ಹಿಜಾಬ್ ವಿಚಾರದಲ್ಲಿ ಹೋರಾಟ ಮಾಡುವುದು ಸರಿಯಲ್ಲ; ಪದ್ಮಶ್ರೀ ಪ್ರಶಸ್ತಿ ವಿಜೇತ ಅಬ್ದುಲ್ ಖಾದರ್ ಹೇಳಿಕೆ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 18, 2022 | 2:02 PM

ಹೈಕೋರ್ಟ್ ತೀರ್ಪಿನ ಮಧ್ಯೆಯೂ ಮತ್ತೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದಿದ್ದಾರೆ. ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಘಟನೆ ನಡೆದಿದೆ.

ಹಿಜಾಬ್ ವಿಚಾರದಲ್ಲಿ ಹೋರಾಟ ಮಾಡುವುದು ಸರಿಯಲ್ಲ; ಪದ್ಮಶ್ರೀ ಪ್ರಶಸ್ತಿ ವಿಜೇತ ಅಬ್ದುಲ್ ಖಾದರ್ ಹೇಳಿಕೆ
ಪದ್ಮಶ್ರೀ ಪ್ರಶಸ್ತಿ ವಿಜೇತ ಅಬ್ದುಲ್ ಖಾದರ್ ನಡುಕಟ್ಟಿ
Follow us on

ಹುಬ್ಬಳ್ಳಿ: ಹರಾಮ್ ಇದ್ದದ್ದನ್ನ ಸಹ ಹಲಾಲ್ ಎಂದು ಭಾವಿಸಿಕೊಂಡು ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಹುಬ್ಬಳ್ಳಿಯಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತ ಅಬ್ದುಲ್ ಖಾದರ್ ನಡುಕಟ್ಟಿನ ಹೇಳಿಕೆ ನೀಡಿದ್ದಾರೆ. ಹಿಜಾಬ್ (Hijab) ಪರ ಹೈಕೋರ್ಟ್ ತೀರ್ಪು ಹಿನ್ನಲೆ ಹೇಳಿಕೆ ನೀಡಿದ್ದು, ಮಹಮ್ಮದ್ ಪೈಗಂಬರರರು ನಾವು ಯಾವ ದೇಶದಲ್ಲಿ ಇರುತ್ತೆವೆ ಆ ದೇಶದ ನಿಯಮಗಳನ್ನು ಪಾಲನೆ ಮಾಡಬೇಕೆಂಬ ಸಂದೇಶ ನೀಡಿದ್ದಾರೆ. ರಾಜ್ಯದ ಉಚ್ಚನ್ಯಾಯಾಲಯ ನೀಡಿರುವ ಆದೇಶ ಪಾಲನೆ ಮಾಡಬೇಕು. ನಮ್ಮ ನೆಲದ ಕಾನೂನಿಗೆ ಗೌರವ ನೀಡಬೇಕು. ಹಿಜಾಬ್ ವಿಚಾರದಲ್ಲಿ ಹೋರಾಟ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹಿಜಾಬ್​ಗಾಗಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು:

ಮಂಗಳೂರು: ಹೈಕೋರ್ಟ್ ತೀರ್ಪಿನ ಮಧ್ಯೆಯೂ ಮತ್ತೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದಿದ್ದಾರೆ. ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಘಟನೆ ನಡೆದಿದೆ. ಪಿಯು ಪೂರ್ವ ಸಿದ್ದತಾ ಪರೀಕ್ಷೆಗೆ ಹಾಜರಾಗಲು ಹಿಜಾಬ್ ಧರಿಸಿ ಆಗಮಿಸಿದ್ದು, ಕಾಲೇಜು ಆಡಳಿತ ತರಗತಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಆಕ್ರೋಶಗೊಂಡಿದ್ದಾರೆ. ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ರೀತಿ ಕಾಲೇಜು ಬಳಿ ಜಮಾವಣೆಗೊಂಡಿದ್ದು, ಬಳಿಕ ಮುಸ್ಲಿಂ ಸಮುದಾಯದ ನಾಯಕರ ಮೂಲಕ ವಿದ್ಯಾರ್ಥಿಗಳ ಮನವೊಲಿಕೆ ಮಾಡಲಾಯಿತು. ಕಾಲೇಜು ಆಡಳಿತ ಮಂಡಳಿ ಕೊನೆಗೂ ಮನವೊಲಿಸಿ ಕ್ಯಾಂಪಸ್​ನಿಂದ ಹೊರಕಳುಹಿಸಿದ್ದಾರೆ. ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿಗಳು ಮನೆಗೆ ವಾಪಾಸ್ ತೆರಳಿದ್ದಾರೆ.

ಇದನ್ನೂ ಓದಿ:

Hampi: ವಿಶ್ವ ಪರಂಪರೆಯ ತಾಣವಾದ ವಿಜಯನಗರ ಸಾಮ್ರಾಜ್ಯದ ಮೇಲೆ ಕಣ್ಣಿಟ್ಟ ಜಿಯೋ! ಹಂಪಿಯಲ್ಲಿನ್ನು ನೈಜ 4G ಡಿಜಿಟಲ್ ಲೈಫ್‌!

ಮದುವೆಗೆ ಒತ್ತಾಯಿಸಿದ್ದಕ್ಕೆ ಯುವತಿ ಮೇಲೆ ಪೆಟ್ರೋಲ್ ಸುರಿದು ಹತ್ಯೆ; ಕೇಸ್ ದಾಖಲಿಸಿ ತನಿಖೆಗೆ ಮುಂದಾದ ಬೆಂಗಳೂರು ಪೊಲೀಸರು