AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ನ್ಯೂಸ್: ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಇವತ್ತಿಗೆ ಒಂದು ವರ್ಷದ ತುಂಬಿದೆ. ಕಳೆದ ವರ್ಷ ಇದೇ ದಿನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಸೇರಿದಂತೆ ಎಂಟು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಮೂಲಕ ಕಾಂಗ್ರೆಸ್ ಕರ್ನಾಟಕದ ಚುಕ್ಕಾಣಿ ಹಿಡಿದಿತ್ತು. ಹೀಗಾಗಿ ರಾಜ್ಯದ ಹಲವೆಡೆ ಕೈ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇನ್ನು ವರ್ಷದ ಸಂಭ್ರಮಾಚರಣೆಯಲ್ಲಿರು ಸಿದ್ದರಾಮಯ್ಯ ಇಂದು ಸುದ್ದಿಗೋಷ್ಠಿ ನಡೆಸಿ ಸರ್ಕಾರದ ಸಾಧನೆಗಳ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ಇನ್ನು ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿಗಳು ನಿಲ್ಲಲಿವೆ ಎನ್ನುವ ಸುದ್ದಿ ಮಧ್ಯ ಸಿಎಂ ಗ್ಯಾರಂಟಿಗಳಿಗೆ ಹಣ ಮೀಸಲಿಡುವ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.

ಗುಡ್​ನ್ಯೂಸ್: ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?
ರಮೇಶ್ ಬಿ. ಜವಳಗೇರಾ
|

Updated on: May 20, 2024 | 8:49 PM

Share

ಬೆಂಗಳೂರು, (ಮೇ 20): ಲೋಕಸಭಾ ಚುನಾವಣೆ ಫಲಿತಾಂಶದ (Loksabha Result 2024 )ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳು(five guarantee schemes)  ಸ್ಥಗಿತವಾಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ವಿಪಕ್ಷ ನಾಯಕರು ಸಹ ಭವಿಷ್ಯ ನುಡಿಯುತ್ತಿದ್ದಾರೆ. ಇದರ ಬೆನ್ನಲ್ಲೇ ಹಳ್ಳಿಗಳಲ್ಲಿ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುವ ಬಗ್ಗೆ ಚರ್ಚೆಗಳು ನಡೆದಿವೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರು ಸ್ಪಷ್ಟನೆ ನೀಡಿದ್ದು, ಯಾವುದೆ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ. ಯಥಾಸ್ಥಿತಿಯಲ್ಲಿ ಐದು ಗ್ಯಾರಂಟಿಗಳು ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಅದಕ್ಕಾಗಿ 5200 ಕೋಟಿ ರೂ. ಹಣ ಮೀಸಲಿಡುವುದಾಗಿಯೂ ಸಹ ಹೇಳಿದ್ದಾರೆ.

ವರ್ಷದ ಸಂಭ್ರಮಾಚರಣೆಯಲ್ಲಿರೋ ಸಿಎಂ ಸಿದ್ದರಾಮಯ್ಯ ಇಂದು(ಮೇ 20) ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಸರ್ಕಾರದ ಸಾಧನೆಗಳ ಬಗ್ಗೆ ಸಂತಸ ಹಂಚಿಕೊಂಡ್ರು. ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಅನುಷ್ಠಾನಕ್ಕೆ ತಂದಿದ್ದೇವೆ. ಈ ವರ್ಷ ಗ್ಯಾರಂಟಿಗಾಗಿ 36 ಸಾವಿರ ಕೋಟಿ ಖರ್ಚು ಮಾಡಿದ್ದು, ಗ್ಯಾರಂಟಿಗಳಿಗೆ ಇದಕ್ಕಿಂತ ಹೆಚ್ಚು ಹಣ ಕೊಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಮಧ್ಯವರ್ತಿಗಳಿಲ್ಲದೆ ಫಲಾನುಭವಿಗಳಿಗೆ ತಲುಪಿದ 5 ಗ್ಯಾರೆಂಟಿ: 1 ವರ್ಷದ ಸಾಧನೆ ಬಿಚ್ಚಿಟ್ಟ ಸಿದ್ದರಾಮಯ್ಯ

ಮುಂದಿನ ವರ್ಷಕ್ಕೆ ಅಂದರೆ 2024-25ಕ್ಕೆ ಗ್ಯಾರಂಟಿ ಯೋಜನೆಗಳಿಗಾಗಿ ಬರೋಬ್ಬರಿ‌ 52 ಸಾವಿರ ಕೋಟಿ ರೂ. ಮೀಸಲಿಡಲಿದ್ದೇವೆ, ಇದರ ಗಾತ್ರ ಮುಂದಿನ ವರ್ಷಕ್ಕೆ ಇನ್ನೂ ಜಾಸ್ತಿ ಆಗಬಹದು. ಅಂದಾಜು ಮಾಡಿಕೊಂಡು‌ ಬಜೆಟ್ ನಲ್ಲಿ ಹಣ ಇಡುತ್ತೇವೆ. ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಗ್ಯಾರಂಟಿಗಳು ಸ್ಥಗಿತವಾಗುತ್ತವೇ ಎಂಬುದು ಬಿಜೆಪಿಯ ಅಪ್ಪಟ ಸುಳ್ಳು ಎಂದರು.

ಗ್ಯಾರಂಟಿ ಯೋಜನೆಗೆ ಈವರೆಗೆ 44,816 ಕೋಟಿ ರೂ. ವೆಚ್ಚ

ಕಾಂಗ್ರೆಸ್ ಸರ್ಕಾರ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗೆ ಈವರೆಗೆ 44,816 ಕೋಟಿ ರೂ. ವೆಚ್ಚವಾಗಿದೆ. ಯಾವ ಯೋಜನೆಗೆ ಎಷ್ಟು ವೆಚ್ಚವಾಗಿದೆ ಎನ್ನುವುದನ್ನು ನೋಡುವುದಾದರೆ, ಗೃಹಲಕ್ಷ್ಮಿ(ಪ್ರತಿ ಮನೆ ಯಜಮಾನಿಗೆ 2000 ರೂ) 23,098 ಕೋಟಿ ರೂ. ವೆಚ್ಚ , ಗೃಹಜ್ಯೋತಿ (ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಫ್ರೀ) 10,207 ಕೋಟಿ ರೂ., ಶಕ್ತಿ ಯೋಜನೆ(ಮಹಿಳೆಯರಿಗೆ ಉಚಿವ ಬಸ್ ಪ್ರಯಾಣ) 4,054 ಕೋಟಿ ರೂ. ವೆಚ್ಚ (211.5 ಕೋಟಿ ಟ್ರಿಪ್ ಗಳಲ್ಲಿ ಮಹಿಳೆಯರು‌ ಸರ್ಕಾರಿ‌ಬಸ್ ನಲ್ಲಿ‌ ಸಂಚರಿಸಿದ್ದಾರೆ), ಯುವನಿಧಿ 93 ಕೋಟಿ ರೂಪಾಯಿ ವೆಚ್ಚ, ಅನ್ನಭಾಗ್ಯ 7,364 ಕೋಟಿ ರೂ. ವೆಚ್ಚವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ