AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಭೀತಿ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಕೆಆರ್​ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿರುವುದರಿಂದ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ ಎದುರಾಗಿದೆ. ಪರಿಣಾಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಅತ್ತ ಬೆಳಗಾವಿಯಲ್ಲಿಯೂ ಸಪ್ತ ನದಿಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ.

ಪ್ರವಾಹ ಭೀತಿ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ಪ್ರಶಾಂತ್​ ಬಿ.
| Updated By: Ganapathi Sharma|

Updated on: Jul 25, 2024 | 10:51 AM

Share

ಮಂಡ್ಯ, ಜುಲೈ 25: ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ನದಿ ತಟದ ಪ್ರವಾಸಿ ತಾಣಗಳಿಗೂ ಮುಳುಗಡೆ ಆತಂಕ ಎದುರಾಗಿದೆ. ಪರಿಣಾಮವಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೆಆರ್‌ಎಸ್ ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ.

ಪಕ್ಷಿಗಳ ಆಶ್ರಯತಾಣ ನಡುಗಡ್ಡೆಗಳು ಕೂಡ ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದ್ರೆ ವಾಕಿಂಗ್ ಪಾಥ್​​ಗೂ ನೀರು ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ರಂಗನತಿಟ್ಟು ಸಿಬ್ಬಂದಿ ಗೇಟ್ ಬಳಿಯೇ ಪ್ರವಾಸಿಗರನ್ನು ತಡೆದು ವಾಪಸ್ ಕಳುಹಿಸುತ್ತಿದ್ದಾರೆ.

ಕೆಆರ್​ಎಸ್​ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದಿರುವ ಬಗ್ಗೆ ಬುಧವಾರ ವರದಿಯಾಗಿತ್ತು.

ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯೂ ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್​ಎಸ್ ಜಲಾಶಯ ಎರಡು ವರ್ಷಗಳ ನಂತರ ಸಂಪೂರ್ಣವಾಗಿ ಭರ್ತಿ ಆಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ತಲುಪಿದ ಸಪ್ತ ನದಿಗಳು

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಸಪ್ತ ನದಿಗಳು ಅಪಾಯದ ಮಟ್ಟ ತಲುಪಿವೆ. ಪರಿಣಾಮವಾಗಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹದ ಭೀತಿ ಆರಂಭವಾಗಿದೆ. ಘಟಪ್ರಭಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಗೋಕಾಕ್ ನಗರಕ್ಕೆ ಜಲ ದಿಗ್ಬಂಧನದ ಭೀತಿ ಎದುರಾಗಿದೆ.

ಇದನ್ನೂ ಓದಿ: KRS ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಘಟಪ್ರಭಾದಿಂದ 10 ಸಾವಿರ ಕ್ಯೂಸೆಕ್, ಹಿರಣ್ಯಕೇಶಿಯಿಂದ 18 ಸಾವಿರ ಕ್ಯೂಸೆಕ್, ಮಾರ್ಕಂಡೇಯ ನದಿಯಿಂದ 6ಸಾವಿರ ಕ್ಯೂಸೆಕ್ ಹಾಗೂ ಬಳ್ಳಾರಿ ನಾಲಾದಿಂದ 2 ಸಾವಿರ ಕ್ಯೂಸೆಕ್ ನೀರು ಹರಿಯಬಿಡಲಾಗುತ್ತಿದೆ. ಗೋಕಾಕ್ ಬಳಿಯ ಲೋಳಸೂರು ಬ್ರಿಡ್ಜ್ ಬಳಿ 36 ಸಾವಿರ ಕ್ಯೂಸೆಕ್ ನೀರು ಹರಿವು ಇದೆ. ಗೋಕಾಕ್, ಮೂಡಲಗಿ ಹಾಗೂ ಬಾಗಲಕೋಟೆಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?