ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೇರಿ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರಮುಖ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಮುಖ್ಯ ಆಯುಕ್ತರಾಗಿದ್ದ ಮಹೇಶ್ವರ ರಾವ್ ಎಂ. ಅವರು ಸಹ ವರ್ಗಾವಣೆಗೊಂಡಿದ್ದಾರೆ. ಇನ್ನುಳಿದಂತೆ ಯಾವೆಲ್ಲಾ ಐಎಎಸ್ ಅಧಿಕಾರಿಗಳು ಎಲ್ಲಿಂದ ಎಲ್ಲಿಗೆ ವರ್ಗಾವಣೆಯಾಗಿದ್ದರೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರು, ನವೆಂಬರ್ 26: ಕರ್ನಾಟಕದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವರ್ಹಾವಣೆ ಮುಂದುವರೆದಿದೆ. ಮೊನ್ನೇ ಅಷ್ಟೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ, ರಾಜ್ಯ ಸರ್ಕಾರ ಇಂದು (ನವೆಂಬರ್ 26) 4 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮತ್ತು ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಆದೇಶ ಹೊರಡಿಸಿದೆ. ಇದರಲ್ಲಿ ಪ್ರಮುಖವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಮುಖ್ಯ ಆಯುಕ್ತರಾಗಿದ್ದ ಮಹೇಶ್ವರ ರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅಂಜುಮ್ ಪರ್ವೇಜ್ ಅವರಿಗೆ ಕಂದಾಯ ಮತ್ತು ಲೋಕೋಪಯೋಗಿ ಹೆಚ್ಚುವರಿ ಹೊಣೆ, ರಾಜೇಂದರ್ ಕುಮಾರ್ ಕಟಾರಿಯಾ ಅವರಿಗೆ ಗೃಹ ಇಲಾಖೆ ಹಾಗೂ ಮಹೇಶ್ವರ ರಾವ್ ಅವರಿಗೆ ಅರಣ್ಯ-ಪರಿಸರ ಇಲಾಖೆಯ ಹೆಚ್ಚುವರಿ ಪ್ರಭಾರ ನೀಡಲಾಗಿದೆ. ಜೊತೆಗೆ ಕೃಷ್ಣ ಬಾಜಪೈ ಕೆಎಟಿ ಅಧ್ಯಕ್ಷರಾಗಿ ಹಾಗೂ ಡಾ. ಗಿರೀಶ್ ಬಡೋಲೆ, ಅಪರ್ಣಾ ರಮೇಶ್ ಅವರಿಗೆ ಪ್ರಮುಖ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಮಹೇಶ್ವರ್ ರಾವ್ ಅವರನ್ನೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ಮುಂದುವರೆಸಲಾಗಿತ್ತು. ಹೀಗಾಗಿ ಉವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎನ್ನಿಸಿಕೊಂಡಿದ್ದರು. ಇದಕ್ಕೂ ಮುನ್ನ ಎಂ ಮಹೇಶ್ವರ್ ರಾವ್ ಅವರು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ನ ಎಂಡಿ ಆಗಿದ್ದರು.
ಯಾರು ಎಲ್ಲಿಂದ ಎಲ್ಲಿ ವರ್ಗಾವಣೆ?
- ಅಂಜುಮ್ ಪರ್ವೇಜ್: ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ (ಎಸಿಎಸ್) ಅಂಜುಮ್ ಪರ್ವೇಜ್ ಅವರಿಗೆ ಅಪರ ಮುಖ್ಯ ಕಾರ್ಯದರ್ಶಿ (ಎಸಿಎಸ್), ಕಂದಾಯ ಇಲಾಖೆ ಜತೆಗೆ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
- ರಾಜೇಂದರ್ ಕುಮಾರ್ ಕಟಾರಿಯಾ: ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ಒಳಾಡಳಿತ (ಗೃಹ) ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ (ಎಸಿಎಸ್) ವರ್ಗಾವಣೆ ಮಾಡಲಾಗಿದೆ.
- ಮಹೇಶ್ವರ ರಾವ್ ಎಂ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾಗಿದ್ದ ಮಹೇಶ್ವರ ರಾವ್ ಎಂ ಅವರೂ ಸಹ ವರ್ಗಾವಣೆಗೊಂಡಿದ್ದು, ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
- ಡಾ. ಗಿರೀಶ್ ದಿಲೀಪ್ ಬಡೋಲೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು, ಇ-ಆಡಳಿತದ ಜೊತೆಗೆ (ವಿಜ್ಞಾನ ಮತ್ತು ತಂತ್ರಜ್ಞಾನ), ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ ಮತ್ತು ಟಿ ಇಲಾಖೆ (ಹೆಚ್ಚುವರಿ ಹೊಣೆಗಾರಿಕೆ).
- ಅಪರ್ಣಾ ರಮೇಶ್: ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ (ಸೇವಾ ವಿಶ್ಲೇಷಣಾ ವಿಭಾಗ) ಅಪರ್ಣಾ ರಮೇಶ್ ಅವರನ್ನು ವರ್ಗಾವಣೆ ಮಾಡಿದ್ದು, ಅವರಿಗೆ ನಿರ್ದೇಶಕರು (ಮಾಹಿತಿ ತಂತ್ರಜ್ಞಾನ – ಐಟಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) (ಹೆಚ್ಚುವರಿ ಹೊಣೆಗಾರಿಕೆ)
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:56 pm, Thu, 26 November 26




