AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟ, ಯಾರಿಗೆ ಬೀಳುತ್ತೆ ವಿಜಯ ಮಾಲೆ?

ಇಂದು ಹೊರಬೀಳಲಿರೋ ರಾಜ್ಯದ 58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದತ್ತಲೇ ಮೂರೂ ಪಕ್ಷಗಳ ಚಿತ್ತ ನೆಟ್ಟಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಸ್ಥಳೀಯ ಸಂಸ್ಥೆಗಳ ಪಲಿತಾಂಶ ನೇರ ಪರಿಣಾಮ ಬೀರದಿದ್ರೂ, ಸ್ಥಳೀಯ ಮಟ್ಟದಲ್ಲಿ ಪಕ್ಷದ ಬಲಾಬಲ ಇದರ ಆಧಾರದಲ್ಲೇ ನಿರ್ಧಾರವಾಗಲಿದೆ.

58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟ, ಯಾರಿಗೆ ಬೀಳುತ್ತೆ ವಿಜಯ ಮಾಲೆ?
58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟ, ಯಾರಿಗೆ ಬೀಳುತ್ತೆ ವಿಜಯ ಮಾಲೆ?
TV9 Web
| Edited By: ಆಯೇಷಾ ಬಾನು|

Updated on: Dec 30, 2021 | 8:36 AM

Share

ಬೆಂಗಳೂರು: ರಾಜ್ಯದಲ್ಲಿ ಡಿ.27ರಂದು ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಇದು ಮೂರೂ ಪಕ್ಷಗಳಿಗೆ ಬಹಳ ಮುಖ್ಯವಾಗಿದೆ. ತಳಮಟ್ಟದಲ್ಲಿ ಪಕ್ಷದ ಬಲಾಬಲವನ್ನು ಈ ಫಲಿತಾಂಶವೇ ಹೇಳಲಿರೋದ್ರಿಂದ, ಬಿಜೆಪಿ, ಕಾಂಗ್ರೆಸ್ ನಡುವೆ ನಾನಾ ಲೆಕ್ಕಾಚಾರಗಳು ಶುರುವಾಗಿವೆ. ಆದ್ರೆ ಜೆಡಿಎಸ್ ಮಾತ್ರ ಈ ಬಾರಿಯೂ ತನ್ನದೇ ಆದ ಗೇಮ್ ಪ್ಲ್ಯಾನ್ನಲ್ಲಿದೆ.

ಲೋಕಲ್ವಾರ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಯಾರ ಕೈ ಮೇಲಾಗುತ್ತೆ, ಯಾರು ಮಕಾಡೆ ಮಲಗ್ತಾರೇ ಅನ್ನೋ ಲೆಕ್ಕಾಚಾರ ನಡೀತಿದೆ. ಪರಿಷತ್ ಕದನದ ಬಳಿಕ ನಡೆದಿರೋ ಸ್ಥಳೀಯ ಸಂಸ್ಥೆಗಳ ಫಲಿತಾಂಶದತ್ತ ಪಕ್ಷಗಳ ಗಮನ ಕೇಂದ್ರೀಕೃತವಾಗಿದೆ.

‘ಲೋಕಲ್ ಲಡಾಯಿ’ಯಲ್ಲಿ ಯಾರಿಗೆ ಬೀಳುತ್ತೆ ವಿಜಯ ಮಾಲೆ? ಇಂದು ಹೊರಬೀಳಲಿರೋ ರಾಜ್ಯದ 58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದತ್ತಲೇ ಮೂರೂ ಪಕ್ಷಗಳ ಚಿತ್ತ ನೆಟ್ಟಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಸ್ಥಳೀಯ ಸಂಸ್ಥೆಗಳ ಪಲಿತಾಂಶ ನೇರ ಪರಿಣಾಮ ಬೀರದಿದ್ರೂ, ಸ್ಥಳೀಯ ಮಟ್ಟದಲ್ಲಿ ಪಕ್ಷದ ಬಲಾಬಲ ಇದರ ಆಧಾರದಲ್ಲೇ ನಿರ್ಧಾರವಾಗಲಿದೆ. ಹೀಗಾಗಿ ಲೋಕಲ್ ಫೈಟ್ನ ರಿಸಲ್ಟ್ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರೂ ಪಕ್ಷಗಳಿಗೂ ಪ್ರತಿಷ್ಠೆ ಪ್ರಶ್ನೆಯಾಗಿದೆ.

‘ಲೋಕಲ್ ಸಮರ’ದಲ್ಲಿ ಯಾರಿಗೆ ಜಯ? ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಡುವೆ ಚುನಾವಣೆ ನಡೆದಿದ್ದ ಕಾರಣ ಪ್ರಚಾರದಲ್ಲಿ ಪಕ್ಷಗಳ ಪ್ರಮುಖ ನಾಯಕರೇ ಭಾಗಿಯಾಗಿರಲಿಲ್ಲ. ಕೇವಲ 3-4 ಸಚಿವರಿಂದಷ್ಟೇ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ್ರು. ಹೀಗಾಗಿ ಸ್ಥಳೀಯ ನಾಯಕರ ಮುತುವರ್ಜಿಯಲ್ಲೇ ಚುನಾವಣೆ ನಡೆದಿತ್ತು. ಇನ್ನು ರಾಜ್ಯದಲ್ಲಿ ಆಡಳಿತ ಪಕ್ಷವಾಗಿರೋ ಬಿಜೆಪಿ, ಸಹಜವಾಗಿ ಹೆಚ್ಚು ಸ್ಥಾನ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ವಿಪಕ್ಷ ಕಾಂಗ್ರೆಸ್ ಕೂಡ ಹೆಚ್ಚು ಸ್ಥಾನ ಗೆದ್ದು ಪಕ್ಷ ಬಲವರ್ಧನೆ ನಿಟ್ಟಿನಲ್ಲಿ ಪ್ಲ್ಯಾನ್ ಮಾಡಿಕೊಳ್ತಿದೆ. ಜೆಡಿಎಸ್ ಮಾತ್ರ ಈ ಬಾರಿಯೂ ಅಧಿಕಾರ ಹಿಡಿಯುವಲ್ಲಿ ಕಿಂಗ್ಮೇಕರ್ ಆಗೋ ಲೆಕ್ಕಾಚಾರದಲ್ಲಿದೆ ಎನ್ನಲಾಗ್ತಿದೆ.

ಒಟ್ನಲ್ಲಿ ಇಂದಿನ ಚುನಾವಣಾ ಫಲಿತಾಂಶದ ಮೇಲೆ ಮೂರೂ ಪಕ್ಷಗಳ ಚಿತ್ತ ನೆಟ್ಟಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಯಾರ ಪಾರಮ್ಯ ಎಂಬುದಕ್ಕಷ್ಟೇ ಸೀಮಿತವಾಗಲಿರೋ ಚುನಾವಣೆಯಲ್ಲಿ, ಯಾರಿಗೆ ವಿಜಯ ಮಾಲೆ ಬೀಳುತ್ತೆ ಅನ್ನೋದು ಇನ್ನು ಕೆಲ ಸಮಯದಲ್ಲಿಯೇ ಗೊತ್ತಾಗಲಿದೆ.

ಇದನ್ನೂ ಓದಿ: Happiness Strategies: ಸದಾ ಖುಷಿಯಾಗಿರಲು ಈ ಮೂರು ನಿಯಮಗಳನ್ನು ಅಳವಡಿಸಿಕೊಳ್ಳಿ: ನಗುತ್ತಿರಿ

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ