AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ: ಗುಡ್ಡಗಾಡು ಪ್ರದೇಶಕ್ಕೆ ಹೋಗದಂತೆ ಜನರಲ್ಲಿ ಮನವಿ

ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ: ಗುಡ್ಡಗಾಡು ಪ್ರದೇಶಕ್ಕೆ ಹೋಗದಂತೆ ಜನರಲ್ಲಿ ಮನವಿ

ಶಿವಕುಮಾರ್ ಪತ್ತಾರ್
| Edited By: |

Updated on: Aug 23, 2026 | 10:43 PM

Share

ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹುಲಿ ಪ್ರತ್ಯಕ್ಷವಾಗಿದೆ. ಗಂಗಾವತಿ ತಾಲೂಕಿನ ತೇಂಬ ಮತ್ತು ಕೊಪ್ಪಳ ತಾಲೂಕಿನ ಬಸಾಪುರ ಬಳಿ ಅರಣ್ಯ ಸಿಬ್ಬಂದಿ ಕ್ಯಾಮರಾದಲ್ಲಿ ಹುಲಿ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಗುಡ್ಡಗಾಡು ಪ್ರದೇಶಗಳಿಗೆ ಹೋಗದಂತೆ ಮನವಿ ಮಾಡಲಾಗಿದೆ. ಇದು ಜಿಲ್ಲೆಯಲ್ಲಿ ವನ್ಯಜೀವಿಗಳ ಹೊಸ ಉಪಸ್ಥಿತಿಯನ್ನು ಸೂಚಿಸುತ್ತದೆ.

ಕೊಪ್ಪಳ, ಆಗಸ್ಟ್​ 23: ಇಷ್ಟು ದಿನ ಕೇವಲ ಚಿರತೆಗಳ ಹಾವಳಿಯಿಂದ ಆತಂಕದಲ್ಲಿದ್ದ ಕೊಪ್ಪಳ ಜಿಲ್ಲೆಯಲ್ಲಿ ಇದೀಗ ಮೊಟ್ಟಮೊದಲ ಬಾರಿಗೆ ಹುಲಿ ಪ್ರತ್ಯಕ್ಷವಾಗಿದ್ದು, ಇಡೀ ಜಿಲ್ಲೆಯ ಜನತೆಯಲ್ಲಿ ತೀವ್ರ ಆತಂಕ ಹುಟ್ಟಿಸಿದೆ. ಗಂಗಾವತಿ ತಾಲೂಕಿನ ಆನೆಗೊಂದಿ ಸಮೀಪದ ತೇಂಬ ಗ್ರಾಮದ ಹೊರವಲಯ ಹಾಗೂ ಕೊಪ್ಪಳ ತಾಲೂಕಿನ ಬಸಾಪುರ ಹೊರವಲಯದ ಗುಡ್ಡಗಾಡು ಪ್ರದೇಶದಲ್ಲಿ ಹುಲಿ ಸಂಚರಿಸುತ್ತಿರುವ ದೃಶ್ಯಗಳು ಅರಣ್ಯ ಇಲಾಖೆಯ ಸಿಬ್ಬಂದಿಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈವರೆಗೆ ಆನೆಗೊಂದಿ ಭಾಗದಲ್ಲಿ ಚಿರತೆಗಳು ಮಾತ್ರ ಕಾಣಿಸಿಕೊಳ್ಳುತ್ತಿದ್ದವು, ಆದರೆ ಇದೇ ಮೊದಲ ಬಾರಿಗೆ ಹುಲಿಯ ಹೆಜ್ಜೆಗುರುತು ಹಾಗೂ ದೃಶ್ಯಗಳು ಪತ್ತೆಯಾಗಿರುವುದು ಕೊಪ್ಪಳ ಮತ್ತು ಗಂಗಾವತಿ ತಾಲೂಕಿನ ಗಡಿ ಭಾಗದ ಜನರನ್ನು ಆತಂಕದ ಕೂಪಕ್ಕೆ ತಳ್ಳಿದೆ. ಹುಲಿಯ ಚಲನವಲನ ದೃಢಪಡುತ್ತಿದ್ದಂತೆ ತಕ್ಷಣವೇ ಅಲರ್ಟ್ ಆಗಿರುವ ಅರಣ್ಯ ಇಲಾಖಾಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟು ನಿಗಾ ವಹಿಸಿದ್ದು, ಸಾರ್ವಜನಿಕರು ಹಾಗೂ ರೈತರು ಯಾವುದೇ ಕಾರಣಕ್ಕೂ ಒಬ್ಬಂಟಿಯಾಗಿ ಗುಡ್ಡಗಾಡು ಹಾಗೂ ನಿರ್ಜನ ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us