AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ

Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ

ಕಿರಣ್​ ಸೂರ್ಯ
| Edited By: |

Updated on:Jun 21, 2026 | 2:43 PM

Share

ಸಾಮಾನ್ಯವಾಗಿ ಪ್ರತಿ ಭಾನುವಾರದಂದು ಬೆಳಿಗ್ಗೆ 7 ಗಂಟೆಗೆ ನಮ್ಮ ಮೆಟ್ರೋ ಸಂಚಾರ ಆರಂಭವಾಗುತ್ತೆ. ಆದರೆ ಇಂದು (ಜೂನ್ 21) ವಿಶ್ವ ಯೋಗ ದಿನದ (World Yoga Day) ಹಿನ್ನೆಲೆ ನಿಗದಿತ ಸಮಯಕ್ಕಿಂತ ಎರಡು ಗಂಟೆ ಮೊದಲೇ ಅಂದರೆ ಬೆಳಿಗ್ಗೆ 5 ಗಂಟೆ ಮೆಟ್ರೋ ಸಂಚಾರ ಆರಂಭವಾಗಿದೆ. ಇನ್ನೊಂದೆಡೆ ನೀಟ್ ಪರೀಕ್ಷೆ ನಡೆಯುತ್ತಿದೆ. ಇದರ ಮಧ್ಯೆ ನಾಗಸಂದ್ರ ಮೆಟ್ರೋ ಸ್ಟೇಷನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರು, (ಜೂನ್ 21): ನಾಗಸಂದ್ರ ನಮ್ಮ ಮೆಟ್ರೋ ಸ್ಟೇಷನ್ ನಲ್ಲಿ (nagasandra Namma metro Station )ಅಗ್ನಿ ಅವಘಡ ಸಂಭವಿಸಿದೆ. ಹಸರಿ ಮಾರ್ಗದ ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದಲ್ಲಿ ಬರುವ ಮೆಟ್ರೋ ಸ್ಟೇಷನ್ ಬೆಂಕಿ ಅವಘಡ ಸಮಭವಿಸಿದೆ. ಇನ್ನು ಈ ಬೆಂಕಿ ಅವಘಡ ಬಗ್ಗೆ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಇಂದು ಮಧ್ಯಾಹ್ನ ಸುಮಾರು 1:30ಕ್ಕೆ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ಪ್ರದೇಶದ ಸಮೀಪ ಅಳವಡಿಸಲಾಗಿದ್ದ ಸೂಚನಾ ಫಲಕದಲ್ಲಿ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ದೊರೆಯುತ್ತಿದ್ದಂತೆಯೇ ಕಾರ್ಯಾಚರಣೆ ಹಾಗೂ ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ತಕ್ಷಣ ಧಾವಿಸಿ ಅಗ್ನಿಯನ್ನು ಯಶಸ್ವಿಯಾಗಿ ನಂದಿಸಿವೆ. ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಈ ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಮೆಟ್ರೋ ರೈಲು ಸಂಚಾರ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅಗತ್ಯವಿದ್ದಲ್ಲಿ ಹೆಚ್ಚಿನ ಮಾಹಿತಿಯನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.

Published on: Jun 21, 2026 01:53 PM

Follow Us