Karnataka Lockdown: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ 53 ವಿಮಾನಗಳ ಹಾರಾಟ ರದ್ದು

ಪ್ರಯಾಣಿಕರು ಇಲ್ಲದ ಕಾರಣ ವಿಮಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಬೆಂಗಳೂರಿಗೆ ಬರಬೇಕಿದ್ದ ಮತ್ತು ಬೆಂಗಳೂರಿನಿಂದ ಹೊರಡಬೇಕಿದ್ದ ಸುಮಾರು ಒಟ್ಟು 53 ವಿಮಾನಗಳ ಹಾರಾಟವನ್ನು ವಿಮಾನ ಸಂಸ್ಥೆಗಳು ರದ್ದುಗೊಳಿಸಿದೆ. ಕೊರೊನಾ ಲಾಕ್​ಡೌನ್​ ಭಯದಿಂದ ಜನರು ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುತ್ತಿಲ್ಲ.

Karnataka Lockdown: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ 53 ವಿಮಾನಗಳ ಹಾರಾಟ ರದ್ದು
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on:May 10, 2021 | 10:23 AM

ದೇವನಹಳ್ಳಿ: ರಾಜ್ಯ ಸರ್ಕಾರ ಇಂದಿನಿಂದ (ಮೇ 10) ರಾಜ್ಯದಲ್ಲಿ ಲಾಕ್​ಡೌನ್​ ಜಾರಿಗೊಳಿಸಿದೆ. ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮವನ್ನು ಪಾಲಿಸಬೇಕೆಂದು ತಿಳಿಸಿದೆ. ವಿಧಿಸಿದ ಕಠಿಣ ನಿಯಮಗಳ ಬಿಸಿ ಕೆಂಪೇಗೌಡ ಏರ್​ಪೋರ್ಟ್​ಗೂ ತಟ್ಟಿದೆ. ಕೊರೊನಾ ತಡೆಗಟ್ಟಲು ಲಾಕ್​ಡೌನ್​ ಕಠಿಣ ನಿಯಮಗಳು ಜಾರಿಯಾದ ಹಿನ್ನೆಲೆ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಮತ್ತು ಬೆಂಗಳೂರಿನಿಂದ ನಿರ್ಗಮಿಸುವ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಪ್ರಯಾಣಿಕರು ಇಲ್ಲದ ಕಾರಣ ವಿಮಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಬೆಂಗಳೂರಿಗೆ ಬರಬೇಕಿದ್ದ ಮತ್ತು ಬೆಂಗಳೂರಿನಿಂದ ಹೊರಡಬೇಕಿದ್ದ ಸುಮಾರು ಒಟ್ಟು 53 ವಿಮಾನಗಳ ಹಾರಾಟವನ್ನು ವಿಮಾನ ಸಂಸ್ಥೆಗಳು ರದ್ದುಗೊಳಿಸಿದೆ. ಕೊರೊನಾ ಲಾಕ್​ಡೌನ್​ ಭಯದಿಂದ ಜನರು ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುತ್ತಿಲ್ಲ. ಹೀಗಾಗಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಸದ್ಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ.

ಲಾಕ್​ಡೌನ್​ನಿಂದಾಗಿ‌ ನಗರ ಬಿಟ್ಟು ತಮ್ಮ ರಾಜ್ಯಗಳತ್ತ ಜನ ಮುಖ ಮಾಡುತ್ತಿರುವ ಸಂಖ್ಯೆ ಇಂದು ಮುಂದುವರೆದಿದೆ. ಜೊತೆಗೆ ನಗರದಲ್ಲಿ ಟ್ಯಾಕ್ಸಿ ಕ್ಯಾಬ್​ಗಳು ಸಿಗುತ್ತೋ ಇಲ್ಲವೂ ಅಂತಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಿಕರು ಕಾಲಹರಣ ಮಾಡುತ್ತಿದ್ದು, ಮಧ್ಯಾಹ್ನದ ವಿಮಾನಗಳಿಗೂ ಬೆಳಗ್ಗೆಯೇ ಆಗಮಿಸಿದ್ದಾರೆ. ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ವಿಮಾನಗಳ ಮೂಲಕ ತಮ್ಮ ರಾಜ್ಯಗಳತ್ತ ಜನ ಗುಳೆ ಹೊರಟಿದ್ದಾರೆ.

ಕೊರೊನಾ ಕರ್ಫ್ಯೂ ವೇಳೆಯೂ ರದ್ದಾಗಿದ್ದ ವಿಮಾನಗಳ ಹಾರಾಟ ಕೊರೊನಾ ಸೋಂಕನ್ನು ತಡೆಗಟ್ಟುವ ಹಿನ್ನೆಲೆ ರಾಜ್ಯ ಸರ್ಕಾರ ಏಪ್ರಿಲ್ 24 ರಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ಈ ಕಾರಣ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 15ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿತ್ತು.

ಇದನ್ನೂ ಓದಿ

Karnataka Lockdown: ನೆಪ ಹೇಳಿದ ತಪ್ಪಿಗೆ ಒಂದು ಗೊನೆ ಬಾಳೆಹಣ್ಣು ತೆಗೆದುಕೊಂಡು ಹೋದ ಚಿಕ್ಕಮಗಳೂರು ವ್ಯಕ್ತಿ

Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು

(Flights to Kempegowda International Airport have been cancelled)

Published On - 9:13 am, Mon, 10 May 21

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!