮಕ್ಕಳು ನನ್ನ ದೂರುವುದು ಬೇಡ, ನಾನು‌‌ ನೋಡಿದ್ದೇನೆ, ನನಗೆ ಅನುಭವ ಇದೆ. ಹೆಣ್ಣುಮಕ್ಕಳು ಹುಟ್ಟಿದರೆ ಆ ಕುಟುಂಬ ಉತ್ತಮ ಬದುಕು ಕಾಣಲು ಸಾಧ್ಯವಿದೆ ಎಂದರು.

ಇದನ್ನೂ ಓದಿ: ಗುಪ್ತ್​-ಗುಪ್ತ್ ಮಾತುಕತೆ: ವಿಜಯೇಂದ್ರ ಭೇಟಿ ಬಳಿಕ ಕುಮಾರಸ್ವಾಮಿ ಹೇಳಿದ್ದೇನು?

ಅತಿಥಿ ಉಪನ್ಯಾಸಕರ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಸರಕಾರ ಶಾಲಾ‌ಶಿಕ್ಷಕರ ನೇಮಕ ಮಾಡುತ್ತಿಲ್ಲ. ಸರಿಯಾದ ‌ಲ್ಯಾಬ್ ವ್ಯವಸ್ಥೆಯೂ ಇಲ್ಲ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುವ ಪರಿಸ್ಥಿತಿ ಇದೆ ಎಂದರು.

ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ಕೊಡಬೇಕು. ಸರಕಾರ ಅದನ್ನೇ ಕೊಡುತ್ತಿಲ್ಲ. ಅದೇನೋ ಐದು ಗ್ಯಾರೆಂಟಿ ಅಂತಾರೆ. ಮಹಿಳೆಯರಿಗೆ ಎರಡು‌ ಸಾವಿರ ಕೊಡುತ್ತಾ ಇದ್ದಾರೆ, ಕೊಡಿ ಸಂತೋಷ. ಆದರೆ ನಿರಂತರ ಕೋಡದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 30 November 23

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us