ಬೆಂಗಳೂರು, ನ.14: ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪದಡಿ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 71ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಬೆಸ್ಕಾಂ ಜಾಗೃತ ದಳದ ಸಿಬ್ಬಂದಿ ಎಫ್ಐಆರ್ ಪ್ರತಿಯನ್ನು ಸಲ್ಲಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದಕ್ಕೆ ಕಾಂಗ್ರೆಸ್ ವಿಡಿಯೋವೊಂದರನ್ನು ಬಿಡುಗಡೆ ಮಾಡಿದೆ. ದೀಪಾವಳಿ ಪ್ರಯುಕ್ತ ಬೆಂಗಳೂರಿನ ಜೆಪಿ ನಗರದಲ್ಲಿರುವ ನಿವಾಸಕ್ಕೆ ದೀಪಾಲಂಕಾರ ಸಲುವಾಗಿ ಅಕ್ರಮವಾಗಿ ಬೀದಿ ಕಂಬದ ಮೂಲಕ ವಿದ್ಯುತ್ ಸಂಪರ್ಕ ಪಡೆಯಲಾಗಿದೆ.
ಇದನ್ನೂ ಓದಿ: ವಿದ್ಯುತ್ ಕಳ್ಳತನದ ಆರೋಪ; ಹೆಚ್ ಡಿ ಕುಮಾರಸ್ವಾಮಿ ಮನೆಯಲ್ಲಿ ಮಹಜರ್ ನಡೆಸಿದ ಬೆಸ್ಕಾಂ ಅಧಿಕಾರಿಗಳು!
ಇದನ್ನು ಸ್ವತಃ ಕುಮಾರಸ್ವಾಮಿ ತಪ್ಪೊಪ್ಪಿಕೊಂಡಿದ್ದಾರೆ. ಇದಕ್ಕೆ ಇದೀಗ ಕಾಂಗ್ರೆಸ್ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಅಕ್ರಮ ವಿದ್ಯುತ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಡುವೆ ಹೊತ್ತಿ ಉರಿಯುತ್ತಿದೆ. ಇದರ ಮಧ್ಯೆ ಇದೀಗ ಬೆಸ್ಕಾಂ ಸಹ ಪ್ರವೇಶಿಸಿದ್ದು, ತನಿಖೆ ನಡೆಸುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:17 pm, Tue, 14 November 23