ಶಾಂತಿಯುತವಾಗಿ ನಡೆದ ಮೊದಲೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ

|

Updated on: Dec 22, 2020 | 9:58 PM

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಎರಡು ಹಂತದಲ್ಲಿ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿತ್ತು.  ಮಂಗಳವಾರ ಮೊದಲ ಹಂತದ ಮತದಾನ ನಡೆದರೆ, ಡಿಸೆಂಬರ್ 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.

ಶಾಂತಿಯುತವಾಗಿ ನಡೆದ ಮೊದಲೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಇಂದು ಶಾಂತಿಯುತವಾಗಿ ನಡೆಯಿತು. ಒಟ್ಟು 43,238 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 1,17,383 ಅಭ್ಯರ್ಥಿಗಳು ಕಣದಲ್ಲಿದ್ದರು.

ಮುಂಜಾನೆ ಏಳು ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿತು.  ಕೊರೊನಾ ವೈರಸ್​ ಪ್ರಕರಣಗಳು ಇನ್ನೂ ಜೀವಂತವಾಗಿರುವುದರಿಂದ ಮತಗಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್​ ಧರಿಸುವುದು ಕಡ್ಡಾಯವಾಗಿತ್ತು. ಇನ್ನು, ಕರೊನಾ ಪಾಸಿಟಿವ್​ ಇರುವ ವ್ಯಕ್ತಿಗಳಿಗೆ ಕೊನೆಯ ಒಂದು ಗಂಟೆ ಅವಧಿಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಡಿಸೆಂಬರ್ 27ಕ್ಕೆ ಎರಡನೇ ಹಂತ
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಎರಡು ಹಂತದಲ್ಲಿ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿತ್ತು.  ಮಂಗಳವಾರ ಮೊದಲ ಹಂತದ ಮತದಾನ ನಡೆದರೆ, ಡಿಸೆಂಬರ್ 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.

ಅವಿರೋಧ ಆಯ್ಕೆ
ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವ ಬಗ್ಗೆ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಹೀಗಾಗಿ ನಾಳೆ 43,238 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ.

ಗ್ರಾ.ಪಂ. ಚುನಾವಣಾ ಕಣದಲ್ಲಿ BE, MBA ಪದವೀಧರರು.. ಅಭ್ಯರ್ಥಿಗಳಾಗಲು ಉದ್ಯೋಗವನ್ನೇ ತೊರೆದರು..