ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಕುಡಿಯಲು ನೀರು ಕೇಳಿ ಯುವತಿ ಜೊತೆ ಫುಡ್ ಡೆಲಿವರಿ ಬಾಯ್​​ ದುರ್ವರ್ತನೆ, FIR ದಾಖಲು
ಸಾಂದರ್ಭಿಕ ಚಿತ್ರ
Follow us
Shivaprasad
| Updated By: ಆಯೇಷಾ ಬಾನು

Updated on:Mar 21, 2024 | 9:51 AM

ಬೆಂಗಳೂರು, ಮಾರ್ಚ್​.21: ಫುಡ್ ಡೆಲಿವರಿ ಬಾಯ್​​ನಿಂದ (Food Delivery Boy) ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಹೆಚ್​​ಎಎಲ್ ಪೊಲೀಸ್ ಠಾಣಾ (HAL Police Station) ವ್ಯಾಪ್ತಿಯಲ್ಲಿ ಮಾ.17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್ ಆಕಾಶ್ ಬಿ ಎಂಬುವಾತ ಕುಡಿಯಲು ನೀರು ಕೇಳಿ ಮನೆಗೆ ನುಗ್ಗಿ ಯುವತಿಯ ಕೈಹಿಡಿದು ಎಳೆದಾಡಿ ದೌರ್ಜನ್ಯ ಎಸಗಿದ್ದಾನೆ. ಸದ್ಯ ಯುವತಿ ದೂರಿನನ್ವಯ ಹೆಚ್​​ಎಎಲ್​​ ಪೊಲೀಸ್​ ಠಾಣೆಯಲ್ಲಿ FIR​ ದಾಖಲಾಗಿದೆ.

ಮಾರ್ಚ್ 17 ರಂದು ಸಂಜೆ 6.30ರ ವೇಳೆ ಫುಡ್ ಡೆಲಿವರಿ ಬಾಯ್ ಆಕಾಶ್, ಫುಡ್ ಡೆಲಿವೆರಿ ನೀಡಲು ಬಂದಿದ್ದ. ಈ ವೇಳೆ ತನಗೆ ಬಾಯಾರಿಕೆ ಆಗುತ್ತಿದೆ ಕುಡಿಯಲು ನೀರು ಕೊಡಿ ಎಂದು ಕೇಳಿದ್ದ. ಯುವತಿ ನೀರು ತರಲು ಹೋದಾಗ ಒಳಗೆ ನುಗ್ಗಿದ ಆಕಾಶ್ ಯುವತಿಯನ್ನು ಹಿಂಬಾಲಿಸಿ ಆಕೆಯ ಕೈ ಎಳೆದು ದೌರ್ಜನ್ಯ ಎಸಗಿದ್ದಾನೆ. ಆಗ ಯುವತಿ ಯುವಕನನ್ನು ತಳ್ಳಿ ಗಲಾಟೆ ಮಾಡಿದ್ದಾರೆ. ಘಟನೆ ಸಂಬಂಧ 30 ವರ್ಷದ ಯುವತಿ ಹೆಚ್​ಎಎಲ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಹಿನ್ನಲೆ ಐಪಿಸಿ ಸೆಕ್ಷನ್ 354 a ಅಡಿ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಇನ್ನು ಮುಂದೆ ಹೊಯ್ಸಳ ಪೊಲೀಸರಿಗೆ ಬಂದೂಕು ಕಡ್ಡಾಯ: ಕಾರಣ ಇಲ್ಲಿದೆ

ಬಸ್​ನಲ್ಲಿ ಆ್ಯಸಿಡ್ ಬಾಟಲ್​ಗಳು ಸ್ಫೋಟ

ಬಸ್​ನಲ್ಲಿ ಶೌಚಾಲಯಕ್ಕೆ ಬಳಸುವ ಌಸಿಡ್ ಬಾಟಲ್ ಸ್ಫೋಟಗೊಂಡು ಹಲವರು ಗಾಯಗೊಂಡಿದ್ದಾರೆ. ತುಮಕೂರಿನ ಗೂಳೂರು ಬಳಿ‌ ಕುಣಿಗಲ್​ನಿಂದ ತುಮಕೂರು ಕಡೆ ಬರುತ್ತಿದ್ದ ಗಣಪತಿ ಬಸ್ ಘಟನೆ ನಡೆದಿದೆ. ಶಕೀಲಾ ಬಾನು ಎಂಬಾಕೆ ಌಸಿಡ್ ಬಾಟಲ್​ಗಳನ್ನು ತಂದಿದ್ದಳು. ಈ ವೇಳೆ ಬಾಟಲ್​​ಗಳು ಸ್ಫೋಟಗೊಂಡು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಹಾಗೂ FSL ಟೀಂ ಭೇಟಿ ನೀಡಿ ಪರಿಶೀಲಿಸಿವೆ.

ಹುಲಿ ದಾಳಿಗೆ ಐದು ಹಸುಗಳು ಬಲಿ

ಹುಲಿ ದಾಳಿಗೆ ಐದು ಹಸುಗಳು ಬಲಿಯಾಗಿವೆ. ಚಿಕ್ಕಮಗಳೂರು ತಾಲೂಕಿನ ಕಠಾರದಹಳ್ಳಿಯಲ್ಲಿ ಘಟನೆ ನಡೆದಿದ್ದು, ಚಂದ್ರು-ಮುಳ್ಳಪ್ಪ ಎಂಬುವರಿಗೆ ಸೇರಿದ ಹಸುಗಳು ಬಲಿಯಾಗಿವೆ. ಮೇಯಲು ಹೋಗಿದ್ದ ಹಸುಗಳು ಮನೆಗೆ ಬಂದಿರಲಿಲ್ಲ. ಹೋಗಿ ನೋಡಿದಾಗ ಕಾಫಿ ತೋಟದಲ್ಲಿ ಹಸುವಿನ ಮೃತದೇಹ ಪತ್ತೆಯಾಗಿದೆ. ಆನೆ ದಾಳಿಯಿಂದ ಕಂಗಾಲಾಗಿದ್ದ ಜನರಿಗೆ ಈಗ ಹುಲಿ ದಾಳಿಯಿಂದ ಆತಂಕ ಎದುರಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:49 am, Thu, 21 March 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್