ಕರ್ನಾಟಕ ಹೈಕೋರ್ಟ್‌ಗೆ ನೇಮಕಗೊಂಡ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು

ಹೈಕೋರ್ಟ್‌ಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಇಂದು (ಆಗಸ್ಟ್ 12) ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್‌ಗೆ ನೇಮಕಗೊಂಡ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 12, 2022 | 10:19 PM

ಬೆಂಗಳೂರು: ಹೈಕೋರ್ಟ್‌ಗೆ (High Court) ಐವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ (Central Government) ಇಂದು (ಆಗಸ್ಟ್ 12) ಅಧಿಸೂಚನೆ ಹೊರಡಿಸಿದೆ. ನ್ಯಾಯಮೂರ್ತಿ ಅನಿಲ್ ಭೀಮಸೇನ್ ಕಟ್ಟಿ, ನ್ಯಾಯಮೂರ್ತಿ ಗುರುಸಿದ್ದಯ್ಯ ಬಸವರಾಜ, ನ್ಯಾಯಮೂರ್ತಿ ಚಂದ್ರಶೇಖರ್ ಮೃತ್ಯುಂಜಯ ಜೋಶಿ ಮತ್ತು ನ್ಯಾಯಮೂರ್ತಿ ಉಮೇಶ್ ಮಂಜುನಾಥ್ ಭಟ್ ಅಡಿಗ ಮತ್ತು ನ್ಯಾಯಮೂರ್ತಿ ತಲಕಾಡ್ ಗಿರಿಗೌಡ ಶಿವಶಂಕರೇಗೌಡ ಅವರನ್ನು ನೇಮಕ ಮಾಡಲಾಗಿದೆ.

ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ  ಶಿಫಾರಸಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಹಾಲಿ ಹಿರಿಯ ಜಿಲ್ಲಾ ನ್ಯಾಯಾಧೀಶರಾಗಿದ್ದವರಿಗೆ ಪದೋನ್ನತಿ ಮಾಡಲಾಗಿದೆ.

ಜುಲೈ 20 ರಂದು ಕರ್ನಾಟಕ ಹೈಕೋರ್ಟ್​ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಜಿಲ್ಲಾ ಕೋರ್ಟ್ ಜಡ್ಜ್​ಗಳಿಗೆ ಹೈಕೋರ್ಟ್ ಜಡ್ಜ್​​ ಆಗಿ ಬಡ್ತಿ ಮಾಡಲು ಕೊಲಿಜಿಯಂ ಶಿಫಾರಸು ಮಾಡಿತ್ತು.

ಈ ಶಿಫಾರಸ್ಸಿನಲ್ಲಿ ಅನಿಲ್ ಭೀಮಸೇನ ಕತ್ತಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಷಿ, ಉಮೇಶ್ ಮಂಜುನಾಥ ಭಟ್ ಅಡಿಗ, ತಲಕಾಡು ಗಿರಿಗೌಡ ಶಿವಶಂಕರೇಗೌಡ‌ ಅವರನ್ನು ಹೈಕೋರ್ಟ್ ಜಡ್ಜ್ ಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು. ಕರ್ನಾಟಕದ ಹೈಕೋರ್ಟ್​​ಗೆ 62 ಜಡ್ಜ್ ಹುದ್ದೆಗಳು ಮಂಜೂರಾಗಿದ್ದವು. ಇಲ್ಲಿವರೆಗೆ 45 ಜಡ್ಜ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿತ್ತು. ಈಗ ಐದು ಮಂದಿ ಬಡ್ತಿ ಪಡೆದು ನೇಮಕವಾದ ಮೇಲೆ, ಜಡ್ಜ್​ಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.

‌ಕೇಂದ್ರ ಸರ್ಕಾರ ಕೊಲಿಜಿಯಂ ಶಿಫಾರಸು ಒಪ್ಪಿಕೊಂಡು ನ್ಯಾಯಾಧೀಶರ ‌ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಕೊಲಿಜಿಯಂ ಮೊದಲ ಬಾರಿ ಮಾಡಿದ ಶಿಫಾರಸನ್ನು ಕೇಂದ್ರ ಸರ್ಕಾರ ಒಪ್ಪದೇ ಮರುಪರಿಶೀಲನೆ ಮಾಡುವಂತೆ ‌ಕೊಲಿಜಿಯಂಗೆ ಕಳಿಸಬಹುದು. ಆದರೆ ಎರಡನೇ ಬಾರಿಯೂ ಕೊಲಿಜಿಯಂ‌ ಅದೇ ಹೆಸರುಗಳನ್ನು‌ ನೇಮಕಕ್ಕೆ ಶಿಫಾರಸು ಮಾಡಿದರೇ, ಆಗ ಕೇಂದ್ರ ಸರ್ಕಾರ ಕೊಲಿಜಿಯಂ ಶಿಫಾರಸುಗಳನ್ನು ಒಪ್ಪಿಕೊಳ್ಳಲೇಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Fri, 12 August 22

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ