ಪಕ್ಷದ ಧ್ವಜಕ್ಕಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ.. ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಟ್ಟ ಪೊಲೀಸರು

| Updated By: Skanda

Updated on: Apr 08, 2021 | 7:40 AM

ಅಧಿಕಾರಿಗಳ ಮೌನವೇ ಎರಡೂ ಪಕ್ಷಗಳ ಗಲಾಟೆಗೆ ಹಾದಿ ಮಾಡಿಕೊಟ್ಟಿದೆಯಂತಿದೆ. ಕೆಲವರು ಒಂದು ಪಕ್ಷದ ಧ್ವಜ‌ ತೆರವು ಮಾಡಲು ಮುಂದಾಗಿದ್ದಾರೆ. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಗಲಾಟೆ ಶುರುವಾಗಿತ್ತು. ಇದೇ ವೇಳೆ ಗಲಾಟೆಯಾದ ಗ್ರಾಮಕ್ಕೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ವಿಜಯೇಂದ್ರ ಪ್ರಚಾರಕ್ಕೆ ಬಂದಿದ್ರು.

ಪಕ್ಷದ ಧ್ವಜಕ್ಕಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ.. ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಟ್ಟ ಪೊಲೀಸರು
ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ
Follow us on

ರಾಯಚೂರು: ಚುನಾವಣಾ ಅಧಿಕಾರಿಗಳ ಎಡವಟ್ಟಿನಿಂದ ಧ್ವಜ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದ್ದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಸಿಂಧನೂರು ತಾಲೂಕಿನ ಬಪ್ಪೂರು ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಹಾಗೂ ನೀರಿನ ಟ್ಯಾಂಕ್ ಮೇಲೆ ಬಿಜೆಪಿ ಮತ್ತು ಕಾಂಗ್ರೆಸ್​ನ ಎರಡೂ ಪಕ್ಷಗಳ ಧ್ವಜಗಳನ್ನು ಗ್ರಾಮಸ್ಥರು ಕಟ್ಟಿದ್ದರು. ಆದ್ರೆ ಇದಕ್ಕೆ ತಲೆಕೆಡಿಸಿಕೊಳ್ಳದ ಚುನಾವಣಾ ಅಧಿಕಾರಿಗಳು ಮೌನ ತಾಳಿದ್ರು.

ಅಧಿಕಾರಿಗಳ ಮೌನವೇ ಎರಡೂ ಪಕ್ಷಗಳ ಗಲಾಟೆಗೆ ಹಾದಿ ಮಾಡಿಕೊಟ್ಟಂತಾಗಿದೆ. ಕೆಲವರು ಒಂದು ಪಕ್ಷದ ಧ್ವಜ‌ ಮಾತ್ರ ತೆರವು ಮಾಡಲು ಮುಂದಾಗಿದ್ದಾರೆ. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಗಲಾಟೆ ಶುರುವಾಗಿತ್ತು. ಇದೇ ವೇಳೆ ಗಲಾಟೆಯಾದ ಗ್ರಾಮಕ್ಕೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ವಿಜಯೇಂದ್ರ ಪ್ರಚಾರಕ್ಕೆ ಬಂದಿದ್ರು. ವಿಜಯೇಂದ್ರ ಪ್ರಚಾರದ ಸಮಯದಲ್ಲಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ಧ್ವಜ ಪ್ರದರ್ಶನ ಮಾಡಿದ್ದಾರೆ. ಬಿಜೆಪಿ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಧ್ವಜ ಪ್ರದರ್ಶನ ಮಾಡಿದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದವಾಗಿದೆ.

ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಈ ಸಂದರ್ಭದಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಸಮಾಧಾನಪಡಿಸಿ ಗಲಾಟೆ ನಿಲ್ಲಿಸಿದ್ದಾರೆ. ಅನೇಕ ಕಡೆಗಳಲ್ಲಿ ಕಟ್ಟಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಧ್ವಜಗಳನ್ನು ಪೊಲೀಸರು ತೆರವು ಮಾಡಿದ್ದಾರೆ.

ಅನೇಕ ಕಡೆಗಳಲ್ಲಿ ಕಟ್ಟಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಧ್ವಜಗಳನ್ನು ಪೊಲೀಸರು ತೆರವು ಮಾಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್​: ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್​

(Fight Between Congress And BJP Over party Flag Issue in Raichur)