ಮನೆ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್; ಐವರ ಸಾವು.. ಹಲವರ ಸ್ಥಿತಿ ಗಂಭೀರ

ಕೇರಳದ ಕಾಸರಗೋಡು ಜಿಲ್ಲೆಯ ಕಲ್ಲಪ್ಪಳ್ಳಿ ಬಳಿ ಈ ಅವಘಡ ಸಂಭವಿಸಿದ್ದು, ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ ಬಸ್ ತೆರಳುತ್ತಿತ್ತು. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮನೆ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್; ಐವರ ಸಾವು.. ಹಲವರ ಸ್ಥಿತಿ ಗಂಭೀರ
ಮನೆಯ ಮೇಲೆ ಉರುಳಿಬಿದ್ದ ಬಸ್​
Follow us
ಪೃಥ್ವಿಶಂಕರ
|

Updated on:Jan 03, 2021 | 4:33 PM

ಮಂಗಳೂರು: ಮನೆ ಮೇಲೆ ದಿಬ್ಬಣದ ಬಸ್ ಉರುಳಿ ಬಿದ್ದು ಐವರ ಸಾವನ್ನಪ್ಪಿರುವ ಘಟನೆ ಕರ್ನಾಟಕ-ಕೇರಳ ಗಡಿಭಾಗದ ಕಲ್ಲಪ್ಪಳ್ಳಿ ಬಳಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಕಲ್ಲಪ್ಪಳ್ಳಿ ಬಳಿ ಈ ಅವಘಡ ಸಂಭವಿಸಿದ್ದು, ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ ಬಸ್ ತೆರಳುತ್ತಿತ್ತು. ಮದುವೆ ದಿಬ್ಬಣದ ಬಸ್‌ನಲ್ಲಿ 63 ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಫಘಾತದಲ್ಲಿ ಮೃತರ ಸಂಖ್ಯೆ ಎಂಟಕ್ಕೇರಿಕೆ. ಅಫಘಾತದಲ್ಲಿ ಮೃತರ ಸಂಖ್ಯೆ ಎಂಟಕ್ಕೇರಿಕೆಯಾಗಿದ್ದು, ಹತ್ತಕ್ಕೂ ಹೆಚ್ಚು ಜನರ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲದೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಈ ದುರಂತದಲ್ಲಿ ರಾಜೇಶ್, ರವಿಚಂದ್ರ, ಆದರ್ಶ್, ಶ್ರೇಯಸ್, ಸುಮತಿ, ಶಶಿ, ಜಯಲಕ್ಷ್ಮಿ ಮೃತ ದುರ್ದೈವಿಗಳಾಗಿದ್ದಾರೆ. ಕೊಡಗಿನ ವರನ ಮನೆಯಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ, ಪುತ್ತೂರಿನ ಈಶ್ವರ ಮಂಗಲದ ವಧುವಿನ ಮನೆಯಿಂದ ದಿಬ್ಬಣದ ಬಸ್ ಹೊರಟ್ಟಿತ್ತು. ಸುಳ್ಯದ ಅಲೆಟ್ಟಿ ಮೂಲಕ ಕಲ್ಲಪಲ್ಲಿ ಪಾಣತ್ತೂರು ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್, ಪೆರಿಯಾರಂ ಘಾಟ್ ರಸ್ತೆಯಲ್ಲಿ ಚಾಲನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಬಸ್ ಮನೆಯ ಮೇಲೆ ಬಿದ್ದಿದೆ.

ಘಟನೆ ಬಗ್ಗೆ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

Published On - 3:23 pm, Sun, 3 January 21

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು