ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಪಡೆದ ಪ್ರಕರಣ: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ FIR

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆಯಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಈ ಸಂಬಂಧ ಬೆಸ್ಕಾಂ ಜಾಗೃತ ದಳ ತನಿಖೆ ಆರಂಭಿಸಿದ್ದು, ವಿದ್ಯುತ್ ಕಳವು ಮಾಡಿರುವ ಆರೋಪದಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಿಸಿದೆ.

ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಪಡೆದ ಪ್ರಕರಣ: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ FIR
ಹೆಚ್​ಡಿ ಕುಮಾರಸ್ವಾಮಿImage Credit source: PTI
Follow us
Poornima Agali Nagaraj
| Updated By: Rakesh Nayak Manchi

Updated on:Nov 14, 2023 | 7:22 PM

ಬೆಂಗಳೂರು, ನ.14: ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪದಡಿ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 71ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಬೆಸ್ಕಾಂ ಜಾಗೃತ ದಳದ ಸಿಬ್ಬಂದಿ ಎಫ್​ಐಆರ್ ಪ್ರತಿಯನ್ನು ಸಲ್ಲಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದಕ್ಕೆ ಕಾಂಗ್ರೆಸ್ ವಿಡಿಯೋವೊಂದರನ್ನು ಬಿಡುಗಡೆ ಮಾಡಿದೆ. ದೀಪಾವಳಿ ಪ್ರಯುಕ್ತ ಬೆಂಗಳೂರಿನ ಜೆಪಿ ನಗರದಲ್ಲಿರುವ ನಿವಾಸಕ್ಕೆ ದೀಪಾಲಂಕಾರ ಸಲುವಾಗಿ ಅಕ್ರಮವಾಗಿ ಬೀದಿ ಕಂಬದ ಮೂಲಕ ವಿದ್ಯುತ್​ ಸಂಪರ್ಕ ಪಡೆಯಲಾಗಿದೆ.

ಇದನ್ನೂ ಓದಿ: ವಿದ್ಯುತ್ ಕಳ್ಳತನದ ಆರೋಪ; ಹೆಚ್ ಡಿ ಕುಮಾರಸ್ವಾಮಿ ಮನೆಯಲ್ಲಿ ಮಹಜರ್ ನಡೆಸಿದ ಬೆಸ್ಕಾಂ ಅಧಿಕಾರಿಗಳು!

ಇದನ್ನು ಸ್ವತಃ ಕುಮಾರಸ್ವಾಮಿ ತಪ್ಪೊಪ್ಪಿಕೊಂಡಿದ್ದಾರೆ. ಇದಕ್ಕೆ ಇದೀಗ ಕಾಂಗ್ರೆಸ್​ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಅಕ್ರಮ ವಿದ್ಯುತ್​ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್​ ನಡುವೆ ಹೊತ್ತಿ ಉರಿಯುತ್ತಿದೆ. ಇದರ ಮಧ್ಯೆ ಇದೀಗ ಬೆಸ್ಕಾಂ ಸಹ ಪ್ರವೇಶಿಸಿದ್ದು, ತನಿಖೆ ನಡೆಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Tue, 14 November 23