ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯ ವಿರುದ್ಧ ಸಾಲು ಸಾಲು ಆರೋಪ, ಎಫ್ಐಆರ್ ದಾಖಲು

ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೊಮ್ಮನಹಳ್ಳಿ ವಲಯ ವೈದ್ಯಾಧಿಕಾರಿ ದೂರು ಹಿನ್ನೆಲೆಯಲ್ಲಿ ಪೊಲೀಸರು FIR ದಾಖಲಿಸಿದ್ದಾರೆ.

ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯ ವಿರುದ್ಧ ಸಾಲು ಸಾಲು ಆರೋಪ, ಎಫ್ಐಆರ್ ದಾಖಲು
ಸಂಗ್ರಹ ಚಿತ್ರ
Follow us
ಆಯೇಷಾ ಬಾನು
|

Updated on: Apr 26, 2021 | 9:15 AM

ಬೆಂಗಳೂರು: ಕೊರೊನಾದಿಂದ ಬೀದಿ ಬೀದಿಯಲ್ಲಿ ಜನ ಸಾಯ್ತಾ ಇದ್ರು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ ಎನ್ನುವ ಉತ್ತರ ಕೇಳಿ ಬರುತ್ತಲೇ ಇದೆ. ಬೆಡ್ ಇಲ್ಲ ಎನ್ನುತ್ತಿದ್ದ ಅಪೋಲೊ ಆಸ್ಪತ್ರೆ ಕಳ್ಳಾಟ ಬಯಲಾಗಿದೆ. ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೊಮ್ಮನಹಳ್ಳಿ ವಲಯ ವೈದ್ಯಾಧಿಕಾರಿ ದೂರು ಹಿನ್ನೆಲೆಯಲ್ಲಿ ಪೊಲೀಸರು FIR ದಾಖಲಿಸಿದ್ದಾರೆ.

ಕೊರೊನಾ ಸೋಂಕಿತ ವ್ಯಕ್ತಿ ಏಪ್ರಿಲ್ 14ರಂದು ಬಿಬಿಎಂಪಿ ಕೋಟಾದಡಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಹಾಗೂ ಏಪ್ರಿಲ್ 20ರಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಆದ್ರೆ ಏಪ್ರಿಲ್ 24ರವರೆಗೂ ಅಡ್ಮಿಟ್ ಎಂದು ತೋರಿಸಿ ಬೇರೆ ಸೋಂಕಿತರಿಗೆ ಬೆಡ್ ನೀಡದೆ ವಂಚಿಸಿದ್ದಾರೆ ಎಂದು ಆಸ್ಪತ್ರೆ ವಿರುದ್ಧ ಸೋಂಕಿನಿಂದ ಗುಣಮುಖರಾಗಿರುವ ವ್ಯಕ್ತಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಆಸ್ಪತ್ರೆ ವಿರುದ್ಧ ದೂರು ದಾಖಲಿಸಿದ್ದಾರೆ.

ಇನ್ನು ಇಷ್ಟಕ್ಕೆ ಈ ಆಸ್ಪತ್ರೆಯ ಕಳ್ಳಾಟ ನಿಂತಿಲ್ಲ. ಮತ್ತೊಂದು ಕಡೆ ಇದೇ ರೀತಿ ಕೊರೊನಾ ಸೋಂಕಿತ ವ್ಯಕ್ತಿ ಏಪ್ರಿಲ್ 16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್ 20ರಂದು ಅಪೋಲೊ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಸ್ಪತ್ರೆಯವರು ₹2,49,202 ಬಿಲ್ ಕಟ್ಟಿಸಿಕೊಂಡಿದ್ದಾರೆ ಎಂದು ಅಪೋಲೊ ಆಸ್ಪತ್ರೆ ವಿರುದ್ಧ ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಏಪ್ರಿಲ್ 25ರಂದು ದಾಖಲಾಗಿರುವುದಾಗಿ ಬಿಬಿಎಂಪಿ ಪೋರ್ಟಲ್‌ನಲ್ಲಿ ತೋರಿಸಿ ಮೋಸ ಮಾಡಿದ್ದಾರಂತೆ.

ಅದೇ ರೀತಿ ಮತ್ತೊಬ್ಬ ಸೋಂಕಿತ ಏಪ್ರಿಲ್ 12ರಂದು ದಾಖಲಾಗಿದ್ದ ಏಪ್ರಿಲ್ 22ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ. ಆದ್ರೆ ಏಪ್ರಿಲ್ 25ರಂದು ಅಡ್ಮಿಟ್ ಎಂದು ನಮೂದಿಸಿದ್ದಾರೆ. ಹೀಗಾಗಿ ಅಪೋಲೊ ಆಸ್ಪತ್ರೆ ಮ್ಯಾನೇಜ್ಮೆಂಟ್ ವಿರುದ್ಧ ಬೊಮ್ಮನಹಳ್ಳಿ ವಲಯ ವೈದ್ಯಾಧಿಕಾರಿ ದೂರು ದಾಖಲಿಸಿದ್ದಾರೆ. ಇನ್ನು ದೂರು ಹಿನ್ನೆಲೆ ಪೊಲೀಸರು FIR ಹಾಕಿದ್ದಾರೆ.

ಅಪೋಲೊ ಆಸ್ಪತ್ರೆಯ ಸಿಇಒ ಡೇವಿಡ್ಸನ್, ಅಪೋಲೊ ಆಸ್ಪತ್ರೆಯ ಆಪರೇಷನ್ ಹೆಡ್ ಡಾ.ಕಲ್ಪನಾ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ ಶಾಂತಾ, ಡಾ.ಸಹನಾ, ಆರೋಗ್ಯ ಮಿತ್ರ ವಿಭಾಗದ ಚಂದನಾ, ಮಂಜುಳ ಸೇರಿ ವಂಚನೆ ಸಂಬಂಧ 6 ಆರೋಪಿಗಳ ವಿರುದ್ಧ FIR ದಾಖಲಾಗಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರಿಗೆ ಸಿಗುತ್ತಿಲ್ಲ ಬಿಯು ನಂಬರ್​; ಸಮಸ್ಯೆ ಹಿಂದೆ ಖಾಸಗಿ ಕೈವಾಡ ಎಂದು ಸರ್ಕಾರ ಶಂಕೆ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ