ತನ್ನ ಮಗನನ್ನು ಬೆಳೆಸಲು ಮತ್ತೊಬ್ಬ ಮಗನನ್ನು ಮುಗಿಸಿದ್ರು: ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಮುಡಾ ಪ್ರಕರಣದ ವಿರುದ್ಧ ಮೈತ್ರಿ ಪಕ್ಷಗಳಿಂದ ಪಾದಯಾತ್ರೆ ಮಾಡಲಾಗುತ್ತಿದೆ. ಇದಕ್ಕೆ ಟಕ್ಕರ್​ ಎಂಬಂತೆ ಕಾಂಗ್ರೆಸ್​ ಜನಾಂದೋಲನ ಮಾಡಿದೆ. ಇವೆರಡೂ ಈಗ ಡಿಕೆ ಶಿವಕುಮಾರ್​ ಮತ್ತು ಹೆಚ್​ಡಿ ಕುಮಾರಸ್ವಾಮಿ ಮಧ್ಯೆ ವೈಯಕ್ತಿಕ ಕದನಕ್ಕೆ ಕಾರಣವಾಗಿದ್ದು ಪರಸ್ಪರ ಆರೋಪ-ಪ್ರತ್ಯಾರೋಪಗಳು ಮಾಡಲಾಗುತ್ತಿದೆ. ಇದೀಗ ಮಾಡಿದ್ರೆ ಗಂಡಸ್ತನದ ರಾಜಕೀಯ ಮಾಡಬೇಕು ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ತನ್ನ ಮಗನನ್ನು ಬೆಳೆಸಲು ಮತ್ತೊಬ್ಬ ಮಗನನ್ನು ಮುಗಿಸಿದ್ರು: ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ತನ್ನ ಮಗನನ್ನು ಬೆಳೆಸಲು ಮತ್ತೊಬ್ಬ ಮಗನನ್ನು ಮುಗಿಸಿದ್ರು: ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 09, 2024 | 3:08 PM

ದೆಹಲಿ, ಆಗಸ್ಟ್​ 09: ತನ್ನ ಮಗನನ್ನು ಬೆಳೆಸಲು ಮತ್ತೊಬ್ಬ ಮಗನನ್ನು ಮುಗಿಸಿದರು. ಮನುಷ್ಯನ ಅವನು. ರಾಜಕೀಯ ಮಾಡಿದರೆ ಗಂಡಸ್ತನದ ರಾಜಕೀಯ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)​ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ಮಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕುಟುಂಬದ ವಿರುದ್ಧ ಮಾತಾಡ್ತಾರಾ. 10 ತಿಂಗಳಲ್ಲಿ ಸರ್ಕಾರ ಬೀಳಿಸಲು ಸಂಚು ಎಂದು ಶಿವಕುಮಾರ್​ ಆರೋಪ ಮಾಡಿದ್ದಾರೆ. ಸರ್ಕಾರ ಬೀಳಿಸಲು ಟ್ರೈಮಾಡಿದ್ದಾರೆಂದು ಅಜ್ಜಯ್ಯ ಹೇಳಿದ್ರಾ? ಸುಮ್ಮನೆ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್​ನ ಜನಾಂದೋಲನ ಕಾರ್ಯಕ್ರಮ ನಾಚಿಕೆಯಾಗಬೇಕು

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗಳ ಪ್ರಚಾರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇವತ್ತಿನ ಕಾಂಗ್ರೆಸ್ ನಾಯಕರ ಜನಾಂದೋಲನ ಕಾರ್ಯಕ್ರಮ ನಾಚಿಕೆ ಆಗಬೇಕು. ವಿರೋಧ ಪಕ್ಷದಲ್ಲಿದ್ದಾಗ ಬೊಗಳೆ ಬಿಟ್ಟರು. ಸಾಕ್ಷಿಗಳಿಲ್ಲದೇ ಅವರು ಆರೋಪ ಮಾಡಿದರು. ವಿರೋಧ ಪಕ್ಷದ ಸ್ಥಾನಕ್ಕೆ ಅತ್ಯಂತ ನಿಷ್ಕ್ರಿಯವಾಗಿ ಸಿದ್ದರಾಮಯ್ಯ ಕೆಲಸ ಮಾಡಿದ್ದರು. ಕಡಿಮೆ ಸಂಖ್ಯೆ ಇದ್ದ ಜೆಡಿಎಸ್ ದಾಖಲೆ ಸಮೇತ ಹೋರಾಟ ಮಾಡಿದ್ದೇವು ಎಂದಿದ್ದಾರೆ.

ಇದನ್ನೂ ಓದಿ: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಸಮನ್ಸ್​​

ನಾನು ಮುಖ್ಯಮಂತ್ರಿ ಆಗಿದ್ದಾಗ ಅಕ್ರಮ ನಡೆದರೆ ಒಂದು ದಾಖಲೆ ನೀಡಿದ್ದರಾ? ನಾನು ವಿರೋಧ ಪಕ್ಷದ ನಾಯಕನಿದ್ದಾಗ ಬಿಜೆಪಿ ವಿರುದ್ಧ ಹೋರಾಟ ಮಾಡಿದೆ. ನಾಲ್ಕೈದು ಕೇಸ್ ದಾಖಲಿಸುವ ಕೆಲಸ ಮಾಡಿದರು. ಲೋಕಾಯುಕ್ತ ಕೇಸ್ ಬಿಜೆಪಿ ಕಾಲದಲ್ಲಿ ಹಾಕಿದ್ದು, ಇದರಲ್ಲಿ ನನ್ನ ಮೇಲೆ ಏನು ಆಪಾದನೆ ಇದೆ ಇಲ್ಲಿ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು ರಕ್ಷಣೆ ಪಡೆಯಲು ಎಂದು ಡಿಕೆ ಶಿವಕುಮಾರ್​​ ಹೇಳಿದ್ದಾರೆ. ನಾವು ಯಾವತ್ತು ಕಾಪಾಡಿ ಅಂತಾ ಯಾರ ಮನೆಯ ಬಾಗಿಲಿಗೂ ಹೋಗಿಲ್ಲ. ನೀವು ಲೋಕಾಯಕ್ತ ಮುಚ್ಚಿ ಎ.ಸಿ.ಬಿ ಮಾಡಿದಿರಿ. ಹ್ಯೂಬ್ಲೊಟ್ ವಾಚ್, ರೀಡ್, ಕೆಂಪಯ್ಯ ವರದಿ ಏನಾಯಿತು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಕೊಡ್ತೇನೆಂದು ಬರೆದುಕೊಟಿದ್ದಾರಾ? ಮೂರೂವರೆ ವರ್ಷ ಸಿದ್ದರಾಮಯ್ಯ ಅವರೇ ಸಿಎಂ; ರಾಯರೆಡ್ಡಿ

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕುತಂತ್ರ ಮಾಡುತ್ತಿರುವವರು ಯಾರು. ಹೆಚ್.ಡಿ.ರೇವಣ್ಣ ಮತ್ತು ಮಕ್ಕಳ ವಿರುದ್ಧ ಷಡ್ಯಂತ್ರ ಮಾಡಿದ್ದು ಯಾರು? ಅವರನ್ನು ಜೈಲಿಗೆ ಕಳುಹಿಸಿದವರು ಯಾರು? ನಮ್ಮ ಕುಟುಂಬದ ವಿರುದ್ಧ ಮಾತನಾಡಿದರೆ ಸುಮ್ಮನೆ ಬಿಡುವುದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಯಾವ ಸಂಚು ಬಿಡುಗಡೆ ಮಾಡಿದಿಯ್ಯ ಪೊಣ್ಣನ್ನ?

ಇವತ್ತು ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಎ.ಕೆ ಸುಬ್ಬಯ್ಯ ಕಾಲದಿಂದಲೂ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರನ್ನು ಮುಗಿಸಲು ಯತ್ನ ಮಾಡಲಾಯಿತು. ಯಾವ ಸಂಚು ಬಿಡುಗಡೆ ಮಾಡಿದಿಯ್ಯ ಪೊಣ್ಣನ್ನ. 37000 ದುಡ್ಡು ಕಟ್ಟಿದೆ ಒಂದು ಸೈಟ್ ಕೊಟ್ಟಿಲ್ಲ. ನಾನು ಮೈಸೂರಿನಲ್ಲಿದ್ದಾಗ ನಿರ್ಮಾಪಕನಾಗಿದ್ದಾಗ ಖರೀದಿ ಮಾಡಿದ್ದೇನೆ. ಮೈಸೂರಿನಲ್ಲಿ ಬೋರ್ಡ್ ಹಾಕಿಕೊಂಡಿದ್ದಾರೆ. ಆದರೆ ನಿಮ್ಮ ಶಾಸಕರು ಕಾರ್ಯಕರ್ತರು ಕೊರಳಲ್ಲಿ ಹಾಕಿಕೊಳ್ಳಿ. ಲೋಕಾಯುಕ್ತ, ಸಿ.ಐ.ಡಿ ಇದರಲ್ಲಿ ಏನು ಇಲ್ಲ ಅಂತಾ ಹೇಳಿದ್ದಾರೆ. ಬಿಜೆಪಿ ಎರವಲು ತೆಗೆದುಕೊಂಡಿದ್ದಾರೆ. ಕಾಂಗ್ರೆಸ್​ದು ಏನು ಇಲ್ಲ. ನಿಮ್ಮದು ಏನಿದೆ. ನಾನೆ ಬರ್ತಿದೆ ಎಲ್ಲೂ ಹೋಗಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!