ತುಮಕೂರು:ಜಾತ್ರಾ ಮಹೋತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ನಡೆದಿದೆ. ಇಡಗೂರು ಗ್ರಾಮದ ಕೆಂಪಮ್ಮನ ದೇವರ ಜಾತ್ರೆಯಲ್ಲಿ ದೇವರ ಮೆರವಣಿಗೆ ವಿಚಾರಕ್ಕೆ ಗಲಾಟೆ ನಡೆದಿದ್ದು, ವ್ಯಕ್ತಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.
ಗ್ರಾಮದಲ್ಲಿ ತಡರಾತ್ರಿ ಮೆರವಣಿಗೆ ಇದ್ದು, ಈ ವೇಳೆ ಆನಂದ್ (32) ಮತ್ತು ಜ್ಯೋತಿ ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದೆ. ಗ್ರಾಮದ ಯತೀಶ್, ಶ್ರೀನಿವಾಸ, ಜಬೀವುಲ್ಲಾ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ. ಪೊಲೀಸರು ಸ್ಥಳದಲ್ಲಿ ಇದ್ದರೂ ಅವರ ಎದುರೇ ಚಾಕು ತೆಗೆದು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗ್ರಾಮದ ನಾಗೇಶ್ ಮತ್ತೆ ಯಾವಾಗ ದೇವರ ಮೆರವಣಿಗೆ ಎಂದು ಕೇಳಿದ್ದಕ್ಕೆ ನೀನು ಯಾರು ಕೇಳೊಕ್ಕೆ ಎಂದ ಯತೀಶ್ ಹಲ್ಲೆಗೆ ಮುಂದಾಗಿದ್ದಾರೆ ಎಂದು ದೂರಲಾಗಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ನಾಗರಾಜು ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಇದ್ದರೂ ಗಲಾಟೆ ನಡೆದಿದ್ದು, ಪೊಲೀಸರ ನಿರ್ಲಕ್ಷ್ಯದ ಬಗ್ಗೆಯೂ ಆರೋಪ ಮಾಡಲಾಗಿದೆ.
ಇದನ್ನೂ ಓದಿ:
ಕೊರೊನಾ ಭೀತಿ ನಡುವೆಯೂ ಕೂಲಹಳ್ಳಿಯಲ್ಲಿ ಅದ್ದೂರಿ ಜಾತ್ರೆ: ರಥೋತ್ಸವದ ಸೊಬಗನ್ನು ಕಣ್ತುಂಬಿಕೊಂಡ ಭಕ್ತಸಾಗರ
(fighting between villagers at the fair of temple in tumkur)