AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳು ರದ್ದು

ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವ ಹಿನ್ನೆಲೆ ಹೊರ ರಾಜ್ಯ ಮತ್ತು ದೇಶಗಳಿಂದ ಬರಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ಅನುಗುಣವಾಗಿ ವಿಮಾನಗಳ ಹಾರಾಟ ನಡೆಸಲಿದ್ದು, ವೀಕೆಂಡ್ ಕರ್ಪ್ಯೂನಿಂದ ಕೊನೆ ಕ್ಷಣದಲ್ಲಿ ವಿಮಾನವನ್ನು ಕ್ಯಾನ್ಸಲ್ ಮಾಡಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳು ರದ್ದು
ಕೆಂಪೇಗೌಡ ವಿಮಾನ ನಿಲ್ದಾಣ
sandhya thejappa
|

Updated on: Apr 24, 2021 | 8:59 AM

Share

ದೇವನಹಳ್ಳಿ: ಕೊರೊನಾ ಸೋಂಕನ್ನು ತಡೆಗಟ್ಟುವ ಹಿನ್ನೆಲೆ ರಾಜ್ಯ ಸರ್ಕಾರ ಜಾರಿಗೊಳಿಸಿದ ವೀಕೆಂಡ್ ಕರ್ಫ್ಯೂ ಇಂದಿನಿಂದ ಆರಂಭವಾಗಿದೆ. ಅಗತ್ಯ ವಸ್ತುಗಳನ್ನು ಖರೀದಿಸಲು ಸರ್ಕಾರ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ಅವಕಾಶ ನೀಡಿದೆ. ಆದರೆ ಕೆಲವೆಡೆ ಕೊರೊನಾ ಸೋಂಕಿನ ಭೀತಿಯಿಲ್ಲದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಇದು ಒಂದು ಕಡೆಯಾದರೆ ಇನ್ನೊಂದು ಕಡೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 15ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವ ಹಿನ್ನೆಲೆ ಹೊರ ರಾಜ್ಯ ಮತ್ತು ದೇಶಗಳಿಂದ ಬರಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ಅನುಗುಣವಾಗಿ ವಿಮಾನಗಳ ಹಾರಾಟ ನಡೆಸಲಿದ್ದು, ವೀಕೆಂಡ್ ಕರ್ಪ್ಯೂನಿಂದ ಕೊನೆ ಕ್ಷಣದಲ್ಲಿ ವಿಮಾನವನ್ನು ಕ್ಯಾನ್ಸಲ್ ಮಾಡಲಾಗಿದೆ. ವಿಮಾನಕ್ಕೆ ರಾತ್ರಿಯಿಂದ ವೇಟಿಂಗ್ ಇಂದು ಬೆಳಗ್ಗೆ ಸಿಗಲ್ಲವೆಂದು ತಿಳಿದು ನಿನ್ನೆ ರಾತ್ರಿಯಿಂದ ಪ್ರಯಾಣಿಕರು ವಿಮಾನಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ರಾತ್ರಿಯೇ ಏರ್ಪೋರ್ಟ್ಗೆ ಆಗಮಿಸಿದ್ದರು. ಬಂದ ಪ್ರಯಾಣಿಕರು ಕುಳಿತ್ತಿದ್ದ ಕುರ್ಚಿಯ ಮೇಲೆ ನಿದ್ರೆಗೆ ಜಾರಿದ್ದರು.

ಇದನ್ನೂ ಓದಿ

ಬೆಂಗಳೂರಿನಲ್ಲಿ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಸೋಂಕಿತರು; ತುಮಕೂರಿಗೆ ಎರಡನೇ ಸ್ಥಾನ

ರಾತ್ರಿ ಮಲಗುವಾಗ ಎರಡು ಲವಂಗ ತಿಂದರೆ ಅನಾರೋಗ್ಯ ಓಡುತ್ತದೆ ಬಹುದೂರ!

(Flights to Kempegowda International Airport have been cancelled)