ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸಿದರೆ ಫೈನ್ ಪಕ್ಕ; 16 ದಿನದಲ್ಲಿ 12 ಸಾವಿರ ಕೇಸ್
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸಿದ ವಾಹನ ಸವಾರರಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಕಾರು ಚಾಲಕ ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡಿರುವುದು ಹಾಗೂ ಪಕ್ಕದಲ್ಲಿ ಕುಳಿತಿರುವ ವ್ಯಕ್ತಿ ಕೂಡ ಸೀಟ್ ಬೆಲ್ಟ್ ಧರಿಸದೇ ಪ್ರಯಾಣ ಮಾಡುವುದು ಹೀಗೆ ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ ಮಾಡಿದಕ್ಕೆ ಕೇಸ್ ಹಾಕಲಾಗಿದೆ.
ಬೆಂಗಳೂರು, ಮೇ.17: ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ (bengaluru Mysuru Expressway) ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸಿದ ವಾಹನ ಸವಾರರಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಸೀಟ್ ಬೆಲ್ಟ್ ಧರಿಸದೇ ಕಾರು ಚಲಾಯಿಸಿದ ಸವಾರರ ಮೇಲೆ ಕೇಸ್ ದಾಖಲಿಸಲಾಗಿದ್ದು ಕೇವಲ 16 ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಕೇಸ್ಗಳು ದಾಖಲಾಗಿವೆ. ಮೇ 1 ರಿಂದ ಮೇ 16ರ ವರೆಗೆ ಹೆದ್ದಾರಿ ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದ ಮೇಲೆ 12,192 ಕೇಸ್ಗಳನ್ನು ದಾಖಲಿಸಲಾಗಿದೆ.
ಕಾರು ಚಾಲಕ ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡಿರುವುದು ಹಾಗೂ ಪಕ್ಕದಲ್ಲಿ ಕುಳಿತಿರುವ ವ್ಯಕ್ತಿ ಕೂಡ ಸೀಟ್ ಬೆಲ್ಟ್ ಧರಿಸದೇ ಪ್ರಯಾಣ ಮಾಡುವುದು ಹೀಗೆ ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ ಮಾಡಿದಕ್ಕೆ ಕೇಸ್ ಹಾಕಲಾಗಿದೆ. ಕೇಸ್ ದಾಖಲಿಸಿ ಕಾರು ಮಾಲೀಕನ ವಿಳಾಸಕ್ಕೆ ನೋಟಿಸ್ ಕಳಿಸಲಾಗಿದೆ. ನೋಟಿಸ್ ಮಾಡಿದ ಏಳು ದಿನದಲ್ಲಿ ಸಂಚಾರಿ ಠಾಣೆಗೆ ಹೋಗಿ ದಂಡ ಪಾವತಿಗೆ ಸೂಚನೆ ನೀಡಲಾಗಿದ್ದು ದಂಡ ಕಟ್ಟದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.
ಮಳೆಗೆ ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ
ಧಾರಕಾರವಾಗಿ ಸುರಿದ ಮಳೆಗೆ ಬೆಂಗಳೂರು – ಮೈಸೂರು ಹೆದ್ದಾರಿ ಜಲಾವೃತಗೊಂಡು ಕೆಲ ಕಾಲ ವಾಹನ ಸವಾರರು ಪರದಾಡುವಂತಾಗಿತ್ತು. ಪಟ್ಟಣದ ಅಗ್ನಿಶಾಮಕ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಿವೈಡರ್‌ಗಳಲ್ಲಿ ಹೆಚ್ಚು ಮಣ್ಣು ತುಂಬಿಕೊಂಡಿದೆ. ಜೊತೆಗೆ ತ್ಯಾಜ್ಯ ಕಟ್ಟಿಕೊಂಡು ಒಳಚರಂಡಿಗಳಿಗೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ಹೆದ್ದಾರಿಯಲ್ಲಿ ಮಳೆ ನೀರು ನಿಂತಿತ್ತು. ಇದರಿಂದಾಗಿ ವಾಹನ ಸವಾರರು ಕೆಲ ಕಾಲ ಪರದಾಡುವಂತಾಯಿತು.
ಇನ್ನು ರಾಮನಗರ ಮತ್ತು ಚನ್ನಪಟ್ಟಣ ಪ್ರದೇಶಗಳಲ್ಲಿ ಹಾದು ಹೋಗಿರುವ ಹಳೆಯ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಮಳೆಗೆ ಹೆದ್ದಾರಿಯಲ್ಲಿ ಡಾಂಬರು ಕಿತ್ತು ಬಂದಿದ್ದು, ಗುಂಡಿಗಳು ಬಿದ್ದಿವೆ. ರಾಮನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಧಾರಕಾರವಾಗಿ ಮಳೆಯಾಗಿದ್ದು, ಕೆಲವೆಡೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:15 am, Fri, 17 May 24