AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಪದದಿಂದ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ಎಫ್​ಐಆರ್​

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ವೇಳೆ ಸದನದೊಳಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಪದದಿಂದ ನಿಂದನೆ ಮಾಡಲಾಗಿದೆ ಎಂದು ಬಿಜೆಪಿಯ ಸಿಟಿ ರವಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ಈ ಸಂಬಂಧ ಸಿಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್​ ಪೊಲೀಸರಿಗೆ ದೂರು ನೀಡಿದ್ದು, ಇದೀಗ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಪದದಿಂದ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ಎಫ್​ಐಆರ್​
ಸಿಟಿ ರವಿ
Sahadev Mane
| Edited By: |

Updated on:Dec 19, 2024 | 6:56 PM

Share

ಬೆಳಗಾವಿ, (ಡಿಸೆಂಬರ್ 19): ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ಬರೆದುಕೊಟ್ಟಿದ್ದಾರೆ. ಈ ದೂರಿನ ಮೇರೆಗೆ ಇದೀಗ ಸಿಟಿ ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಹೀಗಾಗಿ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳಿವೆ.

ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ: ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಪದದಿಂದ ನಿಂದಿಸಿದ್ರಾ ಸಿಟಿ ರವಿ? ಅಷ್ಟಕ್ಕೂ ಆಗಿದ್ದೇನು?

ಈ ಎಫ್​ಐಆರ್ ದಾಖಲಾಗುತ್ತಿದ್ದಂತೆಯೇ ಇದೀಗ ಹಿರೇಬಾಗೇವಾಡಿ ಪೊಲೀಸರು, ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಸದ್ಯ ಸುವರ್ಣ ಸೌಧದಲ್ಲೇ ಇರುವ ಸಿಟಿ ರವಿ ಅವರನ್ನು ಯಾವುದೇ ಸಂದರ್ಭದಲ್ಲೂ ಬಂಧಿಸಬಹುದು. ಇನ್ನು ಸೆಕ್ಷನ್ 75-ಲೈಂಗಿಕ ಬಣ್ಣದ ಟೀಕೆಗೆ 1 ವರ್ಷದವರೆಗೆ ಸೆರೆವಾಸ ಅಥವಾ ದಂಡ ಹಾಗೂ ಸೆಕ್ಷನ್79 ಪದಪ್ರಯೋಗ ಅಥವಾ ಸಂಜ್ಙೆಗಳ ಮೂಲಕ‌ ಮಹಿಳೆಯ ಗೌರವಕ್ಕೆ ಧಕ್ಕೆಗೆ 3 ವರ್ಷದವರೆಗೆ ಸೆರೆವಾಸ ಮತ್ತು ದಂಡ ವಿಧಿಸಬಹುದು.

ರಾಜ್ಯಸಭೆಯಲ್ಲಿ ಅಮಿತ್‌ ಶಾ (Amit Shah) ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ (Vidhan Parishad) ಇಂದು ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿತ್ತು. ಬಳಿಕ ಸುವರ್ಣಸೌಧದಲ್ಲಿ ಕೋಲಾಹಲವೇ ಆಯ್ತು.

ಯಾವಾಗ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆಯೇ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರು ಸಿಟಿ ರವಿ ವಿರುದ್ಧ ಸಿಡಿದೆದ್ದಿದ್ದು, ಅವರ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಸುವರ್ಣ ಸೌಧಕ್ಕೆ ನುಗ್ಗಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Thu, 19 December 24

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ