AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ತರಾಟೆ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ: ಸುಧಾಕರ್-SR ವಿಶ್ವನಾಥ್ ಸಂಧಾನ ಸಕ್ಸಸ್

ಶಿಸ್ತಿನ ಸಂಘಟನೆ ಬಿಜೆಪಿ ಎಂಬುದು ಕರ್ನಾಟಕದ ಮಟ್ಟಿಗೆ ಅತಿದೊಡ್ಡ ಜೋಕ್ ಆಗಿ ಕಾಣಿಸುತ್ತಿದೆ. ಹೌದು....ಈಗಾಗಲೇ, ಅಡ್ಡ ಮತದಾನದಿಂದ ಆಂತರಿಕ ಸಂಘರ್ಷ ಏರ್ಪಟ್ಟಿರುವ ಹೊತ್ತಿನಲ್ಲಿ ಬಿಜೆಪಿಯಲ್ಲಿ ಮತ್ತಷ್ಟು ಕಚ್ಚಾಟಗಳು ನಡೆಯುತ್ತಿವೆ. ಬಿಜೆಪಿಯ ಪ್ರಭಾವಿಗಳು ಬೀದಿ ಕಾಳಗದಲ್ಲಿ ತೊಡಗಿದ್ದಾರೆ. ಈ ಒಳಜಗಳಿಗೆ ಬ್ರೇಕ್ ಹಾಕಲು ಆರ್​​ಎಸ್​​ಎಸ್​, ಹಿರಿಯ ಬಿಜೆಪಿ ನಾಯಕರು ಮಧ್ಯೆ ಪ್ರವೇಶ ಮಾಡಿದ್ದು, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ S.R.ವಿಶ್ವನಾಥ್ ಸಂಧಾನ ಸಭೆ ಸಕ್ಸಸ್ ಆಗಿದೆ. ಅಷ್ಟಕ್ಕೂ ಸಂಧಾನ ಸಭೆ ಏನೆಲ್ಲಾ ಆಯ್ತು ಎನ್ನುವುದು ಇಲ್ಲಿದೆ.

RSS ತರಾಟೆ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ: ಸುಧಾಕರ್-SR ವಿಶ್ವನಾಥ್ ಸಂಧಾನ ಸಕ್ಸಸ್
Karnataka BJP
Anil Kalkere
| Edited By: |

Updated on:Jul 05, 2026 | 9:15 PM

Share

ಮುಖ್ಯಾಂಶಗಳು

  • ಸಂಸದ ಸುಧಾಕರ್ ಮತ್ತು ಎಸ್ ಆರ್ ವಿಶ್ವನಾಥ್ ಸಂಧಾನ ಸಭೆ ಸಕ್ಸಸ್
  • ಇಬ್ಬರೂ ಪರಸ್ಪರ ವಿಚಾರದಲ್ಲಿ ನಕಾರಾತ್ಮಕ ಹೇಳಿಕೆಗಳನ್ಕು ಕೊಡದಂತೆ ಸೂಚನೆ
  • ಹಿರಿಯರ ಸಮ್ಮುಖದಲ್ಲೇ ಪರಸ್ಪರ ಶೇಕ್ ಹ್ಯಾಂಡ್ ಮಾಡಿಕೊಂಡ ಉಭಯ ನಾಯಕರು

ಬೆಂಗಳೂರು, (ಜುಲೈ 05): ಕರ್ನಾಟಕ ಬಿಜೆಪಿಯಲ್ಲಿನ (Karnataka BJP) ಒಳಜಗಳಗಳಿಗೆ ಬ್ರೇಕ್ ಹಾಕುವ ಕಾರ್ಯ ಶುರುವಾಗಿದೆ. ಹೌದು….ಮೊನ್ನೆ ನಡೆದ ಆರ್ ಎಸ್ ಎಸ್ ಮತ್ತು ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಕ್ಷದೊಳಗೆ ಮೊದಲು ಸಮನ್ವಯ ಮೂಡಿಸಿಕೊಳ್ಳುವಂತೆ ಸಲಹೆ ನೀಡಲಾಗಿತ್ತು. ಆಗಾಗ ಸಭೆ ಸೇರುವುದೇ ಸಮನ್ವಯತೆ ಮೂಡಲು ಏಕೈಕ ಪರಿಹಾರ ಎಂಬುದನ್ನೂ ರಾಜ್ಯ ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಲಾಗಿತ್ತು. ಇದರ ಬೆನ್ನಲ್ಲೇ ಇಂದು (ಜುಲೈ 05) ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್​​ಆರ್ ವಿಶ್ವನಾಥ್ ನಡುವೆ ಸಂಧಾನ ಮಾಡಿಸಿದ್ದು, ಈ ಸಂಧಾನ ಯಶಸ್ವಿಯಾಗಿದೆ.

ಮೂವರು ನಾಯಕರ ಸಂಧಾನ

ಇಂದು (ಜುಲೈ 05) ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಸಮ್ಮುಖದಲ್ಲಿ ಸಂಧಾನ ಸಭೆ ನಡೆದಿದ್ದು, ಸಂಘ ಪರಿವಾರ ಆಕ್ರೋಶ ವ್ಯಕ್ತಪಡಿಸಿರುವ ಬಗ್ಗೆ ಸಭೆಯಲ್ಲಿ ಉಲ್ಲೇಖಿಸಿ ಇನ್ಮುಂದೆ ಬಹಿರಂಗ ಹೇಳಿಕೆ ನೀಡದಂತೆ ಸುಧಾಕರ್, ವಿಶ್ವನಾಥ್ ಹಾಗೂ ಸದಾನಂದಗೌಡ ಅವರಿಗೆ ತಾಕೀತು ಮಾಡಲಾಗಿದೆ. ಅಲ್ಲದೇ ಏನೇ ಸಮಸ್ಯೆಯಿದ್ರೂ ಪಕ್ಷದ ಕಚೇರಿಗೆ ಬಂದು ಚರ್ಚೆ ನಡೆಸಬೇಕು. ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಕೂಡ ಬಹಿರಂಗವಾಗಿ ಚರ್ಚಿಸಬೇಡಿ. ಇದು ನಿಮ್ಮ ಸಮಸ್ಯೆ ಅಷ್ಟೇ ಅಲ್ಲೇ, ಪಕ್ಷಕ್ಕೂ ಸಮಸ್ಯೆ ತಂದೊಡ್ಡಲಿದೆ. ದೊಡ್ಡ ಸಮಸ್ಯೆ ಆದ್ರೆ ನಾಯಕರ ಗಮನಕ್ಕೆ ತಂದು ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಮತ್ತೆ ಶುರುವಾಯ್ತು ನಾಯಕರ ವಾರ್:ಸುಧಾಕರ್​​ಗೆ ವಿಶ್ವನಾಥ್ ಬಹಿರಂಗ ಸವಾಲ್

ಸಂಧಾನ ಸಭೆ ಸಕ್ಸಸ್

ಬಹಿರಂಗವಾಗಿ ಏಕವಚನದಲ್ಲಿ ಪರಸ್ಪರ ಬೈದಾಡಿಕೊಂಡು ಸವಾಲು ಹಾಕಿದ್ದ ಡಾ.ಕೆ.ಸುಧಾಕರ್ ಮತ್ತು S.R.ವಿಶ್ವನಾಥ್ ನಡುವೆ ನಡೆದ ಸಂಧಾನ ಸಭೆ ಸಕ್ಸಸ್ ಆಗಿದೆ. ಹಿರಿಯರ ಸಮ್ಮುಖದಲ್ಲಿ ಸಂಧಾನ ಆಗಿದ್ದು, ಜಟಾಪಟಿಯನ್ನ ಹೈಕಮಾಂಡ್​ ಗಂಭೀರವಾಗಿ ಪರಿಗಣಿಸಿದೆ. ಪರಸ್ಪರ ಕಿತ್ತಾಡಿಕೊಳ್ಳೋದು ಇಬ್ಬರಿಗೂ ಶೋಭೆ ತರಲ್ಲ. ಪರಸ್ಪರ ಹೇಳಿಕೆಗಳನ್ನ ಕೊಡದಂತೆ ಇಬ್ಬರಿಗೂ ಸೂಚನೆ ನೀಡಲಾಗಿದೆ. ಹಿರಿಯರ ಮಾತಿಗೆ ಮನ್ನಣೆ ನೀಡಿದ ಇಬ್ಬರು ಸುಧಾಕರ್ ಹಾಗೂ ವಿಶ್ವನಾಥ್ ಪರಸ್ಪರ ಶೇಕ್ ಹ್ಯಾಂಡ್ ಮಾಡಿಕೊಂಡರು.

ಒಟ್ಟಿನಲ್ಲಿ ಆರ್​​ಎಸ್​​ಎಸ್​​ ನಾಯಕರು ಕೆಲವೊಂದಿಷ್ಟು ಬುದ್ಧಿ ಹೇಳಿದ್ದರಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು,ಕೆಲ ಸಲಹೆ ಸೂಚನೆಗಳೊಂದಿಗೆ ಪಕ್ಷದೊಳಗಿನ ಒಳಜಗಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಆದ್ರೆ, ನಾಯಕರು ಜಗಳ ಮಾಡಿಕೊಳ್ಳದೇ ಇಲ್ಲಿಗೆ ಕೈ ಬಿಡುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 pm, Sun, 5 July 26

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ