AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊಮ್ಯಾಟೋ ಪ್ರಕರಣ: ಹಿತೇಶಾ ಚಂದ್ರಾಣಿ ವಿರುದ್ಧ ಡೆಲಿವರಿ ಬಾಯ್ ಕಾಮರಾಜ್ ದೂರು, ಎಫ್​ಐಆರ್ ದಾಖಲು

Zomato Incident: ಜೊಮ್ಯಾಟೋ ಫುಡ್​ ಡೆಲಿವರಿ ಬಾಯ್ ಕಾಮರಾಜ್ ದೂರಿನ ಮೇರೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ಜೊಮ್ಯಾಟೋ ಪ್ರಕರಣ: ಹಿತೇಶಾ ಚಂದ್ರಾಣಿ ವಿರುದ್ಧ ಡೆಲಿವರಿ ಬಾಯ್ ಕಾಮರಾಜ್ ದೂರು, ಎಫ್​ಐಆರ್ ದಾಖಲು
ಯುವತಿ ಹಿತೇಶಾ ಚಂದ್ರಾಣಿ - ಡೆಲಿವರಿ ಬಾಯ್​ ಕಾಮರಾಜ್​
TV9 Web
| Updated By: ganapathi bhat|

Updated on:Apr 06, 2022 | 7:06 PM

Share

ಬೆಂಗಳೂರು: ಹಿತೇಶಾ ಚಂದ್ರಾಣಿ ಎಂಬಾಕೆಯ ಮೇಲೆ ಜೊಮ್ಯಾಟೋ ಫುಡ್ ಡೆಲಿವರಿ ಬಾಯ್ ಕಾಮರಾಜ್ ಹಲ್ಲೆಗೈದ ಆರೋಪ ವಿಚಾರಕ್ಕೆ ಸಂಬಂಧಿಸಿ, ಯುವತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಜೊಮ್ಯಾಟೋ ಫುಡ್​ ಡೆಲಿವರಿ ಬಾಯ್ ಕಾಮರಾಜ್ ದೂರಿನ ಮೇರೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ಡೆಲಿವರಿ ಬಾಯ್ ಕಾಮರಾಜ್ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಈ ಮೊದಲು ಯುವತಿ ಹಿತೇಶಾ ಚಂದ್ರಾಣಿ ದೂರು ಸಲ್ಲಿಸಿದ್ದಳು. ಇದೀಗ ಫುಡ್ ಡೆಲಿವರಿ ಬಾಯ್ ಕಾಮರಾಜ್  ಐಪಿಸಿ ಸೆಕ್ಷನ್ 355 (ಹಲ್ಲೆ), 504 (ನಿಂದನೆ) ಮತ್ತು 506 (ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿದ್ದಾನೆ. ಯುವತಿ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ಕಾಮರಾಜು.. ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಕೇಂದ್ರಬಿಂದುವಾಗಿದ್ದಾರೆ. ಬೆಂಗಳೂರಿನ ಮಹಿಳೆ ಹಿತೇಶಾ ಚಂದ್ರಾಣಿ ಇವರ ವಿರುದ್ಧ ಮಾಡಿದ ಆರೋಪದ ಪರಿಣಾಮ ಕಾಮರಾಜುವನ್ನು ಜೊಮ್ಯಾಟೊ ತಾತ್ಕಾಲಿಕವಾಗಿ ಅಮಾನತು ಮಾಡಿದೆ. ಇನ್ನು ಜೈಲಿಗೂ ಹೋಗಿಬಂದಿದ್ದಾರೆ. ಮಹಿಳೆಯೊಬ್ಬಳ ಕಣ್ಣೀರು..ಗಾಯ ಮತ್ತು ಆರೋಪದಿಂದ ಕಾಮರಾಜು ನಿಜಕ್ಕೂ ಸಂಕಷ್ಟಕ್ಕೀಡಾಗಿದ್ದಾರೆ. ಇಲ್ಲಿ ಯಾರದ್ದು ಸರಿ, ಯಾರದ್ದು ತಪ್ಪು ಎಂಬ ಸ್ಪಷ್ಟನೆ ಇನ್ನೂ ಸಿಕ್ಕಿಲ್ಲ. ಮೊದಲು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದ ಹಿತೇಶಾ, ಕಾಮರಾಜು ಮೇಲೆ ಆರೋಪ ಮಾಡಿದ್ದರು. ನಾನು ಮನೆಯಲ್ಲಿ ಒಬ್ಬಳೇ ಇದ್ದೆ. ಜೊಮ್ಯಾಟೊದಿಂದ ಫುಡ್​ ಆರ್ಡರ್​ ಮಾಡಿದ್ದೆ. ಈತ ತಡವಾಗಿ ಬಂದಿದ್ದಲ್ಲದೆ, ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ ಎಂದು ಹೇಳಿದ್ದರು.

ಅದಾದ ಬಳಿಕ ಕಾಮರಾಜು ಅರೆಸ್ಟ್ ಆದರು. ಜಾಮೀನು ಪಡೆದು ಹೊರಬಂದ ಬಳಿಕ ವಿಡಿಯೋವೊಂದನ್ನು ಮಾಡಿ, ನನ್ನದೇನೂ ತಪ್ಪಿಲ್ಲ. ಟ್ರಾಫಿಕ್​ ಇದ್ದರೂ ಸಾದ್ಯವಾದಷ್ಟು ಬೇಗ ಹೋಗಿ ಮಹಿಳೆಗೆ ಊಟ ತಲುಪಿಸಿದೆ. ಅವರು ನನ್ನ ಮೇಲೆ ರೇಗಿದರು. ಹೊಡೆಯಲು ಬಂದಾಗ ತಪ್ಪಿಸಿಕೊಂಡೆ.. ಈ ವೇಳೆ ಅವರ ಕೈಲಿದ್ದ ಉಂಗುರವೇ ತಾಗಿ ಮೂಗಿನ ಮೇಲೆ ಗಾಯವಾಗಿದೆ. ನನಗೆ ಈ ಕೇಸ್​ನಿಂದ ಹೊರಬರಬೇಕು, ದಯವಿಟ್ಟು ಸಹಾಯ ಮಾಡಿ ಎಂದು ಕಣ್ಣೀರು ಹಾಕುತ್ತ ಹೇಳಿಕೊಂಡಿದ್ದರು. ಇನ್ನು ಕಾಮರಾಜು ಅವರನ್ನು ಅಮಾನತು ಮಾಡಿದ್ದರೂ ಅವರ ಕಾನೂನು ಹೋರಾಟದ ವೆಚ್ಚವನ್ನು ನೋಡಿಕೊಳ್ಳುತ್ತೇವೆ ಎಂದು ಜೊಮ್ಯಾಟೊ ಹೇಳಿಕೊಂಡಿದೆ.

ಇಷ್ಟೆಲ್ಲ ಆದಮೇಲೆ ನೆಟ್ಟಿಗರು ಕಾಮರಾಜುಗೆ ಬೆಂಬಲ ನೀಡುತ್ತಿದ್ದಾರೆ. ಮಹಿಳೆ ಎಂಬ ಕಾರಣಕ್ಕೆ ಅವರ ಕಣ್ಣೀರು ಮಾತ್ರ ನೋಡಬೇಡಿ. ಇಲ್ಲಿ ಸತ್ಯವೇನು ಎಂಬುದನ್ನು ತನಿಖೆ ಮಾಡಿ. ಫುಡ್​ ಡೆಲಿವರಿ ಬಾಯ್​ ಕಾಮರಾಜು ಮುಗ್ಧರಂತೆ ಕಾಣುತ್ತಾರೆ. ಅವರನ್ನು ಕೆಲಸದಿಂದ ತೆಗೆದು ಹೊಟ್ಟೆಮೇಲೆ ಹೊಡೆಯಬೇಡಿ ಎಂದು ಅನೇಕರು ತಮ್ಮ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಹಾಕುವ ಮೂಲಕ ಕಾಮರಾಜು ಪರ ನಿಂತಿದ್ದಾರೆ. ನಿನ್ನೆ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಕೂಡ ಕಾಮರಾಜು ಪರ ವಹಿಸಿದ್ದರು. ಆದಷ್ಟು ಬೇಗ ಘಟನೆಯ ಸತ್ಯ ಹೊರಬರಲಿ. ಮಹಿಳೆ ಮಾಡಿದ ಆರೋಪ ಸುಳ್ಳು ಎಂದಾದರೆ ಆಕೆಯೂ ಶಿಕ್ಷೆಯನ್ನು ಅನುಭವಿಸಲೇಬೇಕು. ಈ ವಿಚಾರದಲ್ಲಿ ನಾನು ಏನೇ ಸಹಾಯ ಮಾಡಲೂ ಸಿದ್ಧ ಎಂದಿದ್ದರು.

ಇದನ್ನೂ ಓದಿ: ಜೊಮ್ಯಾಟೊ ಫುಡ್​ ಡೆಲಿವರಿ ಬಾಯ್ ಕಾಮರಾಜು​ ಪರ ನಿಂತ ಬಾಲಿವುಡ್​ನ ಖ್ಯಾತ​ ನಟಿ; ಆರೋಪ ಮಾಡಿದ ಮಹಿಳೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ

ಊಟ ಕೊಡ್ರಪ್ಪಾ, ಹೊಡೀಬೇಡಿ: ಜೊಮ್ಯಾಟೋಗೆ ಪಾಠ ಹೇಳಿದ ನೆಟ್ಟಿಗರು

Published On - 10:13 pm, Mon, 15 March 21

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ