ಬಿಲ್ಲವ ಹೆಣ್ಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ ವಿರುದ್ಧ ಕೇಸ್ ಬುಕ್: ಆಡಿಯೋದಲ್ಲೇನಿದೆ?

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಮೊದಲು ದೂರು ನೀಡಿದರೂ ಪ್ರಕರಣ ದಾಖಲಿಸಿರಲಿಲ್ಲ. ಹೀಗಾಗಿ ಹಿಂದೂ ಜಾಗರಣ ವೇದಿಕೆ ನಾಳೆ ಪ್ರತಿಭಟನೆಗೆ ಎಚ್ಚರಿಕೆ ನೀಡಿತ್ತು. ಪ್ರತಿಭಟನೆಯ ಬಿಸಿ ಬೆನ್ನಲ್ಲೇ ಇದೀಗ ಎಫ್​ಐಆರ್ ದಾಖಲಿಸಲಾಗಿದೆ. 

ಬಿಲ್ಲವ ಹೆಣ್ಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ ವಿರುದ್ಧ ಕೇಸ್ ಬುಕ್: ಆಡಿಯೋದಲ್ಲೇನಿದೆ?
ಬಿಲ್ಲವ ಹೆಣ್ಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯಾಧಿಕಾರಿ ವಿರುದ್ಧ ಕೇಸ್ ಬುಕ್: ಆಡಿಯೋದಲ್ಲೇನಿದೆ?
Edited By:

Updated on: Oct 17, 2024 | 10:33 PM

ಮಂಗಳೂರು, ಅಕ್ಟೋಬರ್​ 17: ಬಿಲ್ಲವ ಸಮುದಾಯದ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಕೊನೆಗೂ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್​ಐಆರ್ (FIR)​ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ದೂರಿನಡಿ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಠಾಣೆಯಲ್ಲಿ ಎಫ್​ಐಆರ್ ಹಾಕಲಾಗಿದ್ದು, ಬಿಎನ್ಎಸ್ ಕಾಯ್ದೆ 79ರಡಿ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಮೊದಲು ದೂರು ನೀಡಿದರೂ ಪ್ರಕರಣ ದಾಖಲಿಸಿರಲಿಲ್ಲ. ಹೀಗಾಗಿ ಹಿಂದೂ ಜಾಗರಣ ವೇದಿಕೆ ನಾಳೆ ಪ್ರತಿಭಟನೆಗೆ ಎಚ್ಚರಿಕೆ ನೀಡಿತ್ತು. ಪ್ರತಿಭಟನೆಯ ಬಿಸಿ ಬೆನ್ನಲ್ಲೇ ಇದೀಗ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಹಿಂದೂ ಧರ್ಮದ ಒಂದು ಸಮಾಜದ ಹೆಣ್ಣುಮಕ್ಕಳನ್ನು ವೇಶ್ಯೆಯರು ಎಂದ ಸರ್ಕಾರಿ ಅಧಿಕಾರಿ: ಆಕ್ರೋಶ

ಪಂಜ ಉಪವಲಯದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹಿಂದೂ ಹೆಣ್ಮಕ್ಕಳ ಬಗ್ಗೆ ನಾಲಗೆ ಹರಿಬಿಟ್ಟಿದ್ದರು. ಸುರೇಶ್ ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಸರ್ಕಾರಿ ಅಧಿಕಾರಿಯ ಆಡಿಯೋ ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿತ್ತು.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಲಕ್ಷ ಬಿಲ್ಲವ ಹುಡುಗಿಯರು ಸೂ…. ಆಗಿದ್ದಾರೆ’‌ ‘ಇದಕ್ಕೆ ನನ್ನ ಬಳಿ 10,000 ದಾಖಲೆ ಕೂಡ ಇದೆ’ ‘ಹಿಂದುತ್ವದ ಹುಡುಗರು ಸೂ…ನ್ನಾಗಿ ಮಾಡಿದ್ದಾರೆ’ ‘ಬಿಲ್ಲವ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ’ ‘ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದ್ದರು’ ಎಂದು ಫೋನ್‌ನಲ್ಲಿ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ನದಿ, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಈ ಹಿಂದೆ ಕೂಡ ವಿವಾದದಿಂದಾಗಿ ಸೇವೆಯಿಂದ ಅಮಾನತ್ತಾಗಿದ್ದರು. ಇದೀಗ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಅಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದಿದ್ದರೆ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ತಕ್ಷಣ ಆತನನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Thu, 17 October 24

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us