AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಪರಿಸ್ಥಿತಿ ಪ್ರಧಾನಿಗೆ ವಿವರಿಸಿ ನೆರವು ಕೋರಿದ್ದೇವೆ: ಬೊಮ್ಮಾಯಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಎರಡು ಗಂಟೆಗಳ ಕಾಲ ವಿಡಿಯೊ–ಕಾನ್ಫರೆನ್ಸಿಂಗ್ ನಡೆಸಿದ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್ ಅಶೋಕ ಅವರು, ನೆರೆಯಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಸಾವುನೋವು, ಬೆಳೆಹಾನಿ, ಮನೆ ಮತ್ತು ಗುಡ್ಡ ಕುಸಿತ ಮುಂತಾದವುಗಳ ಬಗ್ಗೆ ಪ್ರಧಾನಿ ಅವರೊಂದಿಗೆ ಚರ್ಚಿಸಿ ನೆರವು ಒದಗಿಸುವಂತೆ ಕೋರಲಾಯಿತೆಂದು ಹೇಳಿದರು. ರಾಜ್ಯಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಮನವಿ ಸಲ್ಲಿಸಿರುವುದಾಗಿ ಹೇಳಿದ ಬೊಮ್ಮಾಯಿ, “ ಪಶ್ಚಿಮ ಘಟ್ಟಗಳಲ್ಲಿ ಭೂಸ್ಥಿತಿ ಅಧ್ಯಯನ […]

ನೆರೆ ಪರಿಸ್ಥಿತಿ ಪ್ರಧಾನಿಗೆ ವಿವರಿಸಿ ನೆರವು ಕೋರಿದ್ದೇವೆ: ಬೊಮ್ಮಾಯಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 10, 2020 | 3:44 PM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಎರಡು ಗಂಟೆಗಳ ಕಾಲ ವಿಡಿಯೊ–ಕಾನ್ಫರೆನ್ಸಿಂಗ್ ನಡೆಸಿದ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್ ಅಶೋಕ ಅವರು, ನೆರೆಯಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಸಾವುನೋವು, ಬೆಳೆಹಾನಿ, ಮನೆ ಮತ್ತು ಗುಡ್ಡ ಕುಸಿತ ಮುಂತಾದವುಗಳ ಬಗ್ಗೆ ಪ್ರಧಾನಿ ಅವರೊಂದಿಗೆ ಚರ್ಚಿಸಿ ನೆರವು ಒದಗಿಸುವಂತೆ ಕೋರಲಾಯಿತೆಂದು ಹೇಳಿದರು.

ರಾಜ್ಯಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಮನವಿ ಸಲ್ಲಿಸಿರುವುದಾಗಿ ಹೇಳಿದ ಬೊಮ್ಮಾಯಿ, “ ಪಶ್ಚಿಮ ಘಟ್ಟಗಳಲ್ಲಿ ಭೂಸ್ಥಿತಿ ಅಧ್ಯಯನ ನಡೆಸುವ ವ್ಯವಸ್ಥೆ ಮಾಡಬೇಕು ಮತ್ತು ಅಂತರಾಜ್ಯ ನೆರೆ ಮುನ್ಸೂಚನೆ, ಮುನ್ನೆಚ್ಚರಿಕೆ ಹಾಗೂ ಕೂಡಲೇ ಸ್ಪಂದಿಸಿ ನೆರವು (Interstate Flood Forecasting, Warning and Response) ಒದಗಿಸುವಂಥ ತಂಡವನ್ನು ರಚಿಸಬೇಕೆಂದು ಕೋರಲಾಗಿದೆ,” ಎಂದರು.

ಭೂಕುಸಿತ ನಿರ್ವಹಣೆ ಕೇಂದ್ರ ಸ್ಥಾಪಿಸುವ ಅವಶ್ಯಕತೆ ಕುರಿತು ಪ್ರಧಾನಿ ಮೋದಿ ಅವರಿಗೆ ಮನಗಾಣಿಸಲಾಗಿದೆ ಮತ್ತು ಕರ್ನಾಟಕಕ್ಕೆ ಕನಿಷ್ಠ ಎಂಟು ಶಾಶ್ವತ ಪ್ರಕೃತಿ ವಿಕೋಪ ರಕ್ಷಣಾ ತಂಡಗಳ (ಎನ್‌ಡಿಆರ್‌ಎಫ್‌) ಅಗತ್ಯವಿದೆ ಎಂದು ತಿಳಿಸಲಾಗಿದೆಯೆಂದು ಬೊಮ್ಮಾಯಿ ಹೇಳಿದರು.

“ಸಮುದ್ರಕೊರೆತ ತಡೆ ಹಾಗೂ ನದಿ ಸವಕಳಿ ತಪ್ಪಿಸಲು ಸಹ ವಿಶೇಷ ವ್ಯವಸ್ಥೆ ಕಲ್ಪಿಸಲು ಪ್ರಧಾನಿಗಳಿಗೆ ಮನವಿ ಮಾಡಲಾಗಿದೆ ಮತ್ತು ಪ್ರಕೃತಿ ವಿಕೋಪ ನಿಧಿಯಿಂದ ಪರಿಹಾರ ರೂಪದಲ್ಲಿ ರೂ 4,000 ಕೋಟಿ ಬಿಡುಗಡೆ ಮಾಡಬೇಕೆಂದು ವಿನಂತಿಸಿಕೊಳ್ಳಲಾಗಿದೆ,” ಎಂದು ಬೊಮ್ಮಾಯಿ ಹೇಳಿದರು. ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡವಾಗಿ ರೂ 395 ಕೋಡಿ ಕೂಡಲೇ ಒದಗಿಸಲು

ಕೇಳಲಾಗಿದೆ ಎಂದು ಸಹ ಬೊಮ್ಮಾಯಿ ಹೇಳಿದರು.

ನೆರೆಯಿಂದ 56 ತಾಲೂಕುಗಳು ಪ್ರಭಾವಕ್ಕೊಳಗಾಗಿದ್ದು, 885 ಗ್ರಾಮ ಮತ್ತು ಹೋಬಳಿಗಳು ಜಲಾವೃತಗೊಂಡಿವೆ, ಸುಮಾರು 3,000 ಮನೆಗಳು ಕುಸಿದಿವೆ, 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಆಗಿದೆ ಮತ್ತು 3,500 ಕಿಲೋಮೀಟರ್​ಗಳಷ್ಟು ರಸ್ತೆ ಹಾಳಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಏತನ್ಮಧ್ಯೆ, ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಕೆಣಕಿದ ಅಶೋಕ್, 2009ರಲ್ಲಿ ರಾಜ್ಯ ಪ್ರಕೃತಿ ವಿಕೋಪಕ್ಕೆ ಸಿಲುಕಿ ತತ್ತರಿಸಿದಾಗ, ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ ರೂ 17,500 ಕೋಟಿ ಪರಿಹಾರ ಕೇಳಿತ್ತು, ಆದರೆ ಕೇಂದ್ರದಲ್ಲಿ ಸರಕಾರ ನಡೆಸುತ್ತಿದ್ದ ಕಾಂಗ್ರೆಸ್ ಕೇವಲ ರೂ 500 ಕೋಡಿ ನೀಡಿ ಕೈತೊಳೆದುಕೊಂಡಿತ್ತು ಎಂದರು. ಮುಂದುವರಿದು ಹೇಳಿದ ಸಚಿವರು, ಮುಂಬರುವ ವರ್ಷಗಳಲ್ಲಿ ನೆರೆ ಗಂಡಾಂತರ ಎದುರಿಸಬಹುದಾದ ಜಿಲ್ಲೆಗಳಲ್ಲಿ ಶಾಶ್ವತ ವಿಪತ್ತು ನಿರ್ವಹಣಾ ಭವನ ನಿರ್ಮಾಣ ನಿರ್ಮಿಸುವುದಾಗಿ ತಿಳಿದರು.

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ