ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 10 ಗಂಟೆಗಳ ಸತತ ಕಾರ್ಯಾಚರಣೆ ಬಳಿಕವೂ ನಿಯಂತ್ರಣಕ್ಕೆ ಬಾರದ ಬೆಂಕಿ

|

Updated on: Jan 29, 2021 | 11:50 PM

ನಗರದ ತರಳು ಗ್ರಾಮದ ಬಳಿಯಿರುವ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸತತ ಕಾರ್ಯಾಚರಣೆ ನಡೆಸಿದ ಬಳಿಕವೂ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 10 ಗಂಟೆಗಳ ಸತತ ಕಾರ್ಯಾಚರಣೆ ಬಳಿಕವೂ ನಿಯಂತ್ರಣಕ್ಕೆ ಬಾರದ ಬೆಂಕಿ
ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ
Follow us on

ಬೆಂಗಳೂರು: ನಗರದ ತರಳು ಗ್ರಾಮದ ಬಳಿಯಿರುವ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸತತ ಕಾರ್ಯಾಚರಣೆ ನಡೆಸಿದ ಬಳಿಕವೂ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ.

ಕಳೆದ 10 ಗಂಟೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ 50ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದಾರೆ.

ಈ ನಡುವೆ, ಅಗರಬತ್ತಿ ಕಾರ್ಖಾನೆಯಲ್ಲಿದ್ದ ಕಚ್ಚಾ ವಸ್ತುಗಳು ಬೆಂಕಿಗಾಹುತಿಯಾಗಿದೆ. ಆದರೆ, ಅದೃಷ್ಟವಶಾತ್‌ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಹಳೇ ಲವರ್​ ಜೊತೆ ಫೊನ್​ನಲ್ಲಿ ಮಾತಾಡಿದ್ದಕ್ಕೆ ಜಗಳ: ಗಂಡನ ಮೇಲಿನ ಕೋಪಕ್ಕೆ ಮಗನನ್ನು ಕೊಂದ ತಾಯಿ

Published On - 11:49 pm, Fri, 29 January 21