ಗಣಿನಾಡು ಬಳ್ಳಾರಿಯಲ್ಲಿ ಕೊರೊನಾಗೆ ಮೊದಲ ಬಲಿ
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಬಳ್ಳಾರಿ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 61 ವರ್ಷದ ಸೋಂಕಿತ ವೃದ್ಧ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇವರು ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಉಸಿರಾಟ ಸಮಸ್ಯೆ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇವರನ್ನು ಆಸ್ಪತ್ರೆಗೆ ದಾಖಲಿಸಿ, ಕೊವಿಡ್-19 ಟೆಸ್ಟ್ ಮಾಡಲಾಗಿತ್ತು. ಕೊರೊನಾ ಇರುವುದು ದೃಢವಾದ ನಂತರ ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ […]
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಬಳ್ಳಾರಿ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 61 ವರ್ಷದ ಸೋಂಕಿತ ವೃದ್ಧ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇವರು ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಉಸಿರಾಟ ಸಮಸ್ಯೆ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇವರನ್ನು ಆಸ್ಪತ್ರೆಗೆ ದಾಖಲಿಸಿ, ಕೊವಿಡ್-19 ಟೆಸ್ಟ್ ಮಾಡಲಾಗಿತ್ತು. ಕೊರೊನಾ ಇರುವುದು ದೃಢವಾದ ನಂತರ ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊವಿಡ್ ಆಸ್ಪತ್ರೆಯಲ್ಲಿ ವೃದ್ಧ ಮೃತಪಟ್ಟಿದ್ದಾರೆ.
Published On - 8:03 am, Tue, 19 May 20