AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ 8ರಿಂದ ಲಾಲ್ ಬಾಗ್​ನಲ್ಲಿ ಫ್ಲವರ್ ಶೋ: ಈ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬೆಂಗಳೂರಿನ ಲಾಲ್‌ಬಾಗ್​ನಲ್ಲಿ ಆಗಸ್ಟ್ 8 ರಿಂದ ಆಗಸ್ಟ್ 19 ರವರೆಗೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಲಕ್ಷಾಂತರ ಜನ ಭೇಟಿ ನಿರೀಕ್ಷೆ ಹಿನ್ನೆಲೆ ಸುಗಮ‌ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.

ಆ 8ರಿಂದ ಲಾಲ್ ಬಾಗ್​ನಲ್ಲಿ ಫ್ಲವರ್ ಶೋ: ಈ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ
ಆ.8ರಿಂದ ಲಾಲ್ ಬಾಗ್​ನಲ್ಲಿ ಫವರ್ ಶೋ: ಈ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ
ಶಿವಪ್ರಸಾದ್​ ಬಿ.
| Edited By: |

Updated on:Aug 07, 2024 | 6:12 PM

Share

ಬೆಂಗಳೂರು, ಆಗಸ್ಟ್​ 07: ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ (Independence Day) ಪ್ರಯುಕ್ತ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜೀವನ ಗಾಥೆ ಥೀಮ್​ನಲ್ಲಿ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ (flower show) ನಡೆಯಲಿದೆ. ನಾಳೆಯಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ. ಹೀಗಾಗಿ ಫ್ಲವರ್ ಶೋಗೆ ಬರುವ ಜನರಿಗೆ ವಾಹನ ನಿಲುಗಡೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.

ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಾಧ್ಯವಾದಷ್ಟು ಮಟ್ಟಿಗೆ ಬಿಎಂಟಿಸಿ ಬಸ್, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಮನವಿ ಮಾಡಿದ್ದಾರೆ.

ವಾಹನಗಳ ನಿಲುಗಡೆಗೆ ಅವಕಾಶ

  • ಮರಿಗೌಡ ರಸ್ತೆಯ ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ಬೈಕ್ ಪಾರ್ಕಿಂಗ್​​
  • ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ ವ್ಯವಸ್ಥೆ
  • ಮರಿಗೌಡ ರಸ್ತೆಯ ಹಾಪ್ ಕಾಮ್ಸ್​​ನಲ್ಲಿ ಬೈಕ್ ಹಾಗೂ ಕಾರು ನಿಲುಗಡೆ
  • ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಹಾಗೂ ಕಾರು ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಪಾರ್ಕಿಂಗ್ ನಿಷೇಧ

  • ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್​ವರೆಗೆ ರಸ್ತೆಯ ಎರಡು ಬದಿ
  • ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್​ವರೆಗೆ ರಸ್ತೆಯ ಎರಡು ಬದಿ
  • ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಭಾಗ್ ಮುಖ್ಯದ್ವಾರದ ವರೆಗೆ
  • ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್​ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್​ವರೆಗೆ
  • ಬಿಟಿಎಸ್ ಬಸ್ ನಿಲ್ದಾಣ, ಬಿಎಂಟಿಸಿ ಜಂಕ್ಷನ್​ನಿಂದ ರಸ್ತೆಯ ಎರಡು ಬದಿಗಳಲ್ಲಿ
  • ಕೃಂಬಿಗಲ್ ರಸ್ತೆಯ ಎರಡು ಕಡೆಗಳಲ್ಲಿ
  • ಲಾಲ್‌ಬಾಗ್ ವೆಸ್ಟ್ಗೇಟ್‌ನಿಂದ ಆರ್.ವಿ. ಟೀರ್ಸ್​ ಕಾಲೇಜ್‌ವರೆಗೆ
  • ಆರ್‌ವಿ ಟೀರ್ಸ್​ ಕಾಲೇಜ್‌ನಿಂದ ಅಶೋಕ ಪಿಲ್ಲರ್​ವರೆಗೆ
  • ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ

ಇದನ್ನೂ ಓದಿ: ಲಾಲ್‌ಬಾಗ್​ನಲ್ಲಿ ಆ.8ರಿಂದ ಸ್ವಾತಂತ್ರೋತ್ಸವ ಫ್ಲವರ್‌ ಶೋ: ಯಾವ ಥೀಮ್‌? ಟಿಕೆಟ್ ಎಷ್ಟು? ಏನೆಲ್ಲಾ ವಿಶೇಷ?

ಆಗಸ್ಟ್​ 8ರಂದು ಸಿಎಂ ಸಿದ್ದರಾಮಯ್ಯ ಲಾಲ್ ಬಾಗ್​ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಈ ಬಾರಿಯ ಫ್ಲವರ್ ಶೋಗೆ ವಿದೇಶಿ ಹಾಗೂ ಸ್ವದೇಶಿ ಹೂಗಳನ್ನ ಬಳಕೆ ಮಾಡಿಕೊಳ್ಳಲಾಗಿದೆ. ಒಟ್ಟು 34 ಲಕ್ಷಗಳ ಹೂಗಳಿಂದ ಫ್ಲವರ್ ಶೋ ಕಂಗೊಳಿಸಲಿದ್ದು, ಆಗಸ್ಟ್ 19 ರವರೆಗೆ ಇರಲಿದೆ.

ರಾಜ್ಯದ ಮತ್ತಷ್ಟು ಸದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:57 pm, Wed, 7 August 24

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು