ಬ್ಯಾಂಕ್​ಗೆ ಸಾಲ ತೀರಿಸದ ಆರೋಪ: ರಮೇಶ್​ ಜಾರಕಿಹೊಳಿ ವಿರುದ್ಧ ಎಫ್​ಐಆರ್​ ದಾಖಲು

ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ವಿವಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನಲ್ಲಿ ಸಾಲ ಪಡೆದು ಪಾವತಿಸದೇ ಮೋಸ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ರಾಜಣ್ಣ ವಿವಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬ್ಯಾಂಕ್​ಗೆ ಸಾಲ ತೀರಿಸದ ಆರೋಪ: ರಮೇಶ್​ ಜಾರಕಿಹೊಳಿ ವಿರುದ್ಧ ಎಫ್​ಐಆರ್​ ದಾಖಲು
FIR, ರಮೇಶ್​ ಜಾರಕಿಹೊಳಿ
Follow us
| Updated By: ವಿವೇಕ ಬಿರಾದಾರ

Updated on:Jan 07, 2024 | 10:53 AM

ಬೆಂಗಳೂರು, ಜನವರಿ 07: ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ವಿವಿಪುರಂ ಪೊಲೀಸ್​ (Police) ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನಲ್ಲಿ ಸಾಲ (Loan) ಪಡೆದು ಪಾವತಿಸದೇ ಮೋಸ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ರಾಜಣ್ಣ ವಿವಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾ​​​ಕ್​​ ಫಾಲ್ಸ್​​ ರಸ್ತೆಯಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್​​ ಲಿಮಿಟೆಡ್​​​ ಕಂಪನಿಯ ಅಧ್ಯಕ್ಷ ರಮೇಶ್​ ಜಾರಕಿಹೊಳಿ, ನಿರ್ದೇಶಕ ವಸಂತ್​ ವಿ ಪಾಟೀಲ್​ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶಂಕರ್​ ಎ ಪಾವಡೆ ಅವರು ಕಾರ್ಖಾನೆ ಸ್ಥಾಪನೆ, ವಿಸ್ತರಣೆ ಮತ್ತು ನಿರ್ವಹಣೆಯ ಹಣಕ್ಕಾಗಿ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ ನಿಯಮಿತ ಕೇಂದ್ರ ಕಛೇರಿಗೆ ಅರ್ಜಿಸಲ್ಲಿಸಿದರು.

ಆರೋಪಿಗಳು ಬ್ಯಾಂಕ್​ನವರು ವಿಧಿಸಿದ ಷರತ್ತುಗಳನ್ನು ಒಪ್ಪಿ, ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ ಮತ್ತು ಇದರ ಸಮೂಹ ಬ್ಯಾಂಕ್​ಗಳಾದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ತುಮಕೂರು ಜಿಲಾ ಕೇಂದ್ರ ಸಹಕಾರ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಉತ್ತರ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತಗಳಲ್ಲಿ 2013ರ ಡಿಸೆಂಬರ್​​ 7ರಿಂದ 2017ರ ಮಾರ್ಚ್​ 31ರ ವರೆಗೆ ಹಂತ ಹಂತವಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದರು. ಆದರೆ ಆರೋಪಿಗಳು ಸಾಲದ ಹಣವನ್ನು ಕಟ್ಟದೆ 439 ಕೋಟಿ 7 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದಾರೆ.

ಅಲ್ಲದೇ ಆರೋಪಿಗಳು ಸಾಲ ಪಡೆಯುವ ಸಮಯದಲ್ಲಿ ಸೌಭಾಗ್ಯ, ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಯ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರಾಗಿದ್ದರು. ಆದರೆ ಸಾಲ ಪಡೆದ ನಂತರ, ಅದನ್ನು ತೀರಿಸದೆ ಕಂಪನಿಯ ಜವಾಬ್ದಾರಿಯಿಂದ ಹೊರಬಂದು, ಬೇರೆಯವರನ್ನು ಅಧಿಕಾರಕ್ಕೆ ನೇಮಿಸಿದ್ದಾರೆ.

ಇದನ್ನೂ ಒದಿ: ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

ಆದರೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನ​ ಷರತ್ತಿನ ಪ್ರಕಾರ, ಸಾಲವನ್ನು ಮಂಜೂರು ಮಾಡುವ ಸಮಯದಲ್ಲಿ, ಸಾಲ ಮರುಪಾವತಿಯಾಗುವವರೆಗೆ ಬ್ಯಾಂಕ್​ನ ಅನುಮತಿ ಇಲ್ಲದೇ ಕಂಪನಿಯ (ಆಡಳಿತ ಮಂಡಳಿಯ) ವ್ಯವಸ್ಥಾಪಕ ನಿರ್ದೇಶಕ ಆಗಲಿ. ನಿರ್ದೇಶಕರನ್ನಾಗಲಿ ಬದಲಾಯಿಸುವಂತಿಲ್ಲ. ಆದರೆ ಇಲ್ಲಿ ಬದಲಾಯಿಸಲಾಗಿದೆ.

ಆರೋಪಿಗಳು ತಾವು ಪಡೆದ ಸಾಲವನ್ನು ಬ್ಯಾಂಕ್​ಗೆ ಮರುಪಾವತಿ ಮಾಡುವುದರಿಂದ ತಪ್ಪಿಸಿಕೊಂಡು ಬ್ಯಾಂಕ್​ಗೆ ಮೋಸ ಮಾಡಬೇಕೆಂಬ ಉದ್ದೇಶದಿಂದ ಬ್ಯಾಂಕ್​ನವರಿಗೆ ಯಾವುದೇ ಮಾಹಿತಿ ನೀಡದೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಯ ಆಡಳಿತ ಮಂಡಳಿಯಲಿದ ತಮ್ಮ ಹುದ್ದೆಗಳಿಂದ ಹೊರಬಂದು ಸಂಬಂಧವಿಲ್ಲದ ವ್ಯಕ್ತಿಗಳನ್ನು ಕಂಪನಿಗೆ ನಿರ್ದೇಶಕರನ್ನಾಗಿ ನೇಮಿಸಿ ಬ್ಯಾಂಕ್​ನವರಿಗೆ ನಂಬಿಕೆ ದ್ರೋಹವೆಸಗಿ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್​​ 420 (ವಂಚನೆ) ಪ್ರಕರಣದ A1 ಶಾಸಕ ರಮೇಶ್ ಜಾರಕಿಹೊಳಿ, ವಸಂತ್ ವಿ ಪಾಟೀಲ್, ಶಂಕರ್ ಪವಾಡೆ ವಿರುದ್ಧ ಎಫ್​ಐಆರ್ ದಾಖಲಾಗಿದೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:24 am, Sun, 7 January 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು