ಕರ್ನಾಟಕದಲ್ಲಿ ಝೀಕಾ ವೈರಸ್ಗೆ ಮೊದಲ ಬಲಿ: ಶಿವಮೊಗ್ಗದಲ್ಲಿ ವೃದ್ಧ ಸಾವು
ಕಾರ್ನಾಟಕದಲ್ಲಿ ಝೀಕಾ ವೈರಸ್ ಆತಂಕ ಮೂಡಿಸಿರುವ ಹೊತ್ತಲ್ಲೇ ಮೊದಲ ಬಲಿಯಾಗಿದೆ. ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ 73 ವರ್ಷದ ವೃದ್ಧ ಬಲಿಯಾಗಿದ್ದಾರೆ. ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗುಣಮುಖರಾಗಿದ್ದಾರೆ.
ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ ಝೀಕಾ ವೈರಸ್ಗೆ (Zika virus) ಮೊದಲ ಬಲಿ ಆಗಿದೆ. ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ 73 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ (death). ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕೋಮಾರ್ಬಿಟಿಸ್ ಇದ್ದು, ಜೊತೆಗೆ ಝೀಕಾ ವೈರಸ್ ಅಟ್ಯಾಕ್ ಆಗಿತ್ತು. ಈ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಝೀಕಾ ವೈರಸ್ ಭೀತಿ ಎದುರಾಗಿದ್ದು, ಇದುವರೆಗೆ 9 ಝೀಕಾ ವೈರಸ್ ಕೇಸ್ ಪತ್ತೆ ಆಗಿವೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6, ಶಿವಮೊಗ್ಗ ಜಿಲ್ಲೆಯಲ್ಲಿ 3, ಝೀಕಾ ವೈರಸ್ ಕೇಸ್ ಪತ್ತೆ ಆಗಿವೆ. ಈ ಬಗ್ಗೆ ಝೀಕಾ ವೈರಸ್ ಸೋಂಕಿತರ ವಿವರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಐವರಲ್ಲಿ ಝೀಕಾ ವೈರಸ್ ಪತ್ತೆ, ಗರ್ಭಿಣಿಯರೇ ಎಚ್ಚರ!
ಶಿವಮೊಗ್ಗದಲ್ಲಿ ಝೀಕಾ ವೈರಸ್ ಸೋಂಕಿತ ಓರ್ವ ವೃದ್ಧ ಸಾವನ್ನಪ್ಪಿದ್ದು, ಮತ್ತಿಬ್ಬರು ಗುಣಮುಖರಾಗಿದ್ದಾರೆ. ಬಾಣಂತಿ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಜಿಗಣಿಯಲ್ಲಿ ಝೀಕಾ ಸೋಂಕಿತೆಗೆ ಹೆರಿಗೆಯಾಗಿದ್ದು ತಾಯಿ, ಮಗು ಆರೋಗ್ಯವಾಗಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಝೀಕಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಆರೋಗ್ಯ ಇಲಾಖೆ, ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ 3ಕಿ.ಮೀ ವ್ಯಾಪ್ತಿಯಲ್ಲಿ ಕಂಟೋನ್ಮೆಂಟ್ ಝೋನ್ ಘೋಷಣೆ ಮಾಡಿದೆ. ಝೀಕಾ ಸೋಂಕು ಸೊಳ್ಳೆಗಳಿಂದ ಹರಡಲಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಕ್ರಮ ವಹಿಸಲಾಗಿದೆ. ಫಾಗಿಂಗ್, ಲಾರ್ವ ನಾಶ ಸೇರಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ.
ಇದನ್ನೂ ಓದಿ: ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆ, ಆರೋಗ್ಯ ಇಲಾಖೆ ಫುಲ್ ಅಲರ್ಟ್
ಒಂದ್ಕಡೆ ಝೀಕಾ ಟೆನ್ಷನ್ ಕೊಡ್ತಿದ್ರೆ, ಮತ್ತೊಂದೆಡೆ ರಾಜ್ಯದಲ್ಲಿ ಮಂಕಿಪಾಕ್ಸ್ ಭೀತಿ ಕಾಡ್ತಿದೆ. ಮಂಕಿಪಾಕ್ಸ್ಗೆ 116 ದೇಶಗಳಲ್ಲಿ 500ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಹೆಲ್ತ್ ಎಮರ್ಜೆನ್ಸಿ ಷೋಷಣೆ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:16 pm, Mon, 19 August 24