ಪಾವಗಡ: ತಿರುಮಣಿ ಬಳಿ ಸೋಲಾರ್ ಪಾರ್ಕ್‌ನಲ್ಲಿ ಅಗ್ನಿ ಅವಘಡ
ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಬಳಿಯಿರುವ ಸೋಲಾರ್ ಪಾರ್ಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಿರುಮಣಿ ಭಾಗದ ಬ್ಲಾಕ್ ನಂ.37ರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಬಳಿಯಿರುವ ಸೋಲಾರ್ ಪಾರ್ಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಿರುಮಣಿ ಭಾಗದ ಬ್ಲಾಕ್ ನಂ.37ರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿ ಅವಘಡದಲ್ಲಿ ಒಂದು ಕಾರು ಮತ್ತು ಒಂದು ಬೈಕ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಸೋಲಾರ್ ಪ್ಯಾನಲ್ಗಳ ಕೆಳಗಿರುವ ಹುಲ್ಲಿಗೆ ಬೆಂಕಿ ಬಿದ್ದಿದ್ದರಿಂದ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಜೊತೆಗೆ, ಸೋಲಾರ್ ಪ್ಯಾನಲ್ಗೆ ಡ್ಯಾಮೆಜ್ ಆಗಿಲ್ಲ.
ಇನ್ನು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ತೊಡಗಿದ್ದಾರೆ. ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Published On - 6:46 pm, Sun, 7 February 21