ಮೈಸೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನಲೆ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಜೊತೆಗೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​ನಲ್ಲಿ ವಿಶೇಷ ತಂಡ ರಚನೆ ಮಾಡಿ, ತಪಾಸಣೆ ಮಾಡಲಾಗುತ್ತಿದೆ.

ಮೈಸೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ಹಂದಿ ಜ್ವರ ಹಿನ್ನಲೆ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 22, 2023 | 3:34 PM

ಮೈಸೂರು, ಆ.22: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ (African swine fever) ಪತ್ತೆಯಾದ ಹಿನ್ನಲೆ ಇದೀಗ ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದು ಹಂದಿಗಳಲ್ಲಿ ಕಾಣಿಸಿಕೊಳ್ಳುವ ರೋಗವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಜೊತೆಗೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​ನಲ್ಲಿ ವಿಶೇಷ ತಂಡ ರಚನೆ ಮಾಡಿ, ತಪಾಸಣೆ ಮಾಡಲಾಗುತ್ತಿದೆ. ಇದೀಗ ಸ್ಥಳಕ್ಕೆ ಹೆಚ್.ಡಿ ಕೋಟೆ ತಹಶೀಲ್ದಾರ್ ಸಣ್ಣ ರಾಮಪ್ಪ, ತಾಲೂಕು ಆರೋಗ್ಯಧಿಕಾರಿ ರವಿಕುಮಾರ್ ಹಾಗೂ ಪಶು ಇಲಾಖೆ ನಿರ್ದೇಶಕ ಪ್ರಸನ್ನ ಅವರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಂದಿಗಳನ್ನು ಎರಡು ಫಾರ್ಮ್‌ಗಳಲ್ಲಿ ಕೊಲ್ಲಲು ಆದೇಶ ನೀಡಿದ್ದ ಜಿಲ್ಲಾಧಿಕಾರಿಗಳು

ಹೌದು, ಆ.19 ರಂದು ಕೇರಳದ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ವರದಿಯಾಗಿದ್ದು, ಈ ಬಗ್ಗೆ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಟ್ಟಿಸಿದ್ದರು. ನಂತರ, ಜಿಲ್ಲಾಧಿಕಾರಿಗಳು ಮಲೆಯಂಪಾಡಿಯಲ್ಲಿರುವ ಮತ್ತು 10 ಕಿಮೀ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಕೊಲ್ಲಲು ಆದೇಶ ನೀಡಿದ್ದು, ಅದನ್ನು ಶಿಷ್ಟಾಚಾರದ ಪ್ರಕಾರ ಶವಗಳನ್ನು ಹೂಳಲು ಹೇಳಿದ್ದರು.

ಇದನ್ನೂ ಓದಿ:Big News: ಜಾರ್ಖಂಡ್​​ನ ರಾಂಚಿಯಲ್ಲಿ ಆಫ್ರಿಕನ್ ಹಂದಿಜ್ವರದಿಂದ 800 ಹಂದಿಗಳು ಸಾವು; ರೇವಾದಲ್ಲಿ 2000 ಹಂದಿಗಳು ಬಲಿ

ಹಂದಿ ಮಾಂಸದ ವಿತರಣೆ, ಮಾರಾಟ ಮತ್ತು ಸಾಗಣೆಯನ್ನು ಮೂರು ತಿಂಗಳವರೆಗೆ ನಿಷೇಧ

ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಲಾಗಿದ್ದು, ಮತ್ತು 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ಎಂದು ಅಧಿಕೃತ ಮೂಲಗಳು ತಿಳಿಸಿತ್ತು. ಈ ಪ್ರದೇಶದಲ್ಲಿ ಹಂದಿ ಮಾಂಸದ ವಿತರಣೆ ಮತ್ತು ಮಾರಾಟ, ಸಾಗಣೆಯನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us