AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ: ಇಂದು ಚೆಕ್​ ಹಸ್ತಾಂತರ

ರಾಜ್ಯ ಸರ್ಕಾರ 50 ಲಕ್ಷ ರೂ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇಂದು ಅವರ ಕುಟುಂಬಕ್ಕೆ ಪರಿಹಾರದ ಚೆಕ್​ ಹಸ್ತಾಂತರಿಸಲಾಗುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ: ಇಂದು ಚೆಕ್​ ಹಸ್ತಾಂತರ
ರಮೇಶ್ ಬಿ. ಜವಳಗೇರಾ
|

Updated on: Dec 05, 2023 | 7:18 AM

Share

ಬೆಂಗಳೂರು, (ಡಿಸೆಂಬರ್ 05): ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿರುವ ಬೆಂಗಳೂರಿನ ಕ್ಯಾಪ್ಟನ್‌ ಪ್ರಾಂಜಲ್‌ (captain pranjal ) ಅವರ ಕುಟುಂಬಕ್ಕೆ ಪರಿಹಾರ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ರೀತಿಯಾದ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ರಾಜ್ಯ ಸರ್ಕಾರ 50 ಲಕ್ಷ ರೂ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇಂದು ಅವರ ಕುಟುಂಬಕ್ಕೆ ಪರಿಹಾರದ ಚೆಕ್​ ಹಸ್ತಾಂತರಿಸಲಾಗುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ(Siddaramaiah) ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಪ್ರಾಂಜಲ್‌ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅದಕ್ಕೆ ನಮನ ಸಲ್ಲಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರಿಹಾರ ಧನ ಘೋಷಣೆ ಮಾಡಿದ್ದರು. ಸದ್ಯ ಆದೇಶ ಹೊರಡಿಸಲಾಗಿದ್ದು,  ಇಂದು ಪರಿಹಾರದ ಚೆಕ್​ ಹಸ್ತಾಂತರಿಸಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್​(ಟ್ವಿಟ್ಟರ್)ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಬೇಗ ಪರಿಹಾರ ಬಿಡುಗಡೆ ಮಾಡಬೇಕು: ಸಿಎಂ ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಆಗ್ರಹ

ಜಮ್ಮು- ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನವೆಂಬರ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಹೆಸರನ್ನು ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆತ ಹಾಗೆ ಮಾತನಾಡಿದ್ದರು. ಅಲ್ಲದೇ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಕುಟುಂಬಕ್ಕೆ ಪರಿಹಾರದ ಕಾಲಮಿತಿ ಕುರಿತು ಪತ್ರಕರ್ತರು ಕೇಳಿದಾಗ, ಪರಿಹಾರವನ್ನು ಯಾರು, ಯಾವಾಗ ಘೋಷಿಸಿದರು ಎಂದು ಸಿದ್ದರಾಮಯ್ಯ ಸುದ್ದಿಗಾರರನ್ನು ಕೇಳಿದ್ದರರು. ಇದಕ್ಕೆ ಬಿಜೆಪಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಇದೀಗ ಎಲ್ಲಾ ಗೊಂದಲಗಳಿಗೆ ತೆರೆಬಿದ್ದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!