ಕೆಎಸ್ ಈಶ್ವರಪ್ಪ ವಿರುದ್ಧದ ಎಫ್​ಐಆರ್​ಗೆ ತಡೆ; ಆಕ್ಷೇಪಾರ್ಹ ಹೇಳಿಕೆ ನೀಡುವ ರಾಜಕಾರಣಿಗಳಿಗೆ ಹೈಕೋರ್ಟ್ ತರಾಟೆ

ದೇಶ ವಿಭಜನೆ ಹೇಳಿಕೆ ನೀಡಿದ್ದ ಡಿಕೆ ಸುರೇಸ್ ವಿರುದ್ಧ ಆಕ್ರೋಶ ಹೊರಹಾಕುವ ಭರದಲ್ಲಿ ಬಿಜೆಪಿ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ ಅವರು, ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ್​ ಕುಲಕರ್ಣಿ ರೀತಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದರು. ಈ ಸಂಬಂಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾಗಿ ಆರೋಪಿಸಿ ಕಾಂಗ್ರೆಸ್ ದೂರು ನೀಡಿತ್ತು. ಅದರಂತೆ ಎಫ್​ಐಆರ್ ಕೂಡ ದಾಖಲಾಗಿತ್ತು. ಸದ್ಯ ಹೈಕೋರ್ಟ್ ಈ ಎಫ್​ಐಆರ್​ಗೆ ತಡೆ ನೀಡಿದೆ.

ಕೆಎಸ್ ಈಶ್ವರಪ್ಪ ವಿರುದ್ಧದ ಎಫ್​ಐಆರ್​ಗೆ ತಡೆ; ಆಕ್ಷೇಪಾರ್ಹ ಹೇಳಿಕೆ ನೀಡುವ ರಾಜಕಾರಣಿಗಳಿಗೆ ಹೈಕೋರ್ಟ್ ತರಾಟೆ
ಕೆಎಸ್ ಈಶ್ವರಪ್ಪ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ; ಆಕ್ಷೇಪಾರ್ಹ ಹೇಳಿಕೆ ನೀಡುವ ರಾಜಕಾರಣಿಗಳಿಗೆ ಏಕ ಸದಸ್ಯ ಪೀಠ ತರಾಟೆ
Follow us
| Updated By: Rakesh Nayak Manchi

Updated on: Feb 16, 2024 | 1:16 PM

ಬೆಂಗಳೂರು, ಫೆ.16: ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ಕರ್ನಾಟಕ ಹೈಕೋರ್ಟ್ (Karnataka High Court) ತಡೆ ನೀಡಿದೆ. ದೇಶ ವಿಭಜನೆ ಹೇಳಿಕೆ ನೀಡಿದ್ದ ಡಿಕೆ ಸುರೇಸ್ ವಿರುದ್ಧ ಆಕ್ರೋಶ ಹೊರಹಾಕುವ ಭರದಲ್ಲಿ ಬಿಜೆಪಿ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ ಅವರು, ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ್​ ಕುಲಕರ್ಣಿ ರೀತಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದರು.

ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿತ್ತು. ಕೆ.ಎಸ್​.ಈಶ್ವರಪ್ಪ ಹೇಳಿಕೆ ವಿಚಾರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದರು. ಅಲ್ಲದೆ, ಕಾಂಗ್ರೆಸ್ ಮುಖಂಡ ಹನುಮಂತಪ್ಪ ಅವರು ನೀಡಿದ ದೂರಿನ ಅನ್ವಯ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಅಲ್ಲದೆ, ಆರ್‌ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ನೀಡಿದ ದೂರಿನ ಅನ್ವಯ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಇಷ್ಟರಲ್ಲೇ ಈಶ್ವರಪ್ಪರಲ್ಲಿಗೆ ಹೋಗಿ ಅವರ ಗುಂಡಿಗೆ ಎದೆಯೊಡ್ಡಲಿದ್ದೇನೆ: ಡಿಕೆ ಸುರೇಶ್, ಸಂಸದ

ಸದ್ಯ, ಕೆ.ಎಸ್.ಈಶ್ವರಪ್ಪ ವಿರುದ್ಧದ ಎಫ್ಐಆರ್​ಗೆ ತಡೆ ನೀಡಿದ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವ​ರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಆಕ್ಷೇಪಾರ್ಹ ಹೇಳಿಕೆ ನೀಡುವ ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡರು. ನಮ್ಮ ಧುರೀಣರು ಉತ್ತಮ ಭಾಷೆ ಯಾಕೆ ಬಳಸುತ್ತಿಲ್ಲ? ಮಾತನಾಡುವಾಗ ಉತ್ತಮ ಸಂಸ್ಕೃತಿಯನ್ನೇಕೆ‌ ಪ್ರತಿಬಿಂಬಿಸುವುದಿಲ್ಲ? ಹೀಗೆ ಮಾತನಾಡಿ ಭಾಷೆ ಮೇಲೆ ದೌರ್ಜನ್ಯ ಯಾಕೆ ಎಸಗುತ್ತಾರೆ ಎಂದು ಅಸಾಮಾಧಾನ ಹೊರಹಾಕಿದ್ದಾರೆ.

ಕರ್ನಾಟಕ ವಿವಿಧ ಸಿದ್ಧಾಂತದ ಜನರನ್ನು ಹೊಂದಿರುವ ರಾಜ್ಯವಾಗಿದ್ದು, ಭಾಷೆಯ ಬಳಕೆಯ ಬಗ್ಗೆ ರಾಜಕಾರಣಿಗಳು ಎಚ್ಚರ ವಹಿಸಬೇಕು. ಶಾಲೆ ಮಕ್ಕಳು ನಮ್ಮನ್ನು ನೋಡುತ್ತಿರುತ್ತಾರೆ ಎಂಬ ಅರಿವಿರಬೇಕು ಎಂದು ಏಕಸದಸ್ಯ ಪೀಠ ಹೇಳಿದೆ.

ಏನಿದು ಪ್ರಕರಣ?

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಡಿಮೆ ಅನುದಾನ ಹಂಚಿಕೆ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಸಂಬಂಧ ಮಾತನಾಡಿದ್ದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್, ದಕ್ಷಿಣ ಭಾರತ ವಿಭಜನೆಯ ಮಾತನಾಡಿದ್ದರು. ಇದನ್ನು ವಿಪಕ್ಷ ಬಿಜೆಪಿ ತೀವ್ರ ತರಾಟೆಗೆ ತೆಗದುಕೊಂಡಿತ್ತು. ಸಂಸತ್​ನಲ್ಲೂ ಸದ್ದು ಮಾಡಿತ್ತು.

ದಾವಣಗೆರೆಯಲ್ಲಿ ಫೆ.8 ರಂದು ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈಶ್ವರಪ್ಪ ಅವರು ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದರು. ನಾವು ಹೀಗೆ ಬಿಡಲ್ಲ. ನಾವು ಬಿಜೆಪಿಯವರು ಪಾಕಿಸ್ತಾನವನ್ನ ಭಾರತದಲ್ಲಿ ಸೇರ್ಪಡೆ ಮಾಡಿ ಅಖಂಡ ಭಾರತ ಮಾಡುತ್ತೇವೆ ಎಂದಿದ್ದರು.

ಈಶ್ವರಪ್ಪ ಅವರ ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದರು. ತಾನು ನಿಮ್ಮ ಮುಂದೆ ಎದೆಯೊಡ್ಡಿ ನಿಲ್ಲುತ್ತೇನೆ ಎಂದು ಸುರೇಶ್ ಹೇಳಿದ್ದರು. ಈಶ್ವರಪ್ಪ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದರು. ಅಲ್ಲದೆ, ಬೆಂಗಳೂರಿನ ಚಕ್ರವರ್ತಿ ಬಡಾವಣೆಯಲ್ಲಿರುವ ಕೆ.ಎಸ್​.ಈಶ್ವರಪ್ಪ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದರು.

ಹೇಳಿಕೆ ಸಂಬಂಧ ಆರ್‌ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಎಫ್​ಐಆರ್ ದಾಖಲಿಸಿದ್ದ ಪೊಲೀಸರು ಈಶ್ವರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಇನ್ನೊಂದೆಡೆ, ದಾವಣಗೆರೆ‌‌ ನಗರದ ನಿಜಲಿಂಗಪ್ಪ ಬಡಾವಣೆ ನಿವಾಸಿ ಕಾಂಗ್ರೆಸ್ ಮುಖಂಡ ಹನುಮಂತಪ್ಪ ಎಂಬುವವರು ನೀಡಿದ ದೂರು ಆಧರಿಸಿ ಐಪಿಸಿ ಸೆಕ್ಷನ್​ 505(1)ಸಿ, 505(2), 506ರ ಅಡಿ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು