AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಗೆರೆ ಸ್ವಾಮೀಜಿ‌ಯನ್ನು ಪೀಠದಿಂದ ಕೆಳಗಿಳಿಸಲು ದೃಢ ನಿರ್ಧಾರ, ಶಾಮನೂರು ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ

ಸಿರಿಗೆರೆ ತರಳಬಾಳು ಗುರುಪೀಠ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ದ ಅಖಿಲ ಭಾರತ ವೀರಶೈವ ಮಹಾ ಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತ್ರತ್ವದಲ್ಲಿ ಸ್ವಾಮೀಜಿ ವಿರುದ್ದ ಸ್ವ ಜಾತಿಯವರಿಂದಲೇ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಸ್ವಾಮೀಜಿ‌ರನ್ನು ಪೀಠದಿಂದ ಕೆಳಗಿಳಿಸಲು ದೃಢ ನಿರ್ಧಾರ ಕೈಗೊಳ್ಳಲಾಗಿದ್ದು, ಸಮನ್ವಯ ಸಮಿತಿ ರಚನೆ ಮಾಡಲಾಗಿದೆ.

ಸಿರಿಗೆರೆ ಸ್ವಾಮೀಜಿ‌ಯನ್ನು ಪೀಠದಿಂದ ಕೆಳಗಿಳಿಸಲು ದೃಢ ನಿರ್ಧಾರ, ಶಾಮನೂರು ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ
ಸಿರಿಗೆರೆ ಸ್ವಾಮೀಜಿ‌ಯನ್ನು ಪೀಠದಿಂದ ಕೆಳಗಿಳಿಸಲು ದೃಢ ನಿರ್ಧಾರ, ಶಾಮನೂರು ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 04, 2024 | 3:44 PM

Share

ದಾವಣಗೆರೆ, ಆಗಸ್ಟ್​ 4: ಚಿತ್ರದುರ್ಗ (Chitradurga) ಜಿಲ್ಲೆಯ ಸಿರಿಗೆರೆ ತರಳಬಾಳು ಗುರುಪೀಠ ಡಾ.ಶಿವಮೂರ್ತಿ ಶಿವಾಚಾರ್ಯಶ್ರೀ ಸ್ವಾಮೀಜಿ‌ರನ್ನು ಪೀಠದಿಂದ ಕೆಳಗೆ ಇಳಿಸಲು ಶಾಸಕ ಶಾಮನೂರ ಶಿವಶಂಕರಪ್ಪ (shamanur shivashankarappa) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೃಢ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಆಗಸ್ಟ್‌ 18ರಂದು ಸಿರಿಗೆರೆ ತರಳಬಾಳು ಮಠಕ್ಕೆ ಹೋಗಲು ನಿರ್ಧಾರ ಮಾಡಲಾಗಿದೆ. ಸ್ವಾಮೀಜಿ‌ರನ್ನು ಪೀಠದಿಂದ ಕೆಳಗೆ ಇಳಿಸಲು ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ.

ಸಿರಿಗೆರೆ ತರಳಬಾಳು ಗುರುಪೀಠ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ದ ಅಖಿಲ ಭಾರತ ವೀರಶೈವ ಮಹಾ ಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತ್ರತ್ವದಲ್ಲಿ ಸ್ವಾಮೀಜಿ ವಿರುದ್ದ ಸ್ವ ಜಾತಿಯವರಿಂದಲೇ ಆಕ್ರೋಶ ವ್ಯಕ್ತವಾಗಿದೆ. ಹಾಲಿ ಶಾಸಕ ಬಿಪಿ ಹರೀಶ್, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಮಾಜಿ ಸಚಿವ ಬಿಸಿ ಪಾಟೀಲ್, ಎಸ್​ಎ ರವೀಂದ್ರನಾಥ ಸೇರಿದಂತೆ ಪ್ರಮುಖರಿಂದ ಸ್ವಾಮೀಜಿ‌ರನ್ನು ಪೀಠದಿಂದ ಕೆಳಗೆ ಇಳಿಸುವ ಬಗ್ಗೆ ದಾವಣಗೆರೆ ನಗರದ ಹೊರವಲಯದ ಅಪೂರ್ವ ರೆಸಾರ್ಟ್​ನಲ್ಲಿ ಮಹತ್ವದ ಸಭೆ ಮಾಡಲಾಗಿದೆ.

ಸಿರಿಗೆರೆ ಮಠಕ್ಕೆ ಕೆಟ್ಟ ಹೆಸರು ಬರುತ್ತಿದೆ: ಶಾಮನೂರು ಶಿವಶಂಕರಪ್ಪ

ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ಹತ್ತು ವರ್ಷದ ಹಿಂದೆ ಸಿರಿಗೆರೆ ಸ್ವಾಮೀಜಿ ಪದತ್ಯಾಗ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಭಕ್ತರ ಆಗ್ರಹದಿಂದ ತ್ಯಾಗ ಮಾಡಲಿಲ್ಲ. ನಂತರ ಮಠದ ಟ್ರಸ್ಟ್ ತಿದ್ದು ಮಾಡಿಕೊಂಡಿದ್ದಾರೆ. ಅದು ಅಗತ್ಯ ಇತ್ತಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಿರಿಗೆರೆ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಜನ್ಮದಿನ

ಕೋರ್ಟನಲ್ಲಿ ಈ ವಿಚಾರ ಇದೆ. ನಾವು ಕೆಲ ಜನ ಸೇರಿ ನಿರ್ಧಾರ ಮಾಡಬೇಕಾಗಿದೆ. ವೈಭವದಿಂದ ಇದ್ದ ಸಿರಿಗೆರೆ ಮಠಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸ್ವಾಮೀಜಿ ನಾನೇ ಇರುತ್ತೇನೆ ಎಂದು ಹಠ ಮಾಡಿದರೆ ಸಿರಿಗೆರೆ ಹಾಗೂ ಸಾಣಿಹಳ್ಳಿ ಸ್ವಾಮೀಜಿಗಳ ಬದಲಾಗಲಿ. ಉತ್ತರಾಧಿಕಾರಿಗಳನ್ನ ಮಾಡಲಿ ಎಂದು ಹೇಳಿದ್ದಾರೆ.

ಮಠಕ್ಕೆ ನೂತನ ಪೀಠಾಧಿಪತಿ ಆಗಬೇಕು: ಇದಕ್ಕೆ ನಾನು ಹೋರಾಟ ಮಾಡಲು ಸಿದ್ದ ಎಂದ ಬಿಸಿ ಪಾಟೀಲ್

ಸಭೆಯಲ್ಲಿ ಮಾಜಿ ಸಚಿವ ಬಿಸಿ ಪಾಟೀಲ್​ ಮಾತನಾಡಿ, ನಾವು ನಡೆಸಲು ಬಂದವರು ಮಠದ ವಿರೋಧಿಗಳಲ್ಲ. ಮಠದಲ್ಲಿ ನಡೆಯುತ್ತಿರುವ ವ್ಯವಹಾರದ ಬಗ್ಗೆ ಧ್ವನಿ ಎತ್ತದಿದ್ದರೇ ಮಠ ಹಾಳಾಗಿ ಹೋಗುತ್ತದೆ. ಸಿರಿಗೆರೆ ಮಠ ಶಿಸ್ತಿಗೆ ಹೆಸರಾಗಿತ್ತು. ಈಗ ಬೇರೆಯವರು ನಮಗೆ ಬಂದು ಬುದ್ದಿ ಹೇಳುವ ಸ್ಥಿತಿ ಬಂದಿದೆ. ಮೊದಲು ಗುರುಗೆ ಹೆದರಿ ಶಿಷ್ಯರು ಇರುತ್ತಿದ್ದರು. ಆದರೆ ಸಿರಿಗೆರೆ ಮಠದ ಸ್ವಾಮೀಜಿ ಭಕ್ತರನ್ನ ಹೆದರಿಸುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಕೊಟ್ಟೂರು ತರಳಬಾಳು ಹುಣ್ಣಿಮೆ: ಈಗ ಕುರುಕ್ಷೇತ್ರ ಧರ್ಮ ಕ್ಷೇತ್ರ ಆಗಿದೆ ಎಂದ ಶಿವಾಚಾರ್ಯ ಶ್ರೀ

ಸಾಧು ಲಿಂಗಾಯತ ಸಮಾಜದ ಅಧ್ಯಕ್ಷರು ರೆಸಾರ್ಟ್ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮಠದ ಆಸ್ತಿ ತಿನ್ನಲು ಬಹಳ ಜನ ಇದ್ದಾರೆ. ಅವರೇ ಸ್ವಾಮೀಜಿ ಪರ ಇದ್ದಾರೆ. ನಾನು ಈ ಹಿಂದೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದಾಗ ಸಾಣಿಹಳ್ಳಿ ಮಠದ ಕಾರ್ಯಕ್ರಮಕ್ಕೆ ಹೋಗಿದ್ದೆ. ಸಾಣಿಹಳ್ಳಿ ಮಠದ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾಯಿತು. ಸಿರಿಗೆರೆ ಸ್ವಾಮೀಜಿ ನಮ್ಮ ಯಾವುದೇ ಕಾರ್ಯಕ್ರಮಕ್ಕೆ ಕರೆದಿಲ್ಲ. ಮಠಕ್ಕೆ ನೂತನ ಪೀಠಾಧಿಪತಿ ಆಗಬೇಕು. ಸಂಘದ ಬೈಲಾ ತಿದ್ದುಪಡಿ ಸರಿ ಮಾಡಬೇಕು. ಇದಕ್ಕೆ ನಾನು ಹೋರಾಟ ಮಾಡಲು ಸಿದ್ದ ಎಂದು ಹೇಳಿದ್ದಾರೆ.

ತಕ್ಷಣಕ್ಕೆ ಮುಂದಿನ ಪೀಠಾಧಿಪತಿ ನೇಮಕ ಆಗಬೇಕು: ಅಣಬೇರು ರಾಜಣ್ಣ 

ಹಿರಿಯ ಮುಖಂಡ ಅಣಬೇರು ರಾಜಣ್ಣ ಪ್ರತಿಕ್ರಿಯಿಸಿದ್ದು, ತಕ್ಷಣಕ್ಕೆ ಮುಂದಿನ ಪೀಠಾಧಿಪತಿ ನೇಮಕ ಆಗಬೇಕು. ಸಾಧು ಲಿಂಗಾಯತ ಸಮಾಜದ ಸಿರಿಗೆರೆ ತರಳುಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಠದಲ್ಲಿ ಬೇಕಾದವನ್ನ ಸಂಘಕ್ಕೆ ಸೇರಿಸಿದ್ದಾರೆ. ಕೆಲ ಗುಂಡಾಗಳನ್ನ ಸೇರಿಸಿಕೊಂಡಿದ್ದಾರೆ. ಸ್ವಾಮೀಜಿಗಳು ತಕ್ಷಣಕ್ಕೆ ಹೊಸ ಪೀಠಾಧಿಪತಿ ಮಾಡಬೇಕು. ಮಠದ ಸಂಘದ ಬೈಲಾ ಬದಲಿಸಿದ್ದಾರೆ. ಇದು ಸರಿಯಾಗಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು