ಪ್ಲಾಸ್ಟಿಕ್‌ ಸಂಗ್ರಹಿಸಿದ್ರೆ ಕೊಡ್ಬೇಕು ದುಪ್ಪಟ್ಟು ದಂಡ!

ಮೈಸೂರು: ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮೈಸೂರು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ ಇಟ್ಟಿದೆ. ಪಾಲಿಕೆಯ ನಿಯಮ ಮೀರಿ ಪ್ಲಾಸ್ಟಿಕ್ ಸಂಗ್ರಹಿಸಿದ್ದವರಿಗೆ ದಂಡ ವಿಧಿಸಲು ಮುಂದಾಗಿದೆ. ಪ್ಲಾಸ್ಟಿಕ್ ಸಂಗ್ರಹಿಸಿದವರು ಬೆಲೆಗಿಂತ ದುಪ್ಪಟ್ಟು ದಂಡವನ್ನ ಕಟ್ಟಬೇಕಾಗುತ್ತೆ. ಅಧಿಕಾರಿಗಳು 250ಕೆಜಿ ಪ್ಲಾಸ್ಟಿಕ್ ಶೇಖರಿಸಿದ್ದವರಿಗೆ 10 ಸಾವಿರ ದಂಡ ವಿಧಿಸಿದ್ದಾರೆ. ಬಸವೇಶ್ವರ ರಸ್ತೆಯ ರಘುಪತಿ ಎಂಟರ್‌ಪ್ರೈಸಸ್‌ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಂಗಡಿ ಮಾಲೀಕ ಅಕ್ರಮವಾಗಿ ಸಂಗ್ರಹಿಸಿದ್ದ 250ಕೆಜಿ ಪ್ಲಾಸ್ಟಿಕ್ ಮತ್ತು ನಾನ್ ವೊವೆನ್ ಬ್ಯಾಗ್ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದು, 10ಸಾವಿರ ದಂಡ ವಿಧಿಸಿದ್ದಾರೆ.

ಪ್ಲಾಸ್ಟಿಕ್‌ ಸಂಗ್ರಹಿಸಿದ್ರೆ ಕೊಡ್ಬೇಕು ದುಪ್ಪಟ್ಟು ದಂಡ!
ಸಾಧು ಶ್ರೀನಾಥ್​

Updated on: Dec 18, 2019 | 10:06 AM

ಮೈಸೂರು: ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮೈಸೂರು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ ಇಟ್ಟಿದೆ. ಪಾಲಿಕೆಯ ನಿಯಮ ಮೀರಿ ಪ್ಲಾಸ್ಟಿಕ್ ಸಂಗ್ರಹಿಸಿದ್ದವರಿಗೆ ದಂಡ ವಿಧಿಸಲು ಮುಂದಾಗಿದೆ. ಪ್ಲಾಸ್ಟಿಕ್ ಸಂಗ್ರಹಿಸಿದವರು ಬೆಲೆಗಿಂತ ದುಪ್ಪಟ್ಟು ದಂಡವನ್ನ ಕಟ್ಟಬೇಕಾಗುತ್ತೆ.

ಅಧಿಕಾರಿಗಳು 250ಕೆಜಿ ಪ್ಲಾಸ್ಟಿಕ್ ಶೇಖರಿಸಿದ್ದವರಿಗೆ 10 ಸಾವಿರ ದಂಡ ವಿಧಿಸಿದ್ದಾರೆ. ಬಸವೇಶ್ವರ ರಸ್ತೆಯ ರಘುಪತಿ ಎಂಟರ್‌ಪ್ರೈಸಸ್‌ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಂಗಡಿ ಮಾಲೀಕ ಅಕ್ರಮವಾಗಿ ಸಂಗ್ರಹಿಸಿದ್ದ 250ಕೆಜಿ ಪ್ಲಾಸ್ಟಿಕ್ ಮತ್ತು ನಾನ್ ವೊವೆನ್ ಬ್ಯಾಗ್ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದು, 10ಸಾವಿರ ದಂಡ ವಿಧಿಸಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us