ಬೆಂಗಳೂರು, ಆಗಸ್ಟ್ 07: ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ (Independence Day) ಪ್ರಯುಕ್ತ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜೀವನ ಗಾಥೆ ಥೀಮ್ನಲ್ಲಿ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ (flower show) ನಡೆಯಲಿದೆ. ನಾಳೆಯಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ. ಹೀಗಾಗಿ ಫ್ಲವರ್ ಶೋಗೆ ಬರುವ ಜನರಿಗೆ ವಾಹನ ನಿಲುಗಡೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.
ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಾಧ್ಯವಾದಷ್ಟು ಮಟ್ಟಿಗೆ ಬಿಎಂಟಿಸಿ ಬಸ್, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಲಾಲ್ಬಾಗ್ನಲ್ಲಿ ಆ.8ರಿಂದ ಸ್ವಾತಂತ್ರೋತ್ಸವ ಫ್ಲವರ್ ಶೋ: ಯಾವ ಥೀಮ್? ಟಿಕೆಟ್ ಎಷ್ಟು? ಏನೆಲ್ಲಾ ವಿಶೇಷ?
ಆಗಸ್ಟ್ 8ರಂದು ಸಿಎಂ ಸಿದ್ದರಾಮಯ್ಯ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಈ ಬಾರಿಯ ಫ್ಲವರ್ ಶೋಗೆ ವಿದೇಶಿ ಹಾಗೂ ಸ್ವದೇಶಿ ಹೂಗಳನ್ನ ಬಳಕೆ ಮಾಡಿಕೊಳ್ಳಲಾಗಿದೆ. ಒಟ್ಟು 34 ಲಕ್ಷಗಳ ಹೂಗಳಿಂದ ಫ್ಲವರ್ ಶೋ ಕಂಗೊಳಿಸಲಿದ್ದು, ಆಗಸ್ಟ್ 19 ರವರೆಗೆ ಇರಲಿದೆ.
ರಾಜ್ಯದ ಮತ್ತಷ್ಟು ಸದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:57 pm, Wed, 7 August 24