ಬೆಂಗಳೂರು, (ಮೇ 17): ಏರ್ ಇಂಡಿಯಾ ವಿಮಾನವೊಂದರಲ್ಲಿ (Air India Flight) ಅಗ್ನಿ ಅವಘಡ ಸಂಭವಿಸಿರುವ ವರದಿಯಾಗಿದೆ. ಇಂದು (ಮೇ 17) ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ (New Delhi) ಬೆಂಗಳೂರಿಗೆ(Bengaluru) ಬರುತ್ತಿದ್ದ ಏರ್ ಇಂಡಿಯಾ ವಿಮಾನದ ಬೆಂಕಿ(Fire) ಕಾಣಿಸಿಕೊಂಡಿದೆ. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 175 ಪ್ರಯಾಣಿಕರಿದ್ದ ವಿಮಾನ ಟೇಕ್ ಆಫ್ ಆಗುವ ವೇಳೆ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಅಲರ್ಟ್ ಮಾಡಿದ್ದು, ಕೂಡಲೇ ಪೈಲೆಟ್ ವಿಮಾನವನ್ನು ದೆಹಲಿ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ್ದಾರೆ. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಇಂದು (ಮೇ 17) ಬೆಳಗ್ಗೆ ಅಷ್ಟೇ ಪುಣೆಯ ವಿಮಾನ ನಿಲ್ದಾಣದ ರನ್ವೇಯಲ್ಲಿ ಏರ್ ಇಂಡಿಯಾ ವಿಮಾನವು ಟಗ್ ಟ್ರ್ಯಾಕ್ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯ ಸಂದರ್ಭದಲ್ಲಿ ವಿಮಾನದಲ್ಲಿ ಸುಮಾರು 180 ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು, ಈ ಘಟನೆಯಲ್ಲಿ ವಿಮಾನದ ಮುಂಭಾಗ ಹಾಗೂ ಭೂಸ್ಪರ್ಶ ಮಾಡುವ ಗೇರ್ ಬಳಿ ಇರುವ ಟೈರ್ ಗೆ ಹಾನಿಯಾಗಿದೆ. ಡಿಕ್ಕಿಯ ಹೊರತಾಗಿಯೂ ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:32 pm, Fri, 17 May 24