Big News: ಬೈಕ್, ಟಿವಿ, ಫ್ರಿಡ್ಜ್ ಇದ್ದವರ BPL ಕಾರ್ಡ್​ ರದ್ದು ಮಾಡಲ್ಲ: ಸ್ಪಷ್ಟನೆ ನೀಡಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತೆ

ಅಂತಹ ಯಾವುದೇ ಆದೇಶ ಇಲಾಖೆಯಿಂದ ಹೊರಡಿಸಿಲ್ಲ. ಬೈಕ್, ಟಿವಿ, ಫ್ರಿಡ್ಜ್ ಇದ್ದವರ BPL ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

Big News: ಬೈಕ್, ಟಿವಿ, ಫ್ರಿಡ್ಜ್ ಇದ್ದವರ BPL ಕಾರ್ಡ್​ ರದ್ದು ಮಾಡಲ್ಲ: ಸ್ಪಷ್ಟನೆ ನೀಡಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತೆ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Sep 04, 2021 | 3:47 PM

ಬೆಂಗಳೂರು: ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಬಿಪಿಎಲ್ ಕಾರ್ಡ್​ಗಳನ್ನು ರದ್ದು ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತೆ ಶಮ್ಲಾ ಇಕ್ಬಾಲ್ ಸ್ಪಷ್ಟೀಕರಣ ನೀಡಿದ್ದಾರೆ. ಈ ಕುರಿತು ವದಂತಿಗಳನ್ನು ಜನ ನಂಬುವುದು ಬೇಡ. BPL ಕಾರ್ಡ್ ರದ್ದು ಮಾಡುವ ಸುದ್ದಿಗಳು ಆಧಾರ ರಹಿತ. ಅಂತಹ ಯಾವುದೇ ಆದೇಶ ಇಲಾಖೆಯಿಂದ ಹೊರಡಿಸಿಲ್ಲ. ಬೈಕ್, ಟಿವಿ, ಫ್ರಿಡ್ಜ್ ಇದ್ದವರ BPL ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಈಮುನ್ನ ಬಿಪಿಎಲ್ ಪಡಿತರು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಈಮುನ್ನ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ್ ಕತ್ತಿ ಕಾರ್ಯಕ್ರಮವೊಂದರಲ್ಲಿ ಬಿಪಿಎಲ್​ ಕಾರ್ಡ್​ ಹೊಂದಿದ್ದವರು ಟಿವಿ,ಬೈಕ್ ಅಥವಾ ಪ್ರಿಡ್ಜ್ ಹೊಂದಿದ್ದಲ್ಲಿ ಬಿಪಿಎಲ್ ಕಾರ್ಡ್​ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದರು. ಅವರ ಈ ಹೇಳಿಕೆ ನಂತರ ರಾಜ್ಯದ ಅಲ್ಲಲ್ಲಿ ಬಿಪಿಎಲ್ ಕಾರ್ಡ್ ರದ್ದುಗೊಂಡ ಸುದ್ದಿಗಳು ಸಹ ವರದಿಯಾಗಿದ್ದವು.

ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನು ರದ್ದುಗೊಳಿಸುವ ಭರದಲ್ಲಿ ರಾಜ್ಯ ಸರ್ಕಾರ ಆತುರದ ಹೆಜ್ಜೆಯಿಟ್ಟಿದೆಯೇ ಎಂಬ ಅನುಮಾನಗಳು ಸಹ ಮೂಡಿದ್ದವು. ಹೀಗಾಗಿ ಬಿಪಿಎಲ್​ ಕಾರ್ಡ್ ಇರುವ ಟಿವಿ,ಬೈಕ್ ಅಥವಾ ಪ್ರಿಡ್ಜ್ ಹೊಂದಿದ್ದವರಿಗೆ ಆತಂಕ ಕಾರಣವಾಗಿತ್ತು. ಆದರೆ ಇದೀಗ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತೆ ಶಮ್ಲಾ ಇಕ್ಬಾಲ್ ನೀಡಿರುವ ಸ್ಪಷ್ಟೀಕರಣ ಎಲ್ಲ ಗುಮಾನಿಗಳಿಗೂ ತೆರೆ ಎಳೆದಿದೆ.

(Food and Civil Supplies Department clarifies one who have Bike TV or Fridge BPL cards is not been canceled) 

Published On - 3:37 pm, Sat, 4 September 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ