ಕರ್ನಾಟಕದಲ್ಲಿ ಸಾಲು ಸಾಲು ಅಗ್ನಿ ದುರಂತ: ಬೆಳೆ ರಕ್ಷಿಸಿಕೊಳ್ಳಲು ಹೋಗಿ ರೈತ ಸಜೀವದಹನ
ಹೊಸ ವರ್ಷದ ಹೊಸ್ತಿಲಿನಲ್ಲಿ ಘೋರ, ಘನಘೋರ ದುರಂತ ನಡೆದು ಹೋಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಗೊರ್ಲತ್ತು ಕ್ರಾಸ್ಬಳಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ನಲ್ಲಿದ್ದ 6 ಮಂದಿ ಸಜೀವ ದಹನ ಆಗಿದ್ದು, ಈ ದುರಂತಕ್ಕೆ ಇಡೀ ಕರ್ನಾಟಕವೇ ಬೆಚ್ಚಿ ಬಿದ್ದಿದೆ. ಇದರ ನಡುವೆ ಇಂದು ಒಂದೇ ದಿನ ರಾಜ್ಯದೆಲ್ಲೆಡೆ ಸಾಲು ಸಾಲು ಅಗ್ನಿ ದುರಂತಗಳು ಸಂಭವಿಸಿದ್ದು, ಓರ್ವ ರೈತ ಬೆಂಕಿ ನಂದಿಸಲು ಹೋಗಿ ಸುಟ್ಟು ಕರಕಲಾಗಿದ್ದಾನೆ.

ದಾವಣಗೆರೆ, (ಡಿಸೆಂಬರ್ 25): ಚಿತ್ರದುರ್ಗ (Chitradruga) ಜಿಲ್ಲೆ ಹಿರಿಯೂರಿನ ಗೊರ್ಲತ್ತು ಕ್ರಾಸ್ಬಳಿ ಬಸ್ ಅಗ್ನಿ ದುರಂತದಲ್ಲಿ ಆರು ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ 32 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸೀಬರ್ಡ್ ಖಾಸಗಿ ಬಸ್ಗೆ ಲಾರಿ ಡಿವೈಡರ್ ಹಾರಿ ಬಂದು ಗುದ್ದಿದೆ. ಇದರಿಂದ ಬಸ್ ಹೊತ್ತಿ ಉರಿದಿದ್ದು, ಆರು ಜನ ಸುಟ್ಟು ಕರಕಲಾಗಿದ್ದಾರೆ. ಈ ಘಟನೆ ಇಡೀ ಕರ್ನಾಟಕವೇ (Karnataka) ಮಮ್ಮಲ ಮರುಗಿದೆ. ಇದರ ನಡುವೆ ದಾವಣಗೆರೆಯಲ್ಲಿ (Davanagere) ಅಗ್ನಿ ದುರಂತ ಸಂಭವಿಸಿದ್ದು, ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ ಮಾಡಲು ಹೋಗಿ ರೈತ ಸಜೀವ ದಹನವಾಗಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕುರುವ ಗ್ರಾಮದಲ್ಲಿ ನಡೆದಿದೆ,
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದ ಈಶ್ವರಪ್ಪ (75) ಎನ್ನುವರ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ತಾಳೆ ಮರ ಬೆಳೆಯಲಾಗಿದ್ದು, ಅದ್ಗೇಗೆ ಏನೋ ಏಕಾಏಕಿ ತಾಳಿ ಮರಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಗಾಬರಿಗೊಂಡ ರೈತ ರೈತ ಈಶ್ವರಪ್ಪ ತಾನು ಹಾಕಿದ್ದ ತಾಳೆ ಉಳಿಸಲುಕೊಳ್ಳಲು ಮುಂದಾಗಿದ್ದಾನೆ. ಆದ್ರೆ, ದುರ್ವೈವ ಬೆಂಕಿಯಲ್ಲಿ ತಾಳೆ ಜೊತೆ ರೈತ ಈಶ್ವರಪ್ಪ ಸಹ ಸಜೀವದಹನವಾಗಿದ್ದಾರೆ.
ಇದನ್ನೂ ಓದಿ: Chitradurga Bus Accident: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ತಾಯಿ-ಮಗಳು ಅಗ್ನಿಗೆ ಆಹುತಿ
ಶಾರ್ಟ್ ಸರ್ಕ್ಯೂಟ್ ಸುಟ್ಟು ಕರಕಲಾದ ಮನೆ
ಯಾದಗಿರಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಸುಟ್ಟು ಕರಕಲಾಗಿರುವ ಘಟನೆ ಇಂದು (ಡಿಸೆಂಬರ್ 25) ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಐಕೂರು ಗ್ರಾಮದಲ್ಲಿ ನಡೆದಿದೆ. ಎಲ್ಲರೂ ಕೆಲಸಕ್ಕೆ ಹೋದಾಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮಹೆಬೂಬ್ ಎನ್ನುವವರಿಗೆ ಸೇರಿದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಮನೆಯಲ್ಲ ವಾಪಿಸಿಕೊಂಡಿದೆ. ಪರಿಣಾಮ ಮನೆಯಲ್ಲಿದ್ದ 2 ಲಕ್ಷ ನಗದು ಹಾಗೂ 30 ಗ್ರಾಂ ಚಿನ್ನ ಸುಟ್ಟು ಕರಲಾಗಿದೆ.
ಪಾಪ ರೈತ ಮಹೆಬೂಬ್ ಅವರು ಹತ್ತಿ ಮಾರಾಟ ಮಾಡಿ ಹಣವನ್ನು ತಂದು ಮನೆಯಲ್ಲಿಟ್ಟಿದ್ದ. ಆದ್ರೆ, ಬೆಂಕಿಯಲ್ಲಿ ಸುಟ್ಟು ಹೋಗಿದೆ. ಜೊತೆಗೆ ದಿನಸಿ ಹಾಗೂ ದಿನ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಾಮಕದಳ ತಂಡ ದೌಡಾಯಿಸಿ ಬೆಂಕಿ ನಂದಿಸಿದರು.
ರಾಗಿ ಮೆದೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು
ರಾಮನಗರ: ಇನ್ನೊಂದೆಡೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಅಗ್ನಿ ಅವಘಡ ಸಂಭವಿಸಿದೆ. ಕಿಡಿಗಡಿಗಳು ಬೇಕಂತಲೇ ರಾಗಿ ಮೆದೆಗೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ. ಇದರಿಂದ ಒಕ್ಕಣೆ ಮಾಡಲು ಹಾಕಲಾಗಿದ್ದ ರಾಗಿ ಮೆದೆ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿ ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.
ಹೀಗೆ ಕರ್ನಾಟಕದದ ನಾನಾ ಭಾಗದಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಇದರಿಂದ ಸಾರ್ವಜನಿಕರು ಎಚ್ಚರದಿಂದ ಇರುವುದು ಒಳಿತು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




