AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮಣ್ಣಲ್ಲಿ ಮಣ್ಣಾದ ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿ

ಪುಲ್ವಾಮದಲ್ಲಿ ಹೋರಾಡುತ್ತಾ ಹುತಾತ್ಮನಾದ ಯೋಧ ಕಾಶಿರಾಯ ಅವರ ಅಂತ್ಯಕ್ರಿಯೆ ನಡೆಯಿತು. ಅಪಾರ ಜನಸ್ತೋಮ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿತು. ಪತಿ ಕಾಶೀರಾಯ ಅವರನ್ನು ಕಳೆದುಕೊಂಡು ಅಪಾರ ದುಃಖದಲ್ಲಿದ್ದರೂ ಅವರ ಪತ್ನಿ ಸಂಗೀತಾ, ಮಗ ಭಗತ್ ಸಿಂಗ್​ನನ್ನು ಸೇನೆಗೆ ಸೇರಿಸುತ್ತೇನೆ ಎಂದಿದ್ದಾರೆ

ವಿಜಯಪುರ: ಮಣ್ಣಲ್ಲಿ ಮಣ್ಣಾದ ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿ
ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿಗೆ ಗೌರವ ಸಮರ್ಪಣೆ
TV9 Web
| Edited By: |

Updated on:Jul 04, 2021 | 6:44 PM

Share

ವಿಜಯಪುರ: ಪುಲ್ವಾಮಾದಲ್ಲಿ ಉಗ್ರರು ಹಾಗೂ ಸೇನೆ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದ ಯೋಧ ಕಾಶೀರಾಯ ಅವರ ಅಂತ್ಯಕ್ರಿಯೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ಯರನಾಳ ಮಠದ ಶ್ರೀ ಸಂಗನಬಸವ ಸ್ವಾಮೀಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಗ್ರಾಮದ ಸಾವಿರಾರು ಜನರು ಭಾಗಿಯಾಗಿ ಮಣ್ಣಲ್ಲಿ ಮಣ್ಣಾದ ಹುತಾತ್ಮ ಯೋಧನಿಗೆ ಗೌರವ ಸಮರ್ಪಿಸಿದರು.

ಪತ್ನಿ ಹಾಗೂ ತಾಯಿಗೆ ಯೋಧನ ಪಾರ್ಥಿವ ಶರೀರದ ಮೇಲೆ ಹಾಕಿದ್ದ ರಾಷ್ಟ್ರ ಧ್ವಜ ಹಸ್ತಾಂತರ ಮಾಡಲಾಯಿತು.ಯೋಧನ ಕುಟುಂಬಸ್ಥರು ಪಾರ್ಥೀವ ಶರೀರಕ್ಕೆ ಸೆಲ್ಯೂಟ್ ಹೊಡೆದು ಗೌರವ ಸಲ್ಲಿಸಿದರು. ಸೇನೆ ಹಾಗೂ ಸ್ಥಳಿಯ ಪೊಲೀಸರಿಂದ  ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಿಸಲಾಯಿತು.

ಪತಿ ಕಾಶೀರಾಯ ಅವರನ್ನು ಕಳೆದುಕೊಂಡು ಅಪಾರ ದುಃಖದಲ್ಲಿದ್ದರೂ ಅವರ ಪತ್ನಿ ಸಂಗೀತಾ, ಮಗ ಭಗತ್ ಸಿಂಗ್​ನನ್ನು ಸೇನೆಗೆ ಸೇರಿಸುತ್ತೇನೆ ಎಂದಿದ್ದಾರೆ. ಪುತ್ರನಿಗೆ ಸ್ವಾತಂತ್ರ ಹೋರಾಟಗಾರ ಭಗತ್ ಸಿಂಗ್ ಹೆಸರಿಟ್ಟಿದ್ದು, ಆತ ಕೂಡ ದೇಶದ ಸೇವೆ ಮಾಡಲಿ ಎಂದು ಆಕೆ ಆಶಿಸಿದ್ದಾರೆ. ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಪತಿಯ ಮೂರ್ತಿ ಸ್ಥಾಪನೆಗೆ ಸುನಂದಾ ಮನವಿ ಮಾಡಿದ್ದಾರೆ.

ಸೇನಾಧಿಕಾರಿಗಳು, ಮಾಜಿ ಸಚಿವರುಗಳಾದ ಶಿವಾನಂದ ಪಾಟೀಲ್, ಎಸ್.ಕೆ ಬೆಳ್ಳುಬ್ಬಿ‌ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಅಂತಿಮ ನಮನದಲ್ಲಿ ಭಾಗಿಯಾಗಿದ್ದರು.

(Final rites to Martyr Kashiraya Bommanahalli)

ಇದನ್ನೂ ಓದಿ: ಫಿಲಿಪೈನ್ಸ್​​ ಸೇನಾ ವಿಮಾನ ಅಪಘಾತ; 17 ಯೋಧರ ಮರಣ, 40 ಮಂದಿಯ ರಕ್ಷಣೆ-ಸಾವಿನ ಸಂಖ್ಯೆ ಏರುವ ಸಾಧ್ಯತೆ

ದೇಸಿ ಗೋತಳಿ ಹೆಚ್ಚಿಸಲು ವೀರ ಮರಣ ಹೊಂದಿದ ಯೋಧರ ಪತ್ನಿಯರಿಗೆ, ದೇವದಾಸಿಯರಿಗೆ, ಶವಸಂಸ್ಕಾರ ಕಾರ್ಮಿಕರಿಗೆ ಹಾಗೂ ವಿಧವೆಯರಿಗೆ ಹೆಣ್ಣುಕರು ವಿತರಣೆ

Published On - 6:41 pm, Sun, 4 July 21

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್