ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು
ಪ್ರಕರಣಕ್ಕೆ ಸಂಬಂಧಿಸಿ ಸೌಮ್ಯರೆಡ್ಡಿ ವಿರುದ್ಧ ಈಗ ಎಫ್ ಐಆರ್ ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಭಾರತೀಯ ನೀತಿ ಸಂಹಿತೆ ಕಲಂ 353 ಅಡಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನವೆಂಬರ್ 20ರಂದು ಫ್ರೀಡಂ ಪಾರ್ಕ್ನಿಂದ ರಾಜಭವನದವರೆಗೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ವಶಕ್ಕೆ ಪಡೆಯಲು ಬಂದ ಪೊಲೀಸರಿಗೆ ಶಾಸಕಿ ಸೌಮ್ಯಾ ರೆಡ್ಡಿ ಅವಾಜ್ ಹಾಕಿದ್ದರು. ಲೇಡಿ ಕಾನ್ಸ್ಟೇಬಲ್ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿತ್ತು. ಈ ವೇಳೆ ಸೌಮ್ಯಾ ರೆಡ್ಡಿ ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿದ್ದಾರೆ.
ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಸೌಮ್ಯರೆಡ್ಡಿ ವಿರುದ್ಧ ಈಗ ಎಫ್ ಐಆರ್ ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಭಾರತೀಯ ನೀತಿ ಸಂಹಿತೆ ಕಲಂ 353 ಅಡಿ ಎಫ್ಐಆರ್ ದಾಖಲಾಗಿದೆ.
ಲೇಡಿ ಕಾನ್ಸ್ಟೇಬಲ್ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್
Published On - 8:00 pm, Fri, 22 January 21