ಡಿಸ್ಟಿಲರಿ ಕಾರ್ಖಾನೆಯಲ್ಲಿ ಅಗ್ನಿ ದುರಂತ : ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

|

Updated on: Jan 10, 2021 | 10:54 AM

ದುಗ್ಗಾವತಿಯ ಡಿಸ್ಟಿಲರಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಪಟ್ಟಂತೆ ಮಾಲೀಕ  ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿಸ್ಟಿಲರಿ ಕಾರ್ಖಾನೆಯಲ್ಲಿ ಅಗ್ನಿ ದುರಂತ : ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಕಾರ್ಖಾನೆಯಲ್ಲಿ ಬೆಂಕಿ ಅವಘಡ
Follow us on

ದಾವಣಗೆರೆ: ದುಗ್ಗಾವತಿಯ ಡಿಸ್ಟಿಲರಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಪಟ್ಟಂತೆ ಮಾಲೀಕ  ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ, ಕಾರ್ಮಿಕ ರಘು ಎಂಬುವರು ಬೆಂಕಿಗೆ ಆಹುತಿಯಾಗಿದ್ದರು. ಈ ಕಾರ್ಖಾನೆ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಸೇರಿದ್ದಾಗಿದ್ದು, ಅವಘಡಕ್ಕೆ ಸಂಬಂಧಪಟ್ಟಂತೆ  ಡಿಸ್ಟಿಲರೀಸ್ ಕಾರ್ಖಾನೆ ಮಾಲೀಕ ಟಿ.ಜಾನ್, ಕಂಪನಿ ವ್ಯವಸ್ಥಾಪಕ ಸೇಲ್ವಾರಾಜ್ ಮತ್ತು ಎಚ್.ಆರ್. ವ್ಯವಸ್ಥಾಪಕ ರತ್ನಾಕರ ವಿರುದ್ಧ ದೂರು ದಾಖಲಾಗಿದೆ.

ಈ ಅವಘಡದಿಂದ 25 ಕೋಟಿ ರೂಪಾಯಿ ನಷ್ಟವಾಗಿದ್ದು, 29 ಟ್ಯಾಂಕ್ ಸ್ಪಿರಿಟ್ ಬೆಂಕಿಗೆ ಆಹುತಿಯಾಗಿದೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ದಾವಣಗೆರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಓರ್ವ ಕಾರ್ಮಿಕ ಸಾವು