ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಿ ಎಂದಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್​ಐಆರ್

ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂದು ದಾಖಲಾದ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಿ ಎಂದಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್​ಐಆರ್
ಚಂದ್ರಶೇಖರನಾಥ ಸ್ವಾಮೀಜಿ
Follow us
Shivaprasad
| Updated By: Ganapathi Sharma

Updated on: Nov 29, 2024 | 6:46 AM

ಬೆಂಗಳೂರು, ನವೆಂಬರ್ 29: ‘ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂಬ ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ಬಿಎನ್​​ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸ್ವಾಮೀಜಿಯ ಹೇಳಿಕೆಗಳು ಪ್ರಚೋದನಕಾರಿಯಾಗಿದ್ದು, ಕೋಮು ಸೌಹಾರ್ದತೆಗೆ ಧಕ್ಕೆ ತರಬಹುದು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ನವೆಂಬರ್ 26 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ವತಿಯಿಂದ ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಸ್ತುತ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮಗಳನ್ನು ಅನುಸರಿಸುವ ನಿರೀಕ್ಷೆಯಿದೆ.

ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ಏನು?

‘‘ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ. ಅಷ್ಟು ಪ್ರೀತಿ ಇದ್ದರೆ ನಿಮ್ಮ ಮನೆ, ಸೈಟ್ ಬರೆದುಕೊಡಿ’’ ಎಂದು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದರು.

ಸ್ವಾಮೀಜಿ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಮತದಾನ ಮೂಲಭೂತ ಹಕ್ಕು, ಸಂವಿಧಾನದಲ್ಲಿ ಎಲ್ಲರಿಗೂ ಈ ಹಕ್ಕಿದೆ. ದೇಶದ ಎಲ್ಲ ನಾಗರಿಕರಿಗೆ ಮತದಾನ ಹಕ್ಕು ಇದೆ. ಯಾರಾದರೂ ಹಾಗೆ ಹೇಳಿದರೆ ಅದು ತಪ್ಪು ಎಂದು ಸಚಿವ ಮಹದೇವಪ್ಪ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು.

ಬಾಯಿತಪ್ಪಿನಿಂದ ಬಂದ ಮಾತು ಎಂದಿದ್ದ ಸ್ವಾಮೀಜಿ

ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ, ‘‘ಬಾಯಿ ತಪ್ಪಿ ಆ ಹೇಳಿಕೆ ನೀಡಿದೆ. ಅದಕ್ಕೆ ವಿಷಾದಿಸುತ್ತೇನೆ. ಮುಸ್ಲಿಮರೂ ಭಾರತೀಯರೆ. ಆದರೆ, ರೈತರಿಗೆ ಒಳ್ಳೆಯದಾಗಬೇಕು ಅಷ್ಟೇ’’ ಎಂದು ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕು: ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಚಿವ ಮಹದೇವಪ್ಪ ಗರಂ

ಕರ್ನಾಟಕದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ, ಮಠ-ಮಂದಿರಗಳಿಗೆ, ದೇಗುಲಗಳಿಗೆ ವಕ್ಫ್ ನೋಟಿಸ್ ಬಂದ ಬೆನ್ನಲ್ಲೇ ಪ್ರತಿಭಟನೆ ತೀವ್ರಗೊಂಡಿದೆ. ಅದರಂತೆ ಸ್ವಾಮೀಜಿಗಳು ಕೂಡ ಪ್ರತಿಭಟನೆಗೆ ಧುಮುಕಿದ್ದರು. ಅದರಂತೆ, ಚಂದ್ರಶೇಖರನಾಥ ಸ್ವಾಮೀಜಿ ಕೂಡ ಪ್ರತಿಭಟನೆಯಲ್ಲಿನ ಭಾಗವಹಿಸಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್