ಡಿಸ್ಟಿಲರಿ ಕಾರ್ಖಾನೆಯಲ್ಲಿ ಅಗ್ನಿ ದುರಂತ : ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ದುಗ್ಗಾವತಿಯ ಡಿಸ್ಟಿಲರಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಪಟ್ಟಂತೆ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ದಾವಣಗೆರೆ: ದುಗ್ಗಾವತಿಯ ಡಿಸ್ಟಿಲರಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಪಟ್ಟಂತೆ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ, ಕಾರ್ಮಿಕ ರಘು ಎಂಬುವರು ಬೆಂಕಿಗೆ ಆಹುತಿಯಾಗಿದ್ದರು. ಈ ಕಾರ್ಖಾನೆ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಸೇರಿದ್ದಾಗಿದ್ದು, ಅವಘಡಕ್ಕೆ ಸಂಬಂಧಪಟ್ಟಂತೆ ಡಿಸ್ಟಿಲರೀಸ್ ಕಾರ್ಖಾನೆ ಮಾಲೀಕ ಟಿ.ಜಾನ್, ಕಂಪನಿ ವ್ಯವಸ್ಥಾಪಕ ಸೇಲ್ವಾರಾಜ್ ಮತ್ತು ಎಚ್.ಆರ್. ವ್ಯವಸ್ಥಾಪಕ ರತ್ನಾಕರ ವಿರುದ್ಧ ದೂರು ದಾಖಲಾಗಿದೆ.
ಈ ಅವಘಡದಿಂದ 25 ಕೋಟಿ ರೂಪಾಯಿ ನಷ್ಟವಾಗಿದ್ದು, 29 ಟ್ಯಾಂಕ್ ಸ್ಪಿರಿಟ್ ಬೆಂಕಿಗೆ ಆಹುತಿಯಾಗಿದೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.