ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 10 ಗಂಟೆಗಳ ಸತತ ಕಾರ್ಯಾಚರಣೆ ಬಳಿಕವೂ ನಿಯಂತ್ರಣಕ್ಕೆ ಬಾರದ ಬೆಂಕಿ
ನಗರದ ತರಳು ಗ್ರಾಮದ ಬಳಿಯಿರುವ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸತತ ಕಾರ್ಯಾಚರಣೆ ನಡೆಸಿದ ಬಳಿಕವೂ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಬೆಂಗಳೂರು: ನಗರದ ತರಳು ಗ್ರಾಮದ ಬಳಿಯಿರುವ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸತತ ಕಾರ್ಯಾಚರಣೆ ನಡೆಸಿದ ಬಳಿಕವೂ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ.
ಕಳೆದ 10 ಗಂಟೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ 50ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದಾರೆ.
ಈ ನಡುವೆ, ಅಗರಬತ್ತಿ ಕಾರ್ಖಾನೆಯಲ್ಲಿದ್ದ ಕಚ್ಚಾ ವಸ್ತುಗಳು ಬೆಂಕಿಗಾಹುತಿಯಾಗಿದೆ. ಆದರೆ, ಅದೃಷ್ಟವಶಾತ್ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಹಳೇ ಲವರ್ ಜೊತೆ ಫೊನ್ನಲ್ಲಿ ಮಾತಾಡಿದ್ದಕ್ಕೆ ಜಗಳ: ಗಂಡನ ಮೇಲಿನ ಕೋಪಕ್ಕೆ ಮಗನನ್ನು ಕೊಂದ ತಾಯಿ
Published On - 11:49 pm, Fri, 29 January 21